ಬ್ರೇಕಿಂಗ್ ನ್ಯೂಸ್
28-05-24 11:48 am HK News Desk ದೇಶ - ವಿದೇಶ
ನವದೆಹಲಿ, ಮೇ 28: ದೆಹಲಿಯಿಂದ ಬನಾರಸ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿಯಿಂದಾಗಿ ಸಂಚಲನ ಉಂಟಾಗಿತ್ತು. ಇಂಡಿಗೋ ವಿಮಾನ ಇಂದು ಬೆಳಗ್ಗೆ ದೆಹಲಿಯಿಂದ ಬನಾರಸ್ಗೆ ಟೇಕ್ ಆಫ್ ಆಗಬೇಕಿತ್ತು, ಆಗ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ತಿಳಿಯಿತು. ಇದಾದ ಬಳಿಕ ಐಜಿಐ ವಿಮಾನ ನಿಲ್ದಾಣದಲ್ಲಿ ತರಾತುರಿಯಲ್ಲಿ ವಿಮಾನದ ತುರ್ತು ತೆರವು ಕಾರ್ಯ ನಡೆಸಲಾಯಿತು.
ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ತಿಳಿದ ತಕ್ಷಣ ಪ್ರಯಾಣಿಕರು ಮತ್ತು ಸಿಬ್ಬಂದಿಗಳಲ್ಲಿ ಆತಂಕ ಮನೆ ಮಾಡಿದೆ. ಈ ಜನರು ವಿಮಾನ ನಿಲ್ದಾಣದಲ್ಲಿಯೇ ವಿಮಾನದ ತುರ್ತು ನಿರ್ಗಮನದಿಂದ ಹಾರಿ ಓಡಿಹೋಗಲು ಪ್ರಾರಂಭಿಸಿದರು. ವಿಮಾನದಲ್ಲಿ ಬಾಂಬ್ ಇದೆ ಎಂಬ ಮಾಹಿತಿ ಪಡೆದ ನಂತರ, ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು, ಅಲ್ಲಿ ಎಲ್ಲಾ ಪ್ರಯಾಣಿಕರ ತುರ್ತು ನಿರ್ಗಮನವನ್ನು ಮಾಡಲಾಯಿತು.
ಇಂಡಿಗೋ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ಬಂದ ತಕ್ಷಣ, ಏವಿಯೇಷನ್ ಸೆಕ್ಯುರಿಟಿ ಮತ್ತು ಬಾಂಬ್ ನಿಷ್ಕ್ರಿಯ ದಳ ತಕ್ಷಣ ಸ್ಥಳಕ್ಕೆ ತಲುಪಿತು. ಅದೇ ಸಮಯದಲ್ಲಿ, ದೆಹಲಿ ಅಗ್ನಿಶಾಮಕ ಸೇವೆ, ‘ಇಂದು ಮುಂಜಾನೆ 5:35 ಕ್ಕೆ, ದೆಹಲಿಯಿಂದ ವಾರಣಾಸಿಗೆ ಹೋಗುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಬಂದಿತು. ಎಲ್ಲ ಪ್ರಯಾಣಿಕರನ್ನು ತುರ್ತು ದ್ವಾರದ ಮೂಲಕ ಹೊರಗೆ ಕರೆದೊಯ್ಯಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ವಿಮಾನವನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದೆ.
ಈ ಬಗ್ಗೆ ಸಿಐಎಸ್ಎಫ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ವಿಮಾನದಲ್ಲಿ ಟಿಶ್ಯೂ ಪೇಪರ್ ಮೇಲೆ ಬಾಂಬ್ ಇಟ್ಟಿರುವ ಬಗ್ಗೆ ಬರೆದಿರುವುದು ಪತ್ತೆಯಾಗಿದೆ. ತನಿಖೆ ನಡೆಸಿದಾಗ ಅಂಥದ್ದೇನೂ ಇಲ್ಲ ಎಂಬುದು ಗೊತ್ತಾಯಿತು ಎಂದರು.
Passengers on a Varanasi-bound #IndiGo flight were evacuated through the emergency door at Delhi's airport after a bomb threat was reported on the flight. All passengers are safe and the flight is being inspected.#IndiGo | #bombthreat pic.twitter.com/cicBjCi4VJ
— All India Radio News (@airnewsalerts) May 28, 2024
A Varanasi-bound IndiGo flight on Tuesday received a bomb threat at the Delhi airport but nothing suspicious was found after thorough searches, officials said.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm