ಬ್ರೇಕಿಂಗ್ ನ್ಯೂಸ್
29-03-25 04:40 pm HK News Desk ದೇಶ - ವಿದೇಶ
ನವದೆಹಲಿ, ಮಾ.29 : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹುಟ್ಟಿದ ದಿನ ಏ.14ರಂದು ದೇಶಾದ್ಯಂತ ಕೇಂದ್ರ ಸರ್ಕಾರಿ ಅಧೀನದ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಪ್ರಧಾನಿ ಮೋದಿ ಸರ್ಕಾರದ ಈ ನಿರ್ಧಾರದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಏಪ್ರಿಲ್ 14, 2025 ರಂದು ಎಲ್ಲಾ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರವ್ಯಾಪಿ ರಜಾದಿನವೆಂದು ಘೋಷಿಸುವ ನಿರ್ಧಾರವು ಡಾ. ಬಿ.ಆರ್. ಅಂಬೇಡ್ಕರ್ ಅವರ ಅಪಾರ ಕೊಡುಗೆಗಳಿಗೆ ಅರ್ಹವಾದ ಗೌರವವಾಗಿದೆ. ಈ ಚಿಂತನಶೀಲ ನಿರ್ಧಾರವನ್ನು ನಾನು ಪ್ರಾಮಾಣಿಕವಾಗಿ ಪ್ರಶಂಸಿಸುತ್ತೇನೆ. ಡಾ. ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಸಬಲೀಕರಣದ ದೃಷ್ಟಿಕೋನವು ನಮ್ಮ ರಾಷ್ಟ್ರವನ್ನು ರೂಪಿಸುತ್ತಲೇ ಇದೆ. ನಮ್ಮ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸುವ ಈ ಅರ್ಥಪೂರ್ಣ ಕಾರ್ಯಕ್ಕಾಗಿ ಗೌರವಾನ್ವಿತ ಪ್ರಧಾನಿ ಮೋದಿಯವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ದೇಶದ ಪ್ರಜಾಪ್ರಭುತ್ವವನ್ನು ಹುಟ್ಟುಹಾಕಿದ ಮಹಾತ್ಮ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಂಕ ಏಪ್ರಿಲ್ 14 ರಂದು ಸಾರ್ವತ್ರಿಕ ರಜೆಯನ್ನು ಪ್ರಧಾನಿ ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರ್ಕಾರ ಘೋಷಿಸಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಮಗ್ರ ಆಶಯ ಹಾಗೂ ಸಮ ಸಮಾಜದ ಕನಸನ್ನು ನನಸಾಗಿಸಲು, ಭಾರತೀಯ ಜನತಾ ಪಕ್ಷ ಎಂದೆಂದಿಗೂ ಬದ್ಧವಾಗಿದೆ ಎನ್ನಲು ಹೆಮ್ಮೆಯಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟ್ವೀಟ್ ಮಾಡಿದ್ದಾರೆ.
ಅಂಬೇಡ್ಕರ್ ಜಯಂತಿ ಅವರ ಸ್ಮರಣೆ ಹಾಗೂ ಆಚರಣೆಗಾಗಿ ಮಾತ್ರ ಸೀಮಿತಗೊಳ್ಳದೆ ಆ ದಿನದಂದು ಅವರ ಮಹಾನ್ ಪರಿಶ್ರಮದಿಂದ ರೂಪುಗೊಂಡ ಸಂವಿಧಾನದ ಆಶಯಗಳನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬ ಪ್ರಜೆಯೂ ಅಂಬೇಡ್ಕರ್ ಅವರನ್ನು ಭಕ್ತಿ ಹಾಗೂ ಅಭಿಮಾನದಿಂದ ಗೌರವಿಸುವ ದಿನವಾಗಲಿ, ಭಾರತದ ಚರಿತ್ರೆಯ ಸುವರ್ಣಾಕ್ಷರಗಳಲ್ಲಿ ಏಪ್ರಿಲ್ 14 ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಶ್ರೇಷ್ಠತೆಯನ್ನು ವಿಶ್ವ ಮೆಚ್ಚುವ ಹೆಮ್ಮೆಯ ದಿನವಾಗಲಿ ಎಂದು ಸಂಕಲ್ಪ ತೊಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
The Central government on Friday, March 28, declared Dr Bhimrao Ramji Ambedkar’s birth anniversary, on April 14, as a public holiday for his ‘contributions to society and the Constitution.’
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm