ಬ್ರೇಕಿಂಗ್ ನ್ಯೂಸ್
14-05-24 05:40 pm HK News Desk ದೇಶ - ವಿದೇಶ
ಉತ್ತರಪ್ರದೇಶ, ಮೇ.14: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಅಭ್ಯರ್ಥಿಯಾಗಿ ತಮ್ಮ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಪ್ರಧಾನಿಯವರು ದಶಾಶ್ವಮೇಧ ಘಾಟ್‌ನಲ್ಲಿ ಐವರು ವೈದಿಕ ಆಚಾರ್ಯರ ಸಮ್ಮುಖದಲ್ಲಿ ಗಂಗಾಮಾತೆಗೆ ಪೂಜೆ ಸಲ್ಲಿಸಿದರು. ಇದಾದ ಬಳಿಕ ಪ್ರಧಾನಿ ಮೋದಿ ಕಾಲ ಭೈರವೇಶ್ವರ ದೇವಸ್ಥಾನದತ್ತ ತೆರಳಿದರು. ಕಾಲಭೈರವ ದೇಗುಲವನ್ನು ತಲುಪಿದ ನಂತರ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು. ಇಲ್ಲಿ ಪೂಜೆ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆಗಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಬಳಿಕ ಅಲ್ಲಿ ನಾಮಪತ್ರ ಸಲ್ಲಿಸಿದರು.
ಗಣೇಶ್ವರ್ ಶಾಸ್ತ್ರಿ ದ್ರಾವಿಡ್ ಎರಡನೇ ಸೂಚಕರಾಗಿದ್ದಾರೆ. ಬ್ರಾಹ್ಮಣ ಸಮುದಾಯದಿಂದ ಬಂದ ಗಣೇಶ್ವರ ಶಾಸ್ತ್ರಿ ದ್ರಾವಿಡ್ ಅವರು ರಾಮ ಮಂದಿರದ ಪ್ರತಿಷ್ಠಾಪನೆಗೆ ಮತ್ತು ವ್ಯಾಸ ಜೀ ಅವರ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ಶುಭ ಮುಹೂರ್ತವನ್ನು ನಿರ್ಧರಿಸಿದ್ದರು. ಅವರು ವಾರಣಾಸಿ ಲೋಕಸಭಾ ಕ್ಷೇತ್ರದ ದಕ್ಷಿಣ ವಿಧಾನಸಭೆಯಿಂದ ಬಂದವರು. ಲಾಲ್‌ಚಂದ್ ಕುಶ್ವಾಹ ಕ್ಯಾಂಟ್ ವಿಧಾನಸಭಾ ಕ್ಷೇತ್ರದಿಂದ ಬಂದು ಒಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದರೆ, ದಲಿತ ಸಮುದಾಯದಿಂದ ಬಂದ ಸಂಜಯ್ ಸೋಂಕರ್ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸೂಚಕರಾಗಿ ಬಂದಿದ್ದರು. ಅವರೂ ಪಕ್ಷದೊಂದಿಗೆ ಬಹಳ ಕಾಲದಿಂದ ನಂಟು ಹೊಂದಿದ್ದಾರೆ.
ಪ್ರಧಾನಮಂತ್ರಿಗಳ ಸೂಚಕರು ಬ್ರಾಹ್ಮಣ, ಒಬಿಸಿ ಮತ್ತು ದಲಿತ ವರ್ಗದವರಾಗಿದ್ದು, ಈ ಎಲ್ಲ ವರ್ಗದ ಮತದಾರರನ್ನು ಸೆಳೆಯುವ ಬಿಜೆಪಿಯ ಪ್ರಯತ್ನವಾಗಿಯೂ ನೋಡಲಾಗುತ್ತಿದೆ. ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಬ್ರಾಹ್ಮಣರು, 2.5 ಲಕ್ಷಕ್ಕೂ ಹೆಚ್ಚು ಒಬಿಸಿಗಳು, ಸುಮಾರು 1.25 ಲಕ್ಷ ದಲಿತ ಮತದಾರರಿರುವುದು ಗಮನಾರ್ಹ.
ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ಪಡೆ ವಾರಾಣಸಿಯ ಬನಾರಸ್ ಲೋಕೋಮೋಟಿವ್ ವರ್ಕ್‌ಶಾಪ್ ಅತಿಥಿ ಗೃಹದಿಂದ ಬೆಳಗ್ಗೆ 8:30 ಕ್ಕೆ ಹೊರಟು ನಿಗದಿತ ಮಾರ್ಗದ ಮೂಲಕ ಗಂಗಾ ಪೂಜೆಗಾಗಿ ದಶಾಶ್ವಮೇಧ ಘಾಟ್‌ಗೆ ತಲುಪಿತು. ಇಲ್ಲಿ ಪ್ರಧಾನಿ ಮೋದಿ ಅವರು ಗಂಗಾ ಮಾತೆಗೆ ಪೂಜೆ ಸಲ್ಲಿಸಿದರು. ಗಂಗಾಮಾತೆಯ ಆಶೀರ್ವಾದ ಪಡೆದ ನಂತರ ಪ್ರಧಾನಿ ಮೋದಿ ಇಲ್ಲಿಂದ ವಿಹಾರದ ಮೂಲಕ ಕಾಲ ಭೈರವ ದೇವಾಲಯಕ್ಕೆ ತೆರಳಿದರು. ಅಲ್ಲಿ ಪ್ರಧಾನಿ ಅವರು ಕಾಲ ಭೈರವ ದೇವಾಲಯದಲ್ಲಿ ಭೈರವ ಅಷ್ಟಕದೊಂದಿಗೆ ಪೂಜೆ ಸಲ್ಲಿಸಿದ್ದರು. ಬಾಬಾ ಕಾಲ ಭೈರವನ ಆರತಿಯ ನಂತರ ಅವರು ನಾಮಪತ್ರ ಸಲ್ಲಿಸಲು ತೆರಳಿದ್ದರು. ಪ್ರಧಾನಿ ಮೋದಿ ಅವರು ಡಿಎಂ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಅವರ ಜೊತೆ ಅರ್ಚಕರೊಬ್ಬರಿದ್ದರು.
ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸುವ ವೇಳೆ 12 ರಾಜ್ಯಗಳ ಸಿಎಂಗಳು ಸೇರಿದ್ದರು. ಇವರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ರಾಜಸ್ಥಾನ, ಅಸ್ಸೋಂ, ಹರಿಯಾಣ, ಗೋವಾ, ಸಿಕ್ಕೀಂ, ತ್ರಿಪುರಾ ಮುಖ್ಯಮಂತ್ರಿಗಳು ಸಹ ಭಾಗಿಯಾಗಿದ್ದರು. ಚಿರಾಗ್ ಪಾಸ್ವಾನ್ ಸೇರಿದಂತೆ ಹಲವು ನಾಯಕರು ಪ್ರಧಾನಿಯವರೊಂದಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಾಣಸಿಯಲ್ಲಿ (ಏಳನೇ ಹಂತ) ಜೂನ್ 1 ರಂದು ಮತದಾನ ನಡೆಯಲಿದೆ. ಈ ಬಾರಿಯೂ ವಾರಾಣಸಿಯಿಂದ ಗೆದ್ದು ಹ್ಯಾಟ್ರಿಕ್ ಗೆಲುವು ಸಾಧಿಸುವ ಭರವಸೆಯನ್ನು ಪ್ರಧಾನಿ ಮೋದಿ ಹೊಂದಿದ್ದಾರೆ. ಈ ಕ್ರಮದಲ್ಲಿ ಪ್ರಧಾನಿ ಮೋದಿ ಪರವಾಗಿ ಬಿಜೆಪಿಯ ಪದಾಧಿಕಾರಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಪಕ್ಷವೂ ಪ್ರಧಾನಿ ಮೋದಿ ವಿರುದ್ಧ ಪ್ರಬಲ ಅಭ್ಯರ್ಥಿಯಾಗಿರುವ ಅಜಯ್ ರಾಯ್ ಅವರನ್ನು ಕಣಕ್ಕಿಳಿಸಿದೆ. ಹೇಗಾದರೂ ಮಾಡಿ ವಾರಾಣಸಿಯಲ್ಲಿ ತನ್ನ ಶಕ್ತಿ ತೋರಿಸಲು ಕೈ ಪಕ್ಷ ತೀವ್ರ ಪ್ರಯತ್ನ ನಡೆಸುತ್ತಿದೆ.
Prime Minister Narendra Modi offers prayers at the Kaal Bhairav Temple in Varanasi ahead of filing his nomination for #LokSabhaElections2024 pic.twitter.com/3DicpOcTsC
— ANI (@ANI) May 14, 2024
Prime Minister Narendra Modi offered prayers at Dashashwamedh Ghat on the banks of the Ganges in Varanasi before filling his nomination from the Varanasi Lok Sabha seat today in Uttar Pradesh.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm