ಬ್ರೇಕಿಂಗ್ ನ್ಯೂಸ್
01-03-25 01:20 pm HK News Desk ದೇಶ - ವಿದೇಶ
ರೋಮ್, ಮಾ 01: ಎರಡು ವಾರಗಳಿಂದ ನ್ಯುಮೋನಿಯಾದಿಂದ ಬಳಲುತ್ತಿರುವ ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಶುಕ್ರವಾರ ಆಗಾಗ್ಗೆ ಕೆಮ್ಮುವಿನಿಂದ ವಾಂತಿಯಾಗಿದೆ. ಉಸಿರಾಟದ ತೊಂದರೆಯಿಂದ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ವ್ಯಾಟಿಕನ್ ಹೇಳಿದೆ.
88 ವರ್ಷದ ಪೋಪ್ ಅವರು ಜಾಗೃತರಾಗಿದ್ದು, ಎಲ್ಲಾ ವೇಳೆಯಲ್ಲಿಯೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಉತ್ತಮ ಮಟ್ಟದ ಆಮ್ಲಜನಕ ವಿನಿಮಯದೊಂದಿಗೆ ಪ್ರತಿಕ್ರಿಯಿಸುತ್ತಿದ್ದಾರೆ. ಹೆಚ್ಚುವರಿ ಆಮ್ಲಜನಕ ಪಡೆಯಲು ಮಾಸ್ಕ್ ಧರಿಸುವುದನ್ನು ಮುಂದುವರೆಸಿದ್ದಾರೆ ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.
ಮಧ್ಯಾಹ್ನದ ಆರಂಭದಲ್ಲಿ ಸಂಭವಿಸಿದ ಉಸಿರಾಟದ ತೊಂದರೆಯಿಂದ ಆರೋಗ್ಯದಲ್ಲಿ ಮತ್ತಷ್ಟು ಹದಗೆಟ್ಟಿತು. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆಯೇ ಎಂಬುದರ ಬಗ್ಗೆ ಮುಂದಿನ 24 ರಿಂದ 48 ಗಂಟೆ ಅವಧಿ ವೈದ್ಯರು ತೀವ್ರ ನಿಗಾ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ. 14 ರಿಂದ ರೋಮ್‌ನ ಜೆಮೆಲ್ಲಿ ಆಸ್ಪತ್ರೆಯಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪೋಪ್ ಅವರು ಯುವಕನಾಗಿದ್ದಾಗ ಶ್ವಾಸಕೋಶದ ಕಾಯಿಲೆಯಿಂದಾಗಿ ಒಂದು ಶ್ವಾಸಕೋಶದ ಭಾಗವನ್ನು ತೆಗೆದುಹಾಕಲಾಗಿದೆ. ಬ್ರಾಂಕೈಟಿಸ್ ಉಲ್ಬಣಗೊಂಡು ಎರಡೂ ಶ್ವಾಸಕೋಶಗಳಲ್ಲಿ ನ್ಯುಮೋನಿಯಾ ಉಂಟಾಗಿದೆ.
ಎರಡು ವಾರಗಳಿಗೂ ಹೆಚ್ಚು ಕಾಲದಿಂದ ಆಸ್ಪತ್ರೆಯಲ್ಲಿರುವ ಪೋಪ್ ಅವರು ಈಗ ಉಸಿರಾಟದ ತೊಂದರೆ ಎದುರಿಸುತ್ತಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಮಟ್ಟದ ಕೃತಕ ಉಸಿರಾಟದ ಅವಶ್ಯಕತೆಯಿದೆ ಎಂದು ಭಾವಿಸುತ್ತೇನೆ ಎಂದು ಚಿಕಾಗೋದ ನಾರ್ತ್‌ವೆಸ್ಟರ್ನ್ ಮೆಡಿಸಿನ್‌ನ ಶ್ವಾಸಕೋಶದ ಕ್ರಿಟಿಕಲ್ ಕೇರ್ ವೈದ್ಯ ಡಾ. ಜಾನ್ ಕೋಲ್‌ಮನ್ ಅವರು ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ.
ಪೋಪ್ ಫ್ರಾನ್ಸಿಸ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾದ ವ್ಯಾಟಿಕನ್ ಆಡಳಿತದ ಕಾರ್ಯದರ್ಶಿ ಹಾಗೂ ಉಪ ಕಾರ್ಯದರ್ಶಿ, ನೂತನ ಸಂತರ ನಿಯೋಜನೆ ಕುರಿತು ಚರ್ಚಿಸಿದರು.
ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿ ಇರುವಾಗಲೇ ಈ ಭೇಟಿ ಹಾಗೂ ಚರ್ಚೆ ನಡೆದಿದೆ.
ಈ ಮಧ್ಯೆ, ವ್ಯಾಟಿಕನ್ ಮಧ್ಯಾಹ್ನ ಬಿಡುಗಡೆ ಮಾಡಿದ ವಾರ್ತಾಪತ್ರದ ಪ್ರಕಾರ ಇಬ್ಬರಿಗೆ ಸಂತ ಸ್ಥಾನ ಹಾಗೂ ಇತರ ಐವರಿಗೆ ದೀಕ್ಷೆ ನೀಡುವ ಪ್ರಸ್ತಾವಕ್ಕೆ ಪೋಪ್ ಒಪ್ಪಿಗೆ ಸೂಚಿಸಿದ್ದಾರಂತೆ.
Pope Francis has suffered an “isolated breathing crisis” which caused him to vomit, provoking a “sudden worsening” of his respiratory condition, the Vatican said.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm