ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.



ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm