ಬ್ರೇಕಿಂಗ್ ನ್ಯೂಸ್
29-01-25 10:07 am HK News Desk ದೇಶ - ವಿದೇಶ
ಮಹಾಕುಂಭನಗರ, ಜ 29: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಇಂದು ಜ 29 ಮೌನಿ ಅಮಾವಾಸ್ಯೆ ಇರುವ ಕಾರಣ ಎರಡನೇ ಅಮೃತ ಸ್ನಾನ ಕೈಗೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕಾಲ್ತುಳಿತಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಮಾಹಿತಿ ಪಡೆದಿದ್ದು, ಘಟನಾ ಸ್ಥಳದಲ್ಲಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ’ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಮೃತಪಟ್ಟವರ ಬಗ್ಗೆ ಇನ್ನಷ್ಟೇ ಖಚಿತವಾಗಬೇಕಿದೆ.
ಮಹಾಕುಂಭ ನಗರದ ತ್ರಿವೇಣಿ ಮಾರ್ಗ, ಕಾಳಿ ಮಾರ್ಗ ಸೇರಿದಂತೆ ಸಂಗಮದ ಸುತ್ತಮುತ್ತಲಿನ ರಸ್ತೆಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಹೀಗಾಗಿ ಜನರ ನಿಯಂತ್ರಣಕ್ಕೆ ಅಧಿಕಾರಿಗಳು ಭದ್ರತೆ ಹೆಚ್ಚಿಸಿದ್ದಾರೆ. ಭಕ್ತರ ಓಡಾಟಕ್ಕೆ ಅನುಕೂಲವಾಗಲು ಈ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇತರ ರಾಜ್ಯ, ದೇಶಗಳಿಂದ ಬರುವ ವಾಹನಗಳಿಗೆ ನಗರದ ಹೊರವಲಯದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಜನರನ್ನು ನಿಯಂತ್ರಿಸಲು ಸಂಗಮದ ಸುತ್ತಮುತ್ತಲಿನ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ ಎಂದು ವರದಿ ತಿಳಿಸಿದೆ.
ಮೌನಿ ಅಮಾವಾಸ್ಯೆ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚುವ ಕಾರಣ ಐದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನೇಮಿಸಲಾಗಿದೆ. ಇಂಟಿಗ್ರೇಟೆಡ್ ಕಂಟ್ರೋಲ್ ಮತ್ತು ಕಮಾಂಡ್ ಸೆಂಟರ್ ಸಂಗಮದ ಬಳಿ ನಿಗಾ ಇರಿಸಲಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದ 3 ಕೋಟಿ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಂಡಿದ್ದಾರೆ. ಮಂಗಳವಾರ ರಾತ್ರಿಯಿಂದಲೇ ಮೌನಿ ಅಮಾವಾಸ್ಯೆಯ ಅಮೃತ ಸ್ನಾನ ಆರಂಭವಾಗಲಿದೆ ಎಂದೂ ಅಧಿಕಾರಿಗಳು ಮಾಹಿತಿ
ಇನ್ನು ಕರ್ನಾಟಕದ ಸರೋಜಿನಿ ತಮ್ಮ ಅನುಭವವನ್ನು ವಿವರಿಸುತ್ತಾ, ಎರಡು ಬಸ್‌ಗಳಲ್ಲಿ ಬಂದ ಒಂಬತ್ತು ಜನರ ಗುಂಪಿನಲ್ಲಿ ತಾನೂ ಇದ್ದೆ, ಜನಸಂದಣಿಯನ್ನು ಬ್ಯಾರಿಕೇಡ್ ಹಾಕಿ ಒಂದೆಡೆ ನಿಯಂತ್ರಿಸಿದ್ದರಿಂದ ಹಲವಾರು ಜನರು ನುಗ್ಗಿ ಬ್ಯಾರಿಕೇಡ್ ಮುರಿದು ಬಿದ್ದು ಸಿಕ್ಕಿಹಾಕಿಕೊಂಡರು. ಇದರಲ್ಲಿ ಬದುಕುಳಿಯುವ ಸಾಧ್ಯತೆಯೇ ಇಲ್ಲ ಎಂದು ಆಸ್ಪತ್ರೆಯ ಹೊರಗೆ ದುಃಖಿತಳಾದ ಸರೋಜಿನಿ ಅವರು ಹೇಳಿದರು.
ಮಾಹಿತಿಯ ಪ್ರಕಾರ, ಕಾಲ್ತುಳಿತದ ನಂತರ, ಆಡಳಿತವು ಮಹಾ ಕುಂಭದ ವ್ಯವಸ್ಥೆಗಳಲ್ಲಿ ಬದಲಾವಣೆಗಳನ್ನು ಮಾಡಿದೆ. ಮಹಾ ಕುಂಭಮೇಳದಲ್ಲಿ ಜನಸಂದಣಿಯನ್ನು ಬೇರೆಡೆಗೆ ತಿರುಗಿಸುವ ಕೆಲಸ ನಡೆದಿದೆ. ಜಾತ್ರೆ ಪ್ರದೇಶಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಅವರ ಗುಂಪನ್ನು ನಗರದ ಹೊರಗೆ ನಿಲ್ಲಿಸಲಾಗಿದೆ.`
Multiple people were feared dead after a “stampede-like” situation broke out at the Sangam in the early hours of Wednesday amid the ongoing Maha Kumbh in Prayagraj, news agency PTI reported. The incident took place after a large number of pilgrims gathered for a holy bath on Mauni Amavasya.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am