ಬ್ರೇಕಿಂಗ್ ನ್ಯೂಸ್
06-06-24 08:55 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 6: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಿ ದೊಡ್ಡ ಕುಸಿತ ಆಗಿಸಿದ್ದು ದೊಡ್ಡ ಹಗರಣ. ಅದಕ್ಕೆ ಎಕ್ಸಿಟ್ ಪೋಲ್ ಕೊಡುಗೆಯೂ ಇದೆ. ಮೋದಿ ಮತ್ತು ಅಮಿತ್ ಷಾ ಕಾರಣರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದರಿಂದ ದೇಶಾದ್ಯಂತ ಸಾಮಾನ್ಯ ಜನರ 30 ಲಕ್ಷ ಕೋಟಿ ರೂ. ನಷ್ಟವಾಗಿದ್ದು, ಇದರ ಬಗ್ಗೆ ಜಂಟಿ ಸದನ ತನಿಖೆ ನಡೆಯಬೇಕೆಂದು ಆಗ್ರಹಿಸಿದ್ದಾರೆ.
ಜೂನ್ 1ರಂದು ನಡೆದ ಮತದಾನೋತ್ತರ ಸಮೀಕ್ಷೆ ನಂತರ ಷೇರು ಮಾರುಕಟ್ಟೆಗಳು ಏರಿಕೆ ಕಂಡಿದ್ದವು. ಮೂರು ದಿನಗಳ ನಂತರ ಷೇರು ಮಾರುಕಟ್ಟೆ ಕುಸಿದು ಸೂಚ್ಯಂಕ ತಲೆಕೆಳಗಾಗಿತ್ತು. ಇದಕ್ಕೆ ಚುನಾವಣೋತ್ತರ ಸಮೀಕ್ಷೆಗಳೇ ಕಾರಣ. ಈ ಸಮೀಕ್ಷೆಗಳು ಸರಿಯಾಗಿಲ್ಲ ಎಂಬ ಮಾಹಿತಿ ಬಿಜೆಪಿ ನಾಯಕರಿಗೆ ಇತ್ತು ಎಂದು ರಾಹುಲ್ ಆರೋಪಿಸಿದ್ದಾರೆ.
ಮೋದಿ, ಗೃಹ ಸಚಿವ ಶಾ ಮತ್ತು ಎಕ್ಸಿಟ್ ಪೋಲ್ ನಡೆಸಿದವರ ವಿರುದ್ಧ ತನಿಖೆ ಬಯಸುತ್ತೇವೆ. ಚುನಾವಣೆ ಸಮಯದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವರು ಷೇರು ಮಾರುಕಟ್ಟೆಯ ಬಗ್ಗೆ ಪ್ರತಿಕ್ರಿಯಿಸಿರುವುದನ್ನು ನಾವು ಮೊದಲ ಬಾರಿಗೆ ಗಮನಿಸಿದ್ದೇವೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಅವರೇ ಪ್ರೇರಣೆ ನೀಡಿದ್ದರು ಎಂದರು.
ಪ್ರಧಾನಿ ಮತ್ತು ಗೃಹ ಸಚಿವರು ಜನರಿಗೆ ಹೂಡಿಕೆ ಸಲಹೆಯನ್ನು ಏಕೆ ನೀಡಿದರು ಪ್ರಶ್ನಿಸಿದ ರಾಹುಲ್ ಗಾಂಧಿ, ಎಕ್ಸಿಟ್ ಪೋಲ್ ಸಮೀಕ್ಷೆ ಸುಳ್ಳು ಎಂಬುದು ಬಿಜೆಪಿ ನಾಯಕರಿಗೆ ಮಾಹಿತಿ ಇತ್ತು. ಸ್ಟಾಕ್ ಮಾರುಕಟ್ಟೆಯ ಅತಿದೊಡ್ಡ ಹಗರಣದ ಬಗ್ಗೆ ನಾವು ಜೆಪಿಸಿ ತನಿಖೆಯನ್ನು ಬಯಸುತ್ತೇವೆ ಎಂದವರು ಹೇಳಿದರು.
ಬಿಜೆಪಿಯ ಉನ್ನತ ವ್ಯಕ್ತಿಗಳು ಈ ಷೇರು ಮಾರುಕಟ್ಟೆ ಹಗರಣ ನಡೆಸಿದ್ದಾರೆ ಮತ್ತು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಶಾ ಇದರಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
Congress MP-elect Rahul Gandhi on Thursday slammed the Modi government for its stock market crash "scam" and demanded a Joint Parliamentary Committee (JPC) probe into the June 4 crash. Addressing a press conference in the national capital, Rahul asked why Prime Minister Narendra Modi and Union Home Minister Amit Shah gave "specific" investment advice to the citizens investing in the stock market.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 04:02 pm
Mangalore Correspondent
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm