ಬ್ರೇಕಿಂಗ್ ನ್ಯೂಸ್
09-12-20 06:25 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.9: ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿವೆ. ನಿನ್ನೆ ರಾತ್ರಿ ಗೃಹ ಸಚಿವ ಅಮಿತ್ ಷಾ ಜೊತೆಗಿನ ಸಭೆಯ ಬಳಿಕ ಕೇಂದ್ರ ಸರಕಾರ ಮಸೂದೆಯಲ್ಲಿ ಕೆಲವು ಬದಲಾವಣೆಗಳನ್ನು ತರಲು ಸಿದ್ಧ ಇರುವುದಾಗಿ ಹೇಳಿ ಲಿಖಿತ ಪ್ರಸ್ತಾವನೆಯನ್ನು ರೈತ ಮುಖಂಡರಿಗೆ ನೀಡಿತ್ತು. ಆದರೆ, ಕೇಂದ್ರ ಸರಕಾರದ ಪ್ರಸ್ತಾವವನ್ನು ತಿರಸ್ಕರಿಸಿರುವ ರೈತ ಸಂಘಟನೆಗ ನಾಯಕರು ಡಿ.12 ಮತ್ತು 14ರಂದು ದೇಶವ್ಯಾಪಿ ರೈತರು ಧರಣಿ ನಡೆಸಲಿದ್ದಾರೆ ಎಂದು ಪ್ರಕಟಿಸಿದ್ದಾರೆ.
ಡಿ.12ರಂದು ದೆಹಲಿ ಘೆರಾವೋ ನಡೆಸಲಾಗುವುದು. ದೆಹಲಿ- ಜೈಪುರ್ ಮತ್ತು ದೆಹಲಿ – ಆಗ್ರಾ ನಡುವಿನ ಹೆದ್ದಾರಿಯನ್ನು ತಡೆದು ರಾಸ್ತಾ ರೋಕೊ ನಡೆಸಲಾಗುವುದು. ಅಲ್ಲದೆ, ದೇಶಾದ್ಯಂತ ಇರುವ ಟೋಲ್ ಗೇಟ್ ಗಳಲ್ಲಿ ಪ್ರತಿಭಟನೆ ನಡೆಸಿ, ಸುಂಕ ವಸೂಲಿ ಮಾಡದಂತೆ ತಡೆಯಲಾಗುವುದು. ವಾಹನಗಳನ್ನು ಮುಕ್ತವಾಗಿ ಸಂಚರಿಸುವಂತೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಮಂಗಳವಾರ ರಾತ್ರಿ 13 ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆಗೆ ಕೇಂದ್ರ ಗೃಹ ಸಚಿವರು ಸುದೀರ್ಘ ನಾಲ್ಕು ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು. ಆದರೆ, ಬುಧವಾರ ಕೇಂದ್ರ ಸರಕಾರದ ಮುಂದಿಟ್ಟಿರುವ ಪ್ರಸ್ತಾವ ತಿರಸ್ಕರಿಸಿದ ಆಲ್ ಇಂಡಿಯಾ ಕಿಸಾನ್ ಸಂಘರ್ಷ್ ಕೋಆರ್ಡಿನೇಶನ್ ಕಮಿಟಿ (ಎಐಕೆಎಸ್ ಸಿಸಿ) ಮುಖಂಡರು, ಮೋದಿ ಸರಕಾರ ರೈತರ ಅಹವಾಲು ಕೇಳುವ ಬದಲು ವ್ಯತಿರಿಕ್ತವಾಗಿ ವರ್ತಿಸುತ್ತಿದೆ. ಎಲ್ಲ ರೈತ ಸಂಘಟನೆಗಳ ಪ್ರತಿನಿಧಿಗಳು ಸರಕಾರ ಇಟ್ಟಿರುವ ಹೊಸ ಮಾದರಿಯ ಹಳೆಯ ಪ್ರಸ್ತಾಪಗಳನ್ನು ತಿರಸ್ಕರಿಸಿದ್ದಾರೆ. ಪ್ರಸ್ತಾವಿತ ಮಸೂದೆಯನ್ನು ತಿರಸ್ಕರಿಸುವುದೇ ನಮ್ಮ ಬೇಡಿಕೆ ಎಂದಿದ್ದಾರೆ.
ಡಿ.12ರಂದು ದೇಶಾದ್ಯಂತ ಟಾಲ್ ಗೇಟ್ ಘೆರಾವೋ ನಡೆಸಲಾಗುವುದು. 14ರಂದು ಎಲ್ಲ ರಾಜ್ಯಗಳ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ರೈತರು ಪ್ರತಿಭಟನಾ ಧರಣಿ ನಡೆಸಲಿದ್ದಾರೆ. ದೆಹಲಿ, ಪಂಜಾಬ್, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಉತ್ತರಾಖಂಡ ರಾಜ್ಯಗಳ ರೈತರು ಒಂದು ದಿನದ ಮುಷ್ಕರ ನಡೆಸಲಿದ್ದಾರೆ. ಇದೇ ವೇಳೆ, ದೇಶದ ಎಲ್ಲ ರೈತರು ರಿಲಯನ್ಸ್ ಸಿಮ್ ಗಳನ್ನು ಬಾಯ್ಕಾಟ್ ಮಾಡಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ದೆಹಲಿ, ಹರ್ಯಾಣದಲ್ಲಿ ರೈತರ ಪ್ರತಿಭಟನೆ 14ನೇ ದಿನಕ್ಕೆ ಪ್ರವೇಶ ಮಾಡಿದೆ.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:21 pm
HK News Desk
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm