ಬ್ರೇಕಿಂಗ್ ನ್ಯೂಸ್
16-12-20 10:28 pm Headline Karnataka News Network ದೇಶ - ವಿದೇಶ
ನವದೆಹಲಿ (ಡಿ.16): ದೆಹಲಿಯಲ್ಲಿ ಪ್ರತಿಭಟನಾನಿರತ ರೈತರ ಕಷ್ಟಗಳನ್ನು ನೋಡಲಾಗದೇ ಗುರುದ್ವಾರದ ಸಂತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದೇ ವೇಳೆ ಡೆತ್ ನೋಟ್ ಬರೆದಿರುವ ಅವರು ಸರ್ಕಾರದ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 65 ವರ್ಷ ಬಾಬಾ ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಸಂತ.

ದೆಹಲಿ ಸೋನಿಪತ್ ಗಡಿಯಲ್ಲಿ ಪ್ರತಿಭಟನಾ ರೈತರಿಗೆ ಬೆಂಬಲವಾಗಿ ಹೋರಾಟದಲ್ಲಿ ಇವರು ಭಾಗಿಯಾಗಿದ್ದರು. ಕಳೆದ 21 ದಿನಗಳಿಂದ ದೇಶದ ರಾಜಧಾನಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ರೈತರಿಗಾಗಿ ಬಾಬಾ ರಾಮ್ ಸಿಂಗ್ ಪ್ರಾಣತ್ಯಾಗ ಮಾಡಿರುವುದಾಗಿ ತಿಳಿಸಿದ್ದಾರೆ. 'ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವುದು ನೋವು ತಂದಿದೆ. ನಾನು ಅವರ ನೋವನ್ನು ಹಂಚಿಕೊಂಡಿದ್ದೇನೆ. ಸರ್ಕಾರ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿಲ್ಲ. ಅನ್ಯಾಯ ಮಾಡುವುದು ಕೂಡ ಪಾಪ, ಆದರೆ, ಅನ್ಯಾಯವನ್ನು ಸಹಿಸುವುದು ಕೂಡ ದೊಡ್ಡ ಪಾಪವಾಗಿದೆ. ರೈತರನ್ನು ಬೆಂಬಲಿಸಲು ಕೆಲವರು ಸರ್ಕಾರಕ್ಕೆ ಹಲವಾರು ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣತ್ಯಾಗದ ಮೂಲಕ ಅವರಿಗೆ ಬೆಂಬಲಿಸುತ್ತಿದ್ದೇನೆ. ನನ್ನ ಆತ್ಮಹತ್ಯೆ ದಬ್ಬಾಳಿಕೆ ವಿರುದ್ಧದ ಧ್ವನಿಯಾಗಿದೆ' ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಅವರನ್ನು ತಕ್ಷಣಕ್ಕೆ ಪಾಣಿಪತ್ನ ಪಾರ್ಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಮಾರ್ಗಮಧ್ಯೆದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದರು ತಿಳಿಸಿದರು ಎಂದು ಸೋನಿಪಾತ್ನ ಉಪ ಪೊಲೀಸ್ ಆಯುಕ್ತ ಶ್ಯಾಮ್ ಲಾಲ್ ಪೂನಿಯಾ ತಿಳಿಸಿದ್ದಾರೆ. ಅವರ ಮೃತದೇಹವನ್ನು ಸದ್ಯ ಕರ್ನಾಲ್ಗೆ ಸ್ಥಳಾಂತರಿಸಲಾಗುತ್ತಿದೆ.
A Sikh preacher supporting the farmers' agitation against the Centre's agriculture laws allegedly committed suicide near the Singhu border in Delhi on Wednesday, police said.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm