ಬ್ರೇಕಿಂಗ್ ನ್ಯೂಸ್
08-06-24 08:13 pm HK News Desk ದೇಶ - ವಿದೇಶ
ಲಕ್ನೋ, ಜೂನ್ 8: ಹಿಂದುಗಳನ್ನು ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮ್ ವ್ಯಕ್ತಿಯಂತೆ ವೇಷ ಹಾಕಿ ವಿಡಿಯೋ ಮಾಡಿ ಕೋಮು ವೈಷಮ್ಯಕ್ಕೆ ಸಂಚು ರೂಪಿಸಿದ ಘಟನೆ ಅಯೋಧ್ಯೆಯಲ್ಲಿ ನಡೆದಿದ್ದು ಆರೋಪಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನ ಧೀರೇಂದ್ರ ರಾಘವ್ ಎಂದು ಗುರುತಿಸಲಾಗಿದೆ.
ಮುಸ್ಲಿಮರ ರೀತಿ ಸ್ಕಲ್ ಕ್ಯಾಪ್ ಧರಿಸಿ ವ್ಯಕ್ತಿ ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೋ ಭಾರೀ ವೈರಲ್ ಆಗಿತ್ತು. ತನ್ನನ್ನು ಮುಸ್ಲಿಂ ವ್ಯಕ್ತಿ ಎಂದು ಹೇಳಿಕೊಂಡಿದ್ದಲ್ಲದೆ, ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದು ಎತ್ತಿಕಟ್ಟುವ ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ. ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದಿದ್ದರೆ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿದ್ದರು. ಒಬ್ಬ ನಾಯಕ ನಮಗೆ ಮಸೀದಿ ನಿರ್ಮಿಸಿ ಕೊಟ್ಟರೆ, ಅಂಥವರನ್ನು ನಾವು ಮರೆಯುವುದಿಲ್ಲ. ಆದರೆ ನೀವು ಮೋದಿ ಎಲ್ಲವನ್ನು ಮಾಡಿಕೊಟ್ಟರೂ ಮತ ಹಾಕಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದ.
ಚುನಾವಣೆಗೆ ಕೆಲ ತಿಂಗಳ ಹಿಂದೆ ರಾಮಮಂದಿರ ಉದ್ಘಾಟನೆಯಾಗಿದ್ದರೂ, ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಇದನ್ನು ದೃಢೀಕರಿಸುವಂತೆ ಕೋರಿ ಹಲವು ಮಂದಿ ಸಂದೇಹಗಳನ್ನು ವ್ಯಕ್ತಪಡಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಬಗ್ಗೆ ಶೋಧ ನಡೆಸಿದ ಪೊಲೀಸರು, ಧೀರೇಂದ್ರ ರಾಘವ್ ನನ್ನ ಬಂಧಿಸಿದ್ದಾರೆ
ಮುಸ್ಲಿಮರ ವೇಷ ಹಾಕಿ ಹಿಂದೂಗಳ ಮೇಲೆ ಎತ್ತಿಕಟ್ಟುವ ರೀತಿ ಟೀಕಿಸಿ ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.
An Agra Court on Friday sent Dhirendra Raghav to judicial custody for allegedly inciting communal tension after the local police detained him for making a video abusing the Hindu community. The man had made the video pretending to an extremist in traditional Muslim attire.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 04:02 pm
Mangalore Correspondent
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm