ಬ್ರೇಕಿಂಗ್ ನ್ಯೂಸ್
22-04-25 10:33 pm HK News Desk ದೇಶ - ವಿದೇಶ
ಶ್ರೀನಗರ, ಎ.22 : ಜಮ್ಮು ಕಾಶ್ಮೀರದಲ್ಲಿ ಭೀಕರ ಭಯೋತ್ಪಾದಕ ದಾಳಿಯಾಗಿದ್ದು, ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ಗುಂಡಿನ ದಾಳಿಯಲ್ಲಿ 28 ಮಂದಿ ಸಾವಿಗೀಡಾಗಿದ್ದಾರೆ. ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ ನಲ್ಲಿ ಉಗ್ರರು ಹಿಂದುಗಳನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ.
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಸಾವಿನ ಸಂಖ್ಯೆ ಇನ್ನೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಆದರೆ ನಾಗರಿಕರನ್ನು ಗುರಿಯಾಗಿಸಿ ನಡೆಸಿದ ಅತಿದೊಡ್ಡ ದಾಳಿ ಇದಾಗಿದ್ದು, ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ. ಸಾವನ್ನಪ್ಪಿದ ಪ್ರವಾಸಿಗರಲ್ಲಿ ಇಬ್ಬರು ವಿದೇಶಿ ಪ್ರಜೆಗಳಿದ್ದಾರೆ. ಇಟಲಿ ಮತ್ತು ಇಸ್ರೇಲಿ ಪ್ರವಾಸಿಗರಿಬ್ಬರು ಬಲಿಯಾಗಿದ್ದಾರೆ. ಉಳಿದಂತೆ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ದೇಶದ ವಿವಿಧೆಡೆಯ ಪ್ರವಾಸಿಗರು ಬಲಿಯಾಗಿದ್ದಾರೆ. ಉಗ್ರರು ಆಟೋಮೆಟಿಕ್ ರೈಫಲ್ಸ್ ಮತ್ತು ಇನ್ನಿತರ ಬಂದೂಕುಗಳನ್ನು ಉಪಯೋಗಿಸಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಇಬ್ಬರು ಬಂದೂಕುಧಾರಿ ಉಗ್ರರು ಪ್ರವಾಸಿಗರನ್ನು ಉದ್ದಕ್ಕೆ ನಿಲ್ಲಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರವಾಸಿಗರ ಧರ್ಮವನ್ನು ಕೇಳಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದು, ದೇಶಾದ್ಯಂತ ಆಕ್ರೋಶದ ಜ್ವಾಲೆ ಏಳುವಂತೆ ಮಾಡಿದೆ. ಘಟನೆಯನ್ನು ಖಂಡಿಸಿ ಬಲಪಂಥೀಯ ಸಂಘಟನೆಗಳು, ಕಾಂಗ್ರೆಸ್ ಬುಧವಾರ ಜಮ್ಮು ಕಾಶ್ಮೀರದಲ್ಲಿ ಪ್ರತಿಭಟನೆಗೆ ಕರೆ ನೀಡಿವೆ. ಉಗ್ರರ ದಾಳಿಯನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದು, ಯಾವುದೇ ಕಾರಣಕ್ಕೂ ಇದರ ಹಿಂದಿರುವ ಶಕ್ತಿಗಳನ್ನು ಬಿಡುವುದಿಲ್ಲ ಎಂದಿದ್ದಾರೆ.
ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾರತಕ್ಕೆ ಬಂದಿರುವಾಗಲೇ ಉಗ್ರರ ದಾಳಿಯಾಗಿರುವುದು ಇದರ ಹಿಂದೆ ಪಾಕಿಸ್ತಾನದ ಕೈವಾಡ ಇರಬಹುದು ಎನ್ನುವ ಗುಮಾನಿ ಎದ್ದಿದೆ. ದಾಳಿ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರೀನಗರಕ್ಕೆ ಆಗಮಿಸಿದ್ದು, ಭದ್ರತೆ ವಿಚಾರದ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಪರಿಸ್ಥಿತಿಯ ಬಗ್ಗೆ ಗೃಹ ಸಚಿವರಿಗೆ ವಿವರಣೆ ನೀಡಿದ್ದಾರೆ. ಉಗ್ರ ದಾಳಿ ಹೊಣೆಯನ್ನು ಲಷ್ಕರ್ ಇ-ತೈಬಾ ಉಗ್ರವಾದಿ ಸಂಘಟನೆಗೆ ಸೇರಿದ ಇನ್ನೊಂದು ರೆಸಿಸ್ಟೆಂಟ್ ಫ್ರಂಟ್ ಹೊತ್ತುಕೊಂಡಿದೆ. ಪಾಕಿಸ್ತಾನದ ಕಿಶ್ತ್ವಾರ್ ಮೂಲಕ ಉಗ್ರರು ನುಸುಳುಕೋರರ ರೂಪದಲ್ಲಿ ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದರು ಎನ್ನಲಾಗುತ್ತಿದೆ.
At least 28 people have been killed, including a Navy officer and foreign tourists, after terrorists struck a prime tourist location of Pahalgam in South Kashmir on Tuesday (April 22, 2025), government sources told The Hindu.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 01:40 pm
Ocean Pearl
Forensic Expert Dr Mahabala Shetty, Dharmasth...
01-08-25 10:02 pm
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm