ಬ್ರೇಕಿಂಗ್ ನ್ಯೂಸ್
18-01-25 06:20 pm HK News Desk ದೇಶ - ವಿದೇಶ
ನವದೆಹಲಿ, ಜ.18: ನಷ್ಟದಲ್ಲಿರುವ ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ (ಕೆಐಒಸಿಎಲ್)ಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್‌ಎಂಡಿಸಿ) ಜತೆಗೆ ವಿಲೀನ ಮಾಡುವ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದಿದ್ದು ಪರಿಶೀಲನೆ ಹಂತದಲ್ಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು ಕುದುರೆಮುಖ ಕಬ್ಬಿಣ ಅದಿರು ಕಂಪನಿ ಕಳೆದ ಕೆಲವು ವರ್ಷಗಳಿಂದ ನಷ್ಟದಲ್ಲಿ ಸಾಗುತ್ತಿದೆ. ಇದನ್ನು ನಷ್ಟದಿಂದ ಲಾಭದತ್ತ ಒಯ್ಯಬೇಕಾಗಿದೆ. ಆದರೆ ಇದನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದೊಟ್ಟಿಗೆ ವಿಲೀನ ಮಾಡಲು ರಾಜ್ಯ ಸರ್ಕಾರದ ಸಹಕಾರ ಬೇಕಾಗುತ್ತದೆ. ಆ ಸಹಕಾರವನ್ನು ಕರ್ನಾಟಕ ಸರ್ಕಾರ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.
ಕುದುರೆಮುಖ ಕಬ್ಬಿಣ ಅದಿರು ಕಂಪನಿಯಲ್ಲಿ ಅದಿರನ್ನು ಬಳಸಿ ಕಬ್ಬಿಣದ ಉಂಡೆ (ಪೆಲೆಟ್)ಗಳನ್ನು ಉತ್ಪಾದಿಸಲಾಗುತ್ತಿದ್ದು, ಕೇಂದ್ರ ಉಕ್ಕು ಸಚಿವಾಲಯದಡಿ ಕೆಲಸ ಮಾಡುತ್ತದೆ. ಇದು ವಾರ್ಷಿಕವಾಗಿ 2.16 ಲಕ್ಷ ಟನ್ ಕಬ್ಬಿಣ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಆದರೆ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಿಂದ ದೇಶದ ಒಟ್ಟು ಕಬ್ಬಿಣದ ಅದಿರಿನ ಶೇ.20ರಷ್ಟು ಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ, ಸಾಲದ ಸುಳಿಯಲ್ಲಿರುವ ಸರ್ಕಾರಿ ಸ್ವಾಮ್ಯದ ಉಕ್ಕು ಕಾರ್ಖಾನೆ ವಿಶಾಖಪಟ್ಟಣದ ರಾಷ್ಟ್ರೀಯ ಇಸ್ಪಾತ್ ನಿಗಮ ನಿಯಮಿತ (ಉಕ್ಕು ಕಾರ್ಖಾನೆ) ಪುನರುಜ್ಜೀವನಕ್ಕೂ ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅದಕ್ಕಾಗಿ 11440 ಕೋಟಿ ರೂ. ವಿನಿಯೋಗಿಸಲು ತೀರ್ಮಾನಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಪೈಕಿ 10,300 ಕೋಟಿ ರೂ. ಮೊತ್ತವನ್ನು ಈಕ್ವಿಟಿ ಷೇರುಗಳಿಂದ ನೀಡಲಾಗುತ್ತದೆ. ಉಳಿದ 1140 ಕೋಟಿ ರೂ. ಮೊತ್ತವನ್ನು ಸಾಲವನ್ನಾಗಿ ನೀಡಲಾಗುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇದೇ ವೇಳೆ, ಉಕ್ಕು ಕಾರ್ಖಾನೆಯನ್ನು ಖಾಸಗಿಗೆ ವಹಿಸುವ ಯಾವುದೇ ಪ್ರಶ್ನೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
The government is considering merging pellet maker KIOCL with iron ore major NMDC. Union Steel Minister HD Kumaraswamy said that KIOCL is in critical condition. "The process is on to consider merging KIOCL and NMDC. KIOCL has also reported losses," he said on the sidelines of a press meet here to announce a revival package of Rs 11,440 crore for Rashtriya Ispat Nigam Ltd (RINL).
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am