ಬ್ರೇಕಿಂಗ್ ನ್ಯೂಸ್
08-12-20 11:55 am Headline Karnataka News Network ದೇಶ - ವಿದೇಶ
ಚೆನ್ನೈ, ಡಿ.7: ಶೌಚಕ್ಕೆಂದು ಹೊರಗಡೆ ಹೋದ ಸರ್ಕಾರಿ ಮಹಿಳಾ ಉದ್ಯೋಗಿಯೊಬ್ಬರು ದುರಂತವಾಗಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಮೃತರನ್ನು ಶರಣ್ಯ(24) ಎಂದು ಗುರುತಿಸಲಾಗಿದೆ. ಈಕೆ ಕಾಂಚೀಪುರಂ ಕೃಷಿ ಅಭಿವೃದ್ಧಿ ಇಲಾಖೆಯ ಗೋದಾಮಿನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶರಣ್ಯ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಕಚೇರಿಯಲ್ಲಿ ಮಹಿಳೆಯರಿಗೆಂದು ಪ್ರತ್ಯೇಕ ಶೌಚಾಲಯ ಇಲ್ಲದಿರುವುದೇ ಈ ದುರಂತಕ್ಕೆ ಕಾರಣವಾಗಿದೆ.
ಆಫೀಸಿನಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಮಹಿಳೆಯರು ಪಕ್ಕದ ಕಟ್ಟಡ ಅಥವಾ ಮನೆಗಳಿಗೆ ಹೋಗುತ್ತಿದ್ದರು. ಅಂತೆಯೇ ಶರಣ್ಯ ಅವರು ಶನಿವಾರ ಶೌಚಕ್ಕೆಂದು ಹೊರಗಡೆ ಹೋದವರು ಮತ್ತೆ ವಾಪಸ್ ಬರಲೇ ಇಲ್ಲ. ಹೊರಗಡೆ ಹೋದ ಶರಣ್ಯ ಆಫೀಸಿಗೆ ಬರದಿರುವುದರಿಂದ ಸಹೋದ್ಯೋಗಿಗಳು ಆಕೆಯನ್ನು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಆಕೆ ನಿರ್ಮಾಣ ಹಂತದ ಮನೆಯೊಂದರ ತೆರೆದ ಸೆಪ್ಟಿಕ್ ಟ್ಯಾಂಕ್ ಒಳಗೆ ಬಿದ್ದು ಮೃತಪಟ್ಟಿದ್ದರು. ಈ ವಿಚಾರ ಶರಣ್ಯ ಕುಟುಂಬಕ್ಕೆ ಗೊತ್ತಾಗುತ್ತಿದ್ದಂತೆಯೇ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು.
ಇಡೀ ಕುಟುಂಬವನ್ನು ಶರಣ್ಯ ನಿಭಾಯಿಸುತ್ತಿದ್ದರು. ಹೀಗಾಗಿ ತಂದೆ ಪಾಡು ಹೇಳತೀರದಾಗಿತ್ತು. ಶರಣ್ಯ ನನ್ನ ಜೀವ, ಆಕೆಯ ಸಾವನ್ನು ನನ್ನಿಂದ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ. ನನ್ನ ಮಗಳು ಐಎಎಸ್ ಕನಸು ಕಂಡಿದ್ದಳು. ಕೆಲಸ ಮಾಡುತ್ತಲೇ ಐಎಎಸ್ ಗೆ ತಯಾರಾಗಲು ನಿರ್ಧರಿಸಿದ್ದಳು. ಆಕೆಯ ಕನಸು ಸಾವಿನೊಂದಿಗೆ ಕೊನೆಯಾಯಿತು ಎಂದು ಶರಣ್ಯ ತಂದೆ ಷಣ್ಮುಗಂ ಕಣ್ಣೀರು ಹಾಕಿದ್ದಾರೆ.
ಶರಣ್ಯ ಟಿಎಸ್‍ಪಿಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಸರ್ಕಾರಿ ಉದ್ಯೋಗಕ್ಕೆ ಸೇರಿಕೊಂಡಿದ್ದಳು. ಆಕೆ ಈ ಹಿಂದೆ ಒಂದು ಬಾರಿ ಕೆಲಸ ಬಿಡುವ ನಿರ್ಧಾರ ಕೂಡ ಮಾಡಿದ್ದಳು. ಪ್ರತಿ ದಿನ ಆಕೆ ತನ್ನ ಸಹೋದ್ಯೋಗಿಗಳ ಜೊತೆಯೇ ಶೌಚಕ್ಕೆ ಹೋಗುತ್ತಿದ್ದಳು. ಆದರೆ ಈ ಬಾರಿ ಯಾಕೆ ಹೀಗಾಯ್ತು ಅಂತ ಗೊತ್ತಾಗುತ್ತಿಲ್ಲ ಎಂದು ತಂದೆ ಕಣ್ಣೀರು ಹಾಕಿದರು.
A 24-year-old Tamil Nadu government employee on Saturday died after she slipped and fell into an unclosed septic tank in an under-construction house where she had gone to relieve herself.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am