ಬ್ರೇಕಿಂಗ್ ನ್ಯೂಸ್
20-06-24 11:56 am HK News Desk ದೇಶ - ವಿದೇಶ
ನವದೆಹಲಿ, ಜೂನ್.20: ದೇಶದಲ್ಲಿ ‘ನೀಟ್’ ಪರೀಕ್ಷೆ ವಿವಾದಕ್ಕೀಡಾಗಿರುವಾಗಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಎರಡು ದಿನಗಳ ಹಿಂದೆ ನಡೆಸಿದ್ದ ‘ಯುಜಿಸಿ-ನೆಟ್’ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯ ರದ್ದುಪಡಿಸಿದೆ. ದೇಶಾದ್ಯಂತ ಪರೀಕ್ಷೆಯನ್ನು ನಡೆಸಿದ ಒಂದೇ ದಿನದ ಅಂತರದಲ್ಲಿ ರದ್ದುಪಡಿಸುವ ತೀರ್ಮಾನ ತೆಗೆದುಕೊಂಡಿದ್ದು ಅಕ್ರಮದ ಬಗ್ಗೆ ಸಿಬಿಐ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ.
ದೇಶಾದ್ಯಂತ ಎಲ್ಲ ವಿಶ್ವವಿದ್ಯಾನಿಲಯಗಳು ಮತ್ತು ಸರಕಾರಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಪಡೆಯಲು ಮತ್ತು ಜೂನಿಯರ್ ಸಂಶೋಧನಾ ಫೆಲೋಶಿಪ್ಗೆ ಅರ್ಹತೆಯನ್ನು ನಿರ್ಧರಿಸಲು ಪ್ರತಿ ವರ್ಷ ನಡೆಯುವ ಈ ಪರೀಕ್ಷೆಗೆ ಈ ಬಾರಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಜೂನ್ 18ರಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿ ಪರೀಕ್ಷೆ ನಡೆದಿತ್ತು. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಹಲವು ವರ್ಷಗಳ ಬಳಿಕ ಈ ಬಾರಿ ಕಂಪ್ಯೂಟರ್ ಬದಲು ಓಎಂಆರ್ ಪ್ರಶ್ನೆ ಪತ್ರಿಕೆಯ ಮೂಲಕ ಆಫ್ ಲೈನಲ್ಲಿ ಪರೀಕ್ಷೆ ನಡೆದಿತ್ತು.
ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ನಿಂದ ‘ಪರೀಕ್ಷೆಯಲ್ಲಿ ಅಕ್ರಮ ನಡೆದಿರಬಹುದು’ ಎಂಬ ಮಾಹಿತಿಯನ್ನು ಪಡೆದ ನಂತರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. 2024ರ ಯುಜಿಸಿ ನೆಟ್ ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದೆ.
ನೀಟ್ ಪರೀಕ್ಷೆಯಲ್ಲು ಅಕ್ರಮ
ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳನ್ನು ಖಾತ್ರಿಪಡಿಸಲು ಇತ್ತೀಚೆಗೆ ನಡೆದ ಯುಜಿಸಿ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದ್ದು ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಕೇಂದ್ರ ಸರಕಾರ ಎಚ್ಚತ್ತುಕೊಂಡಿದೆ. ದೆಹಲಿ, ಬಿಹಾರ, ಪಂಜಾಬ್, ಗುಜರಾತ್ ನಲ್ಲಿ ನೀಟ್ ಪರೀಕ್ಷೆ ಅಕ್ರಮ ನಡೆದಿರುವ ಶಂಕೆಯಿದ್ದು ನೂರಾರು ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿರುವುದು ಅಕ್ರಮದ ವಾಸನೆ ಎಬ್ಬಿಸಿದೆ. ಕೋಚಿಂಗ್ ಸೆಂಟರ್ ಗಳಿಂದಲೇ ಈ ರೀತಿಯ ಅಕ್ರಮ ನಡೆದಿರುವ ಶಂಕೆಯಿದ್ದು ಉತ್ತರ ಭಾರತದಲ್ಲಿ 15ಕ್ಕು ಹೆಚ್ಚು ಮಂದಿಯನ್ನು ಬಂಧನ ಮಾಡಲಾಗಿದೆ.
Anurag Yadav, the National Eligibility-cum-Entrance Test (NEET) candidate arrested in connection with the result irregularities, has admitted that the leaked question paper provided to him matched the actual exam question paper.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm