ಬ್ರೇಕಿಂಗ್ ನ್ಯೂಸ್
26-06-24 05:50 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 26: 48 ವರ್ಷಗಳ ಬಳಿಕ ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಸಾಮಾನ್ಯವಾಗಿ ಸ್ಪೀಕರ್ ಹುದ್ದೆಗೆ ಅವಿರೋಧ ಆಯ್ಕೆ ಮಾಡಲಾಗುತ್ತದೆ. ಆದರೆ ಇಂಡಿಯಾ ಒಕ್ಕೂಟದಿಂದ ಅಭ್ಯರ್ಥಿ ಇಳಿಸಿದ್ದರಿಂದ ಚುನಾವಣೆ ನಡೆದಿತ್ತು.
ಇಂಡಿಯಾ ಬಣದಿಂದ ಕಾಂಗ್ರೆಸಿನ ಎಂಟು ಬಾರಿಯ ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನು ಕಣಕ್ಕಿಳಿಸಲಾಗಿತ್ತು. ಭಾರೀ ಕುತೂಹಲ ಮೂಡಿಸಿದ್ದ ಈ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಾಖಡ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಗೆ ಆಯ್ಕೆಯಾಗಿದ್ದರೂ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್ ಭಾರ್ತೃಹರಿ ಮಹತಾಬ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನ ಮಾಡಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿಯಾ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂದು ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಕೋಡಿಕುನ್ನಿಲ್ ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲ ಸದಸ್ಯರು ಹಾಜರಾಗುವಂತೆ ವಿಪ್ ಜಾರಿ ಮಾಡಿದ್ದವು.
BJP MP Om Birla was elected speaker of the 18th Lok Sabha after Prime Minister Narendra Modi moved a motion to elect the NDA nominee for his second term.“I congratulate you on behalf of entire House and look forward to your guidance for next five years,” said Mr. Modi.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm