ಬ್ರೇಕಿಂಗ್ ನ್ಯೂಸ್
11-12-20 10:16 am Headline Karnataka News Network ದೇಶ - ವಿದೇಶ
ಜೈಪುರ, ಡಿ.11: ರಾಜಸ್ಥಾನದ ಕೋಟಾ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ಗಂಟೆಯಲ್ಲಿ ಒಂಬತ್ತು ನವಜಾಶ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಇದೇ ಆಸ್ಪತ್ರೆಯಲ್ಲಿ ಮಕ್ಕಳ ಸಾವು ದೊಡ್ಡ ಪ್ರಮಾಣದಲ್ಲಿ ಸಂಭವಿಸಿದ್ದು, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.
ಕೋಟಾದ ಜೆ.ಕೆ.ಲಾನ್ ಆಸ್ಪತ್ರೆಯಲ್ಲಿ ಒಟ್ಟು ಒಂಬತ್ತು ಮಕ್ಕಳು ಕೊನೆಯುಸಿರೆಳೆದಿದ್ದಾರೆ. ಎಲ್ಲ ಮಕ್ಕಳು ಒಂದರಿಂದ ನಾಲ್ಕು ದಿನದ ಹಿಂದೆ ಹುಟ್ಟಿದ ಮಕ್ಕಳು ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆರೋಗ್ಯ ಸಚಿವ ರಘು ಶರ್ಮಾ ಆದೇಶಿಸಿದ್ದಾರೆ.
"ಇದು ಸಹಜ ಸಾವು; ಅಸಾಮಾನ್ಯವೇನಲ್ಲ; ಸಾವಿಗೆ ಯಾವುದೇ ಗಂಭೀರ ಕಾರಣ ಅಥವಾ ಸೋಂಕು ಇರಲಿಲ್ಲ" ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಸುರೇಶ್ ದುರಾಲಾ ಹೇಳಿಕೊಂಡಿದ್ದಾರೆ.
ಕೋಟಾ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರು ಆರೋಗ್ಯ ಇಲಾಖೆಗೆ ನೀಡಿದ ಮಾಹಿತಿಯ ಪ್ರಕಾರ, ಮೂರು ಮಕ್ಕಳನ್ನು ಜೆ.ಕೆ.ಲಾನ್ ಆಸ್ಪತ್ರೆಗೆ ಕರೆ ತರುವ ವೇಳೆಯೇ ಅವರು ಮೃತಪಟ್ಟಿದ್ದರು. ಅಷ್ಟೇ ಮಕ್ಕಳಿಗೆ ಜನ್ಮಜಾತ ಗಂಭೀರ ಸಮಸ್ಯೆಗಳಿದ್ದವು. ವಿಭಾಗಾಧಿಕಾರಿ ಕೆ.ಸಿ.ಮೀನಾ, ಜಿಲ್ಲಾಧಿಕಾರಿ ಉಜ್ವಲ್ ರಾಠೋಡ್ ಆಸ್ಪತ್ರೆಗೆ ಗುರುವಾರ ಸಂಜೆ ಭೇಟಿ ನೀಡಿ ಸಭೆ ನಡೆಸಿದರು.
ಪರಿಸ್ಥಿತಿಯ ಮೇಲೆ ನಿಗಾ ಇಡುವ ಸಲುವಾಗಿ ತಕ್ಷಣ ಆರು ಮಂದಿ ಹೆಚ್ಚುವರಿ ವೈದ್ಯರನ್ನು ಮತ್ತು 10 ಮಂದಿ ಹೆಚ್ಚುವರಿ ನರ್ಸ್‌ಗಳನ್ನು ನಿಯೋಜಿಸುವಂತೆ ಮೀನಾ ಸೂಚನೆ ನೀಡಿದ್ದಾರೆ. 2019ರ ಡಿಸೆಂಬರ್‌ನಲ್ಲಿ ಇದೇ ಆಸ್ಪತ್ರೆಯಲ್ಲಿ 100 ಮಕ್ಕಳು ಮೃತಪಟ್ಟಿದ್ದವು.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm