ಬ್ರೇಕಿಂಗ್ ನ್ಯೂಸ್
29-11-24 06:26 pm HK News Desk ದೇಶ - ವಿದೇಶ
ಮುಂಬೈ, ನ.29: ಮಹಾರಾಷ್ಟ್ರದಲ್ಲಿ ನೂತನ ಸರಕಾರ ರಚನೆ ಕಗ್ಗಂಟು ಮುಂದುವರಿದಿದೆ. ದೆಹಲಿಯಲ್ಲಿ ಶುಕ್ರವಾರ ಬೆಳಗ್ಗೆ ಕರೆಯಲಾಗಿದ್ದ ಮಹಾಯುತಿ ಒಕ್ಕೂಟದ ಸಭೆ ದಿಢೀರ್ ರದ್ದುಗೊಂಡಿದ್ದು, ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮತ್ತು ಎನ್ ಸಿಪಿ ನಾಯಕ ಅಜಿತ್ ಪವಾರ್ ಮುಂಬೈಗೆ ಹಿಂತಿರುಗಿದ್ದಾರೆ.
ಗುರುವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಷಾ ನಿವಾಸದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತುಕತೆ ನಡೆದಿತ್ತು. ಸಚಿವ ಸ್ಥಾನ ಹಂಚಿಕೆ ಕುರಿತಾಗಿ ಮಾತುಕತೆ ಅಂತಿಮ ಆಗಿರಲಿಲ್ಲ. ಶುಕ್ರವಾರ ಬೆಳಗ್ಗೆ ಮತ್ತೆ ಮಹಾಯುತಿ ಒಕ್ಕೂಟ ಸದಸ್ಯರು ಸಭೆ ನಡೆಸುವುದಕ್ಕೆ ಮುಂದಾಗಿದ್ದರು. ಈ ವೇಳೆ, ಸಭೆ ರದ್ದುಗೊಳಿಸಿದ್ದು ಮತ್ತೆ ಅತಂತ್ರ ಸ್ಥಿತಿ ಮುಂದುವರಿದಿದೆ. 132 ಸ್ಥಾನ ಪಡೆದಿರುವ ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ ಸಿಗುವುದು ಅಂತಿಮವಾಗಿದೆ. ಅನುಭವದ ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರ ನಾಯಕರು ಫಡ್ನವಿಸ್ ಅವರನ್ನು ಸಿಎಂ ಸ್ಥಾನಕ್ಕೇರಿಸುವುದಕ್ಕೆ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಶಿವಸೇನೆ ಮತ್ತು ಎನ್ ಸಿಪಿ ಬಣವು ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದ್ದಾರೆ.
ಏಕನಾಥ ಶಿಂಧೆ ಗೃಹ ಸಚಿವ ಮತ್ತು ನಗರಾಭಿವೃದ್ಧಿ ಖಾತೆ ಜೊತೆಗೆ 12 ಸಚಿವ ಸ್ಥಾನಗಳನ್ನು ತಮ್ಮ ಬಣಕ್ಕೆ ನೀಡುವಂತೆ ಕೇಳಿಕೊಂಡಿದ್ದಾರೆ. ಇದಲ್ಲದೆ, ತಮ್ಮ ಮಗನಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇರಿಸಿದ್ದಾರೆ. ಈ ನಡುವೆ, ಅಜಿತ್ ಪವಾರ್ ಕೂಡ ಪ್ರಮುಖ ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಕೇಂದ್ರದಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವುದಕ್ಕೆ ಬಿಜೆಪಿ ಒಪ್ಪಿದೆ. ಆದರೆ, ರಾಜ್ಯದಲ್ಲಿ ಸಚಿವ ಸ್ಥಾನ ಹಂಚಿಕೆ ಬಗ್ಗೆ ಅಂತಿಮ ಮುದ್ರೆ ಬಿದ್ದಿಲ್ಲ.
ಈ ನಡುವೆ, ಶಿವಸೇನೆ ಕಾರ್ಯಕರ್ತರು ಏಕನಾಥ ಶಿಂಧೆ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ. ಶಿಂಧೆ ಜಾರಿಗೆ ತಂದ ಲಡ್ಕ್ ಬಹೀನ್ ಯೋಜನೆಯಿಂದಾಗಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಬಂದಿದೆ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಸಿಗದಿದ್ದರೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಒತ್ತಾಯ ಮಾಡುತ್ತಿದ್ದಾರೆ.
The formation of the new Maharashtra government remains shrouded in uncertainty as a crucial meeting of the Mahayuti alliance, scheduled for Friday, was cancelled after caretaker Chief Minister Eknath Shinde unexpectedly left for his village in Satara district, delaying discussions on portfolio distribution.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm