ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 01:01 pm
Mangalore Correspondent
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm