ಬ್ರೇಕಿಂಗ್ ನ್ಯೂಸ್
17-06-24 02:32 pm HK News Desk ದೇಶ - ವಿದೇಶ
ಡಾರ್ಜಿಲಿಂಗ್, ಜೂ 17: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಅಸ್ಸಾಂನ ಸಿಲ್ಚಾರ್ನಿಂದ ಕಲ್ಕತ್ತಾಗೆ ತೆರಳುತ್ತಿದ್ದ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ, ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹಾಗೂ 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ನ್ಯೂ ಜಲ್ಪೈಗುರಿಗೆ ಸಮೀಪವಿರುವ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು, ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದ್ದು, 15ಕ್ಕೂ ಹೆಚ್ಚು ಆಂಬ್ಯಲೆನ್ಸ್ಗಳು ಸ್ಥಳದಲ್ಲಿವೆ.

)

ಕಾಂಚನಜುಂಗಾ ಎಕ್ಸ್ಪ್ರೆಸ್ ಅಸ್ಸಾಂನ ಸಿಲ್ಚಾರ್ನಿಂದ ಕಲ್ಕತ್ತಾದ ಸೀಲ್ದಾ ಮಧ್ಯೆ ಚಲಿಸುತ್ತದೆ. ಸೀಲ್ದಾಗೆ ಬರುತ್ತಿದ್ದ ವೇಳೆ ಇಂದು ಬೆಳಗ್ಗೆ 8.45ರ ಸುಮಾರಿಗೆ ನ್ಯೂ ಜಲ್ಪೈಗುರಿ ಜಂಕ್ಷನ್ ಮುಂದೆ ಕತಿಹಾರ್ ರೈಲ್ವೆ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆಯ(NFR) ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಬ್ಯಸಾಚಿ ಡಿ. ತಿಳಿಸಿದ್ದಾರೆ.


ಎನ್ಎಫ್ಆರ್ ವಲಯದಲ್ಲಿ ದುರದೃಷ್ಟಕರ ಅಪಘಾತ ಸಂಭವಿಸಿದೆ. ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ರೈಲ್ವೆ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ನಿಕಟ ಸಮನ್ವಯದಲ್ಲಿ ರಕ್ಷಣಾ ಕಾರ್ಯವನ್ನು ಮಾಡುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ" ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
ವಿಷಾದ ವ್ಯಕ್ತಪಡಿಸಿದ ಪ್ರಧಾನಿ ಮೋದಿ ;
ಭೀಕರ ರೈಲು ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಘಟನೆಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಂತ್ರಸ್ತರ ನೆರವಿಗಾಗಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅಪಘಾತ ನಡೆದ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿಸಿದರು.
As many as 15 people have died and about 60 others were injured after a goods train rammed into the Kanchanjungha Express in West Bengal’s Darjeeling district on Monday morning. The accident took place at around 9 am near Rangapani, close to New Jalpaiguri station, according to a senior official of the North Frontier Railway.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm