ಬ್ರೇಕಿಂಗ್ ನ್ಯೂಸ್
17-06-24 10:56 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 17: ಲೋಕಸಭೆ ಚುನಾವಣೆಯಲ್ಲಿ ಎರಡು ಕಡೆ ಗೆದ್ದಿದ್ದ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರವನ್ನು ಕೊನೆಗೂ ತ್ಯಜಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಈ ಬಗ್ಗೆ ಪ್ರಕಟಣೆ ನೀಡಲಾಗಿದ್ದು, ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಲಿದ್ದು, ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳಿದೆ.
ರಾಹುಲ್ ಗಾಂಧಿ ಅವರಿಂದ ತೆರವಾಗಲಿರುವ ವಯನಾಡು ಲೋಕಸಭೆ ಕ್ಷೇತ್ರದಿಂದ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಿಸಿದೆ. ಆಮೂಲಕ ಪ್ರಿಯಾಂಕಾ ಕಡೆಗೂ ಚುನಾವಣಾ ರಾಜಕಾರಣಕ್ಕೆ ಪ್ರವೇಶ ಮಾಡುವುದು ಖಚಿತವಾಗಿದೆ.
ನಿಯಮಗಳ ಪ್ರಕಾರ, ಜೂನ್ 4 ರಂದು ಹೊರಬಿದ್ದ ಲೋಕಸಭೆಯ ಫಲಿತಾಂಶದ 14 ದಿನಗಳಲ್ಲಿ ರಾಹುಲ್ ಗಾಂಧಿ ಒಂದು ಸ್ಥಾನವನ್ನು ಖಾಲಿ ಮಾಡಬೇಕಾಗಿತ್ತು. ಇದೀಗ ರಾಹುಲ್ ಗಾಂಧಿ ರಾಯ್ ಬರೇಲಿ ಸಂಸದ ಸ್ಥಾನವನ್ನು ಉಳಿಸಿಕೊಂಡಿದ್ದು ಮುಸ್ಲಿಂ ಬಾಹುಳ್ಯದ ಕಾಂಗ್ರೆಸ್ ಭದ್ರಕೋಟೆ ವಯನಾಡು ಕ್ಷೇತ್ರದಲ್ಲಿ ಮರು ಚುನಾವಣೆಗೆ ಅವಕಾಶ ನೀಡಿದ್ದಾರೆ.
ಪ್ರಿಯಾಂಕಾ ಅವರು ವಯನಾಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಪಕ್ಕಾ ಆಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಟ್ವೀಟ್ ಮಾಡಿದ್ದು ಕಾನೂನಿನ ಪ್ರಕಾರ ರಾಹುಲ್ ಅವರು ಒಂದನ್ನು ತೆರವು ಮಾಡಬೇಕು. ಅದರಂತೆ, ರಾಯ್ ಬರೇಲಿಯನ್ನು ರಾಹುಲ್ ಉಳಿಸಿಕೊಂಡಿದ್ದು, ಪ್ರಿಯಾಂಕಾ ವಯನಾಡಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಯನಾಡು ಕ್ಷೇತ್ರದಲ್ಲಿ ಮುಸ್ಲಿಂ ಮತಗಳು ಅತ್ಯಧಿಕ ಆರು ಲಕ್ಷದಷ್ಟಿದ್ದು ಕಾಂಗ್ರೆಸ್ ಗೆಲುವಿಗೆ ದೊಡ್ಡ ಕೊಡುಗೆ ನೀಡಿದೆ. ಮುಸ್ಲಿಂ ಮತ ಯಾರಿಗೆ ಬೀಳುತ್ತಾ ಅವರು ಗೆಲ್ಲುತ್ತಾರೆ. ಇದೇ ಕಾರಣಕ್ಕೆ ರಾಹುಲ್ ಗೆಲುವಿಗೆ ಇದೇ ಕ್ಷೇತ್ರ ಆಯ್ಕೆ ಮಾಡಲಾಗಿತ್ತು. ಇದೀಗ ಪ್ರಿಯಾಂಕಾ ಸ್ಪರ್ಧಿಸಿದರೂ, ಕಾಂಗ್ರೆಸ್ ಗೆಲ್ಲುವುದು ಖಚಿತ. ಆಮೂಲಕ ಅಣ್ಣ- ತಂಗಿಯ ಜೋಡಿ ಸಂಸತ್ತಿನಲ್ಲಿ ಬಿಜೆಪಿಯನ್ನು ಎದುರಿಸಲು ಸಜ್ಜಾದಂತಿದೆ. ಅಲ್ಲದೆ, 99 ಸದಸ್ಯರನ್ನು ಹೊಂದಿರುವ ಕಾಂಗ್ರೆಸಿಗೆ ನೂರನೇ ಸ್ಥಾನದ ಕೊಡುಗೆ ನೀಡಲಿದ್ದಾರೆ.
ಬಹುತೇಕ ವಿವಿಧ ರಾಜ್ಯಗಳಲ್ಲಿ ತೆರವಾದ ಅಸೆಂಬ್ಲಿ ಕ್ಷೇತ್ರಗಳು ಹಾಗೂ ಲೋಕಸಭೆ ಕ್ಷೇತ್ರಗಳಲ್ಲಿ ಒಂದೇ ಬಾರಿಗೆ ಉಪ ಚುನಾವಣೆ ಘೋಷಣೆಯಾಗಲಿದೆ.
Congress president Rahul Gandhi, who won two seats in the Lok Sabha elections, has finally quit the Wayanad constituency in Kerala. A statement from the Congress party said that Rahul Gandhi will vacate the Wayanad Lok Sabha seat and retain the Rae Bareli seat in Uttar Pradesh.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm