ಬ್ರೇಕಿಂಗ್ ನ್ಯೂಸ್
31-07-24 08:15 pm HK News Desk ದೇಶ - ವಿದೇಶ
ಮುಂಬೈ, ಜುಲೈ.31: ಮಹಾರಾಷ್ಟ್ರದ ವಿವಾದಿತ ಪ್ರೊಬೇಶನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿಯನ್ನು ಕೇಂದ್ರ ಲೋಕಸೇವಾ ಆಯೋಗವು ರದ್ದುಪಡಿಸಿದ್ದು, ಆಕೆ ಭವಿಷ್ಯದಲ್ಲಿ ಯಾವುದೇ ಲೋಕಸೇವಾ ಆಯೋಗದ ಪರೀಕ್ಷೆಯನ್ನು ತೆಗೆದುಕೊಳ್ಳುವುದನ್ನ ನಿರ್ಬಂಧಿಸಿದೆ. ಇತ್ತೀಚೆಗಷ್ಟೇ ಪೂಜಾಗೆ ಯುಪಿಎಸ್ಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಖೇಡ್ಕರ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿತ್ತು. ನಕಲಿ ದಾಖಲೆಗಳ ಮೂಲಕ ಸಿವಿಲ್ ಸರ್ವೀಸ್ ಪರೀಕ್ಷೆಯನ್ನು ನಿಗದಿಗಿಂತ ಹೆಚ್ಚಿನ ಪ್ರಯತ್ನಗಳನ್ನು ಪಡೆದಿದ್ದಾಳೆ ಎಂದು ಆರೋಪಿಸಲಾಗಿತ್ತು.
ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಜುಲೈ 19 ರಂದು ಖೇಡ್ಕರ್ ಅವರನ್ನು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉಮೇದುವಾರಿಕೆ ಪಡೆಯಲು ಅಂಗವೈಕಲ್ಯ ಮತ್ತು ಇತರ ಹಿಂದುಳಿದ ವರ್ಗಗಳ (ಕೆನೆಪದರವಲ್ಲದ) ಕೋಟಾಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಸ್ ದಾಖಲಿಸಿತ್ತು.
ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದ ಬಳಿಕ, ಯುಪಿಎಸ್ಸಿ-2022 ನಿಯಮಗಳ ನಿಬಂಧನೆಗಳಿಗೆ ವಿರುದ್ಧವಾಗಿ ವರ್ತಿಸಿದ್ದು ಮೇಲ್ನೋಟಕ್ಕೆ ತಪ್ಪಿತಸ್ಥರೆಂದು ಕಂಡುಬಂದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಪಿಎಸ್ ಸಿ ಹೇಳಿದೆ. 2022 ರಲ್ಲಿ ಆಯ್ಕೆಯಾದ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ ಮತ್ತು ಮುಂದಿನ ಎಲ್ಲಾ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಯುಪಿಎಸ್ಸಿ ಅಧಿಕೃತ ಹೇಳಿಕೆ ನೀಡಿದೆ.
The selection of Puja Khedkar as a trainee IAS officer has been cancelled and she has been barred for taking the entrance exam for life after the Union Public Service Commission (UPSC) found her guilty of faking her identity to take the exam multiple times.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm