ಬ್ರೇಕಿಂಗ್ ನ್ಯೂಸ್
13-09-24 12:24 pm HK News Desk ದೇಶ - ವಿದೇಶ
ನವದೆಹಲಿ, ಸೆ 13: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಆಮ್ ಆದ್ಮಿ ಪಕ್ಷದ (ಆಪ್) ಮುಖ್ಯಸ್ಥ ಹಾಗು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿತು.
10 ಲಕ್ಷ ರೂ ಬಾಂಡ್, ಎರಡು ಶ್ಯೂರಿಟಿಗಳೊಂದಿಗೆ ಕೇಜ್ರಿವಾಲ್ಗೆ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾ.ಸೂರ್ಯ ಕಾಂತ್ ದ್ವಿಸದಸ್ಯ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ.
ದೆಹಲಿ ಮದ್ಯ ನೀತಿ ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ದ್ವಿದಸ್ಯ ನ್ಯಾಯಪೀಠ, ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಈಗಾಗಲೇ ಜಾಮೀನು ಸಿಕ್ಕಿರುವುದರಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಯಲ್ಲಿ ಇಟ್ಟುಕೊಳ್ಳುವುದು ನ್ಯಾಯದ ಅಪಹಾಸ್ಯವಾಗುತ್ತದೆ ಎಂದು ಅಭಿಪ್ರಾಯಟ್ಟಿತು.
![]()
ಕೇಜ್ರಿವಾಲ್ ಬಂಧನ ನ್ಯಾಯಸಮ್ಮತವಲ್ಲ. 22 ತಿಂಗಳುಗಳ ಕಾಲ ಅವರನ್ನು ಸಿಬಿಐ ಬಂಧಿಸಲಿಲ್ಲ. ಆದರೆ, ಇಡಿ ಪ್ರಕರಣದಲ್ಲಿ ಬಿಡುಗಡೆಯಾದ ಬೆನ್ನಲ್ಲೇ ಸಿಬಿಐ ಬಂಧಿಸಿದ ತುರ್ತು ಕ್ರಮ ಅರ್ಥವಾಗುತ್ತಿಲ್ಲ ಎಂದು ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.
ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ನಲ್ಲಿದ್ದ ಆಪ್ ನಾಯಕರಾದ ಮನಿಶ್ ಸಿಸೋಡಿಯಾ ಮತ್ತು ಅತಿಶಿ ಅವರು ಜಾಮೀನು ಸಿಗುತ್ತಿದ್ದಂತೆ ಪರಸ್ಪರ ಸಂಭ್ರಮಿಸಿದರು.

ಕೇಜ್ರಿವಾಲ್‌ರನ್ನು ಮೊದಲು ಮಾರ್ಚ್ನಲ್ಲಿ ಇಡಿ ಬಂಧಿಸಿತ್ತು. ಎರಡು ತಿಂಗಳ ಹಿಂದೆ ಇಡಿ ಪ್ರಕರಣದಲ್ಲಿ ಕೋರ್ಟ್ ಜಾಮೀನು ನೀಡಿತ್ತು. ಆದರೆ ಜುಲೈ 12ರಂದು ಸಿಬಿಐ ಬಂಧಿಸಿದ್ದರಿಂದ ಕೇಜ್ರಿವಾಲ್ಗೆ ಜೈಲು ವಾಸ ಮುಂದುವರಿದಿತ್ತು. ಇದೀಗ ಆರು ತಿಂಗಳ ಬಳಿಕ ದೆಹಲಿ ಸಿಎಂ ಬಿಡುಗಡೆಯಾಗುತ್ತಿದ್ದಾರೆ.
ಕೇಜ್ರಿವಾಲ್ ಅವರ ಬಿಡುಗಡೆಯು ಹರಿಯಾಣ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಂದಿದ್ದು, ಇದರಿಂದ ಆಮ್ ಆದ್ಮಿ ಪಕ್ಷಕ್ಕೆ ಹೆಚ್ಚಿನ ಬಲ ಸಿಕ್ಕಂತಾಗಿದೆ.
![]()
ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷವು, ಬಿಜೆಪಿ ಹಾಗೂ ಇಂಡಿಯಾ ಬ್ಲಾಕ್‌ನ ಪಾಲುದಾರರಾಗಿರುವ ಕಾಂಗ್ರೆಸ್‌ಗೆ ದೊಡ್ಡ ಸವಾಲು ನೀಡುತ್ತಿದೆ.
ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ತನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ‘ಸತ್ಯ ಮೇವ ಜಯತೆ’ ಎಂದು ಹೇಳಿದೆ.
ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧನಕ್ಕೊಳಪಡಿಸಿತ್ತು. 10 ದಿನಗಳ ವಿಚಾರಣೆಯ ನಂತರ ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರಂದು ತಿಹಾರ್ ಜೈಲಿಗೆ ಕಳುಹಿಸಲಾಯಿತು. ಮೇ 10 ರಂದು, ಅವರನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಕಾಲ ಬಿಡುಗಡೆ ಮಾಡಲಾಗಿತ್ತು.
ಜೈಲಿನಲ್ಲಿ ಕಳೆದ ಒಟ್ಟು ಸಮಯ 177 ದಿನಗಳು, ಅದರಲ್ಲಿ 21 ದಿನಗಳನ್ನು ಕಳೆದರೆ ಕೇಜ್ರಿವಾಲ್ ಒಟ್ಟು 156 ದಿನಗಳ ಕಾಲ ಜೈಲಿನಲ್ಲಿದ್ದರು.
ಏನಿದು ಅಬಕಾರಿ ನೀತಿ ಹಗರಣ?
ಅಬಕಾರಿ ವಲಯದ ಸುಧಾರಣೆಗಾಗಿ ದೆಹಲಿ ಆಪ್ ಸರ್ಕಾರವು 2021ರಲ್ಲಿ ದಿಲ್ಲಿ ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಈ ನೀತಿ ಅನ್ವಯ ಖಾಸಗಿ ಕಂಪನಿಗಳು ಮತ್ತು ಉದ್ಯಮಗಳಿಗೆ ಚಿಲ್ಲರೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಯಿತು. ಆದರೆ, ಸರ್ಕಾರವು ತನ್ನ ಪರವಾಗಿರುವ ಕಂಪನಿಗಳು, ಉದ್ಯಮಗಳ ಮಾಲೀಕರಿಗೆ ನೆರವು ನೀಡುತ್ತಿದೆ. ಜೊತೆಗೆ, ಲಂಚ ಪಡೆದು ಹೊಸಬರಿಗೆ ಪರವಾನಿಗೆ ನೀಡಲಾಗಿದೆ ಎಂಬ ವ್ಯಾಪಕ ಆರೋಪ ಕೇಳಿ ಬಂದಿತ್ತು.
ಅಬಕಾರಿ ನೀತಿಯ ಮೂಲಕ ಭ್ರಷ್ಟಾಚಾರ ಎಸಗಲಾಗಿದೆ ಎಂಬ ಆರೋಪ ಪ್ರತಿಪಕ್ಷಗಳಿಂದ ಜೋರಾಗುತ್ತಿದ್ದಂತೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ಸಿಬಿಐ ತನಿಖೆಗೆ ಆದೇಶಿಸಿದರು. ಇ.ಡಿ ಕೂಡ ವಿಚಾರಣೆಗಿಳಿಯತು. 2022ರಲ್ಲಿ ನೀತಿಯನ್ನು ರದ್ದು ಕೂಡ ಮಾಡಲಾಯಿತು. ಇ.ಡಿ. ಪ್ರಕಾರ, ಈ ಹಗರಣ ದಿಂದ ದೆಹಲಿ ಸರ್ಕಾರಕ್ಕೆ 2631 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿಸಿದೆ.
![]()
ಹಗರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಆಗಿದ್ದ ಮನೀಶ್ ಸಿಸೋಡಿಯಾ, ಆಪ್ ನಾಯಕ ಸಂಜಯ್ ಸಿಂಗ್, ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ ಕೆ.ಕವಿತಾ ಮತ್ತು ಅರಬಿಂದೋ ಫಾರ್ಮಾ ಡೈರೆಕ್ಟರ್ ಪಿ ಶರತ್ ಚಂದ್ರ ರೆಡ್ಡಿ ಹಾಗೂ ಮತ್ತಿತರರು ಬಂಧನಕ್ಕೊಳಗಾಗಿದ್ದಾರೆ.
In a major victory for the Aam Aadmi Party, its leader and Delhi Chief Minister, Arvind Kejriwal, was granted bail by the Supreme Court on Friday in connection with the ongoing investigation into the alleged Delhi liquor policy scam.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm