ಬ್ರೇಕಿಂಗ್ ನ್ಯೂಸ್
08-06-24 09:28 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 8: ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಪಟ್ಟಕ್ಕೇರಲಿದ್ದು, ಭಾನುವಾರ ಸಂಜೆ ಐತಿಹಾಸಿಕ ಸಮಾರಂಭಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಬಳಿಕ ಮೂರು ಬಾರಿ ಪ್ರಧಾನಿಯಾದ ದಾಖಲೆಯನ್ನು ಮೋದಿ ಈ ಮೂಲಕ ಸರಿಗಟ್ಟಲಿದ್ದಾರೆ.
ಐತಿಹಾಸಿಕ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ವಿವಿಧ ದೇಶಗಳ ಗಣ್ಯರು ಆಗಮಿಸಲಿದ್ದಾರೆ. ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಮಾರಿಷಸ್, ಭೂತಾನ್, ಸೀಶೆಲ್ಸ್ ದೇಶದ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ಶನಿವಾರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ದೆಹಲಿಗೆ ಆಗಮಿಸಿದ್ದಾರೆ.
ಸೀಶೆಲ್ ಉಪಾಧ್ಯಕ್ಷ ವಿನ್ಸೆಂಟ್ ಮಾರಿಟಾನ್ ಶನಿವಾರ ರಾತ್ರಿ ಆಗಮಿಸಲಿದ್ದಾರೆ. ಮಾರಿಷಸ್ ಪ್ರಧಾನಿ ಭಾನುವಾರ ಬೆಳಗ್ಗೆ ಆಗಮಿಸಲಿದ್ದಾರೆ. ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಭಾರತದ ಆಹ್ವಾನ ಸ್ವೀಕರಿಸಿದ್ದು, ಭಾನುವಾರ ಮಧ್ಯಾಹ್ನ ಆಗಮಿಸುವ ನಿರೀಕ್ಷೆಯಿದೆ. ಭೂತಾನ್ ಪ್ರಧಾನಿ ಶೇರಿಂಗ್ ತೋಗ್ಬೆ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರೂ ಭಾನುವಾರ ಬೆಳಗ್ಗೆ ಆಗಮಿಸುವುದನ್ನು ಖಚಿತಪಡಿಸಿದ್ದಾರೆ. ನೇಪಾಳ ಪ್ರಧಾನಿ ಪುಷ್ಪ ಕಮಲ್ ಧಮಾಲ್ ಅವರು ಭಾನುವಾರ ಸಂಜೆ ದೆಹಲಿಗೆ ಆಗಮಿಸಲಿದ್ದಾರೆ.
ನೆರೆಹೊರೆಯವರು ಫಸ್ಟ್ ಅನ್ನುವ ನೆಲೆಯಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಸಾರ್ಕ್ ನಾಯಕರು ಮೋದಿ ಮೂರನೇ ಬಾರಿಗೆ ಪ್ರಧಾನಿ ಸ್ಥಾನಕ್ಕೇರುವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಒಕ್ಕೂಟ 293 ಸ್ಥಾನಗಳನ್ನು ಪಡೆದು ಸರಕಾರ ರಚಿಸಲು ಮುಂದಾಗಿದೆ.
India has invited several leaders from neighbouring countries to attend the swearing-in ceremony of Narendra Modi, who is set to become the Prime Minister for a third consecutive term. The ceremony will take place on Sunday, June 9 at 7:15 pm at Rashtrapati Bhavan.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 12:54 pm
HK News Desk
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm