ಬ್ರೇಕಿಂಗ್ ನ್ಯೂಸ್
27-11-24 02:00 pm HK News Desk ದೇಶ - ವಿದೇಶ
ಪೋರ್ಟ್ ಬ್ಲೇರ್, ನ 27: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ ಅಂದಾಜು ₹36,000 ಕೋಟಿ ಮೌಲ್ಯದ ಸುಮಾರು 6,000 ಕೆ.ಜಿ 'ಮೆಥಂಫೆಟಮೀನ್' ಎಂಬ ಮಾದಕವಸ್ತುವನ್ನ ವಶಪಡಿಸಿಕೊಳ್ಳಲಾಗಿದೆ.
ದೇಶದ ಇತಿಹಾಸದಲ್ಲೇ ಸಾಗರದಲ್ಲಿ ನಡೆದ ಅತಿ ದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೈರನ್ ದ್ವೀಪದ ಸಮೀಪದಿಂದ ಥಾಯ್ಲೆಂಡ್‌ಗೆ ನಿಷೇಧಿತ ಮಾದಕವಸ್ತುಗಳನ್ನು ಸಾಗಿಸಲು ಯತ್ನಿಸಲಾಗಿತ್ತು. ಘಟನೆ ಸಂಬಂಧ ಮ್ಯಾನ್ಮಾರ್ ಮೂಲದ ಆರು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.



ತಾಂತ್ರಿಕ ತೊಂದರೆ ಎದುರಾಗಿ ಮೀನುಗಾರಿಕಾ ದೋಣಿ, ಥಾಯ್ಲೆಂಡ್‌ನತ್ತ ಸಾಗುವ ಬದಲು ಭಾರತೀಯ ಸಮುದ್ರದತ್ತ ಚಲಿಸಿತ್ತು ಎಂದು ಅಂದಾಜಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ. ಬಂಧಿತರಿಂದ ಸ್ಯಾಟಲೈಟ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಿಸ್ಮಸ್, ಹೊಸವರ್ಷಾಚರಣೆ ಆಗಮಿಸುತ್ತಿರುವಂತೆಯೇ ಥಾಯ್ಲೆಂಡ್‌ನಲ್ಲಿ ಮಾದಕವಸ್ತುಗಳಿಗೆ ಭಾರಿ ಬೇಡಿಕೆಯಿದೆ. ಟೀ ಪೊಟ್ಟಣದಲ್ಲಿ ಡ್ರಗ್ಸ್ ಪ್ಯಾಕ್ ಮಾಡಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
The nearly 6,000 kg of narcotic drug Methamphetamine seized from a fishing trawler in Andaman and Nicobar Islands is the largest maritime seizure in India and valued approximately at Rs 36,000 crore, officials said on Tuesday.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm