ಬ್ರೇಕಿಂಗ್ ನ್ಯೂಸ್
29-05-24 12:12 pm HK News Desk ದೇಶ - ವಿದೇಶ
ನವದೆಹಲಿ, ಮೇ 29: ಭಾರತದ ಜೊತೆ ಮಾಡಿಕೊಂಡಿದ್ದ 1999ರ ಲಾಹೋರ್ ಒಪ್ಪಂದವನ್ನು ಪಾಕಿಸ್ತಾನವೇ ಮುರಿದಿತ್ತು. ಅದು ನಮ್ಮ ಅತಿ ದೊಡ್ಡ ಪ್ರಮಾದ ಆಗಿತ್ತು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಬಹಿರಂಗ ಹೇಳಿಕೆ ನೀಡಿದ್ದಾರೆ. ಕಾರ್ಗಿಲ್ ಯುದ್ಧ ಜನರಲ್ ಫರ್ವೇಜ್ ಮುಷರಫ್ ಅವರ ಕುಕೃತ್ಯವಾಗಿತ್ತು ಎಂಬುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ.
ಪಾಕಿಸ್ತಾನ ಮುಸ್ಲಿಂ ಲೀಗ್ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಪ್ರಧಾನಿ ನವಾಜ್ ಷರೀಫ್ ಪಕ್ಷದ ಸಭೆಯಲ್ಲಿ ಈ ಹೇಳಿಕೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ಮೇ 28, 1998 ರಂದು ಪಾಕಿಸ್ತಾನ ಐದು ಅಣು ಬಾಂಬ್ ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಅಂದಿನ ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಲ್ಲಿಗೆ ಬಂದು ನಮ್ಮ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ನಾವು ಮಾತ್ರ ಆ ಒಪ್ಪಂದವನ್ನು ಮುರಿದಿದ್ದು ನಾವು ಮಾಡಿದ ಅತಿ ದೊಡ್ಡ ತಪ್ಪಾಗಿತ್ತು ಎಂದರು.

ಫೆಬ್ರವರಿ 21, 1999 ರಂದು ವೈರಿ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಭಾರತ ಲಾಹೋರ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ನೆರೆಹೊರ ರಾಷ್ಟ್ರಗಳ ನಡುವಿನ ಶಾಂತಿ ಒಪ್ಪಂದವು ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಉತ್ತೇಜಿಸಿತ್ತು. ಆದರೆ, ಕೆಲವು ತಿಂಗಳಲ್ಲೇ ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಗಡಿಯಲ್ಲಿ ಪಾಕಿಸ್ತಾನದ ಸೇನೆ ಮಾಡಿದ್ದ ಆಕ್ರಮಣವು ಎರಡು ರಾಷ್ಟ್ರಗಳ ನಡುವೆ ಕಾರ್ಗಿಲ್ ಯುದ್ಧಕ್ಕೆ ಕಾರಣವಾಗಿತ್ತು.
ಅಂದು ಪಾಕಿಸ್ತಾನ ಸೇನೆಯ ಜನರಲ್ ಆಗಿದ್ದ ಮುಷರಫ್ ದೇಶದ ಆಡಳಿತವನ್ನು ಕೈಗೆ ತೆಗೆದುಕೊಂಡು, ಕಾರ್ಗಿಲ್ ಮೂಲಕ ಪಾಕ್ ಸೇನೆಯನ್ನು ನುಗ್ಗಿಸಿ ಶಾಂತಿ ಒಪ್ಪಂದವನ್ನು ಮುರಿದಿದ್ದರು. ಆನಂತರ, ಭಾರತದ ಸೈನಿಕರು ಪ್ರತಿ ದಾಳಿ ನಡೆಸಿ ಯುದ್ಧವನ್ನು ಗೆದ್ದಿದ್ದರು. ಈ ಸಂರ್ಭದಲ್ಲಿ ನವಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿ ಆಗಿದ್ದರೂ ಅಧಿಕಾರದ ನಿಯಂತ್ರಣ ಮುಷರಫ್ ಕೈಲಿತ್ತು. ಈಗ ಪಾಕಿಸ್ತಾನದಲ್ಲಿ ಆರ್ಥಿಕತೆ ಪಾತಾಳಕ್ಕೆ ಹೋಗಿದ್ದು ಕೆಲವು ನಾಯಕರು ಭಾರತದ ಸ್ನೇಹ ಮುರಿದುಕೊಂಡಿದ್ದೇ ಆಪತ್ತಿಗೆ ಕಾರಣವಾಯಿತು ಎಂದು ಹೇಳುತ್ತಿರುವಾಗಲೇ ಹಳೆಯ ಪ್ರಮಾದವನ್ನು ಹೇಳಿಕೊಂಡು ನವಾಜ್ ಷರೀಫ್ ಹಲುಬಿದ್ದಾರೆ.
Pakistan's former Prime Minister Nawaz Sharif admitted on Tuesday that the country had "violated" the 1999 Lahore Declaration agreement with India, which was signed by him and then Indian Prime Minister Atal Bihari Vajpayee. Indirectly referring to the Kargil misadventure by General Pervez Musharraf, he said, "It was our fault."
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm