ಬ್ರೇಕಿಂಗ್ ನ್ಯೂಸ್
24-04-25 12:46 pm HK News Desk ದೇಶ - ವಿದೇಶ
ನವದೆಹಲಿ, ಎ.24 : ಜಮ್ಮು ಕಾಶ್ಮೀರ ಭಯೋತ್ಪಾದಕ ದಾಳಿ ಬೆನ್ನಲ್ಲೇ ಸೌದಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ಆಗಮಿಸಿದ್ದು ತುರ್ತಾಗಿ ಹಿರಿಯ ಅಧಿಕಾರಿಗಳು ಮತ್ತು ಸಂಪುಟ ಸಹೋದ್ಯೋಗಿಗಳ ಸಭೆ ನಡೆಸಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದು, ಎರಡು ದೇಶಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದರಂತೆ, ಪಾಕಿಸ್ತಾನಿಯರಿಗೆ ಭಾರತ ಪ್ರವೇಶವನ್ನು ನಿಷೇಧಿಸಿದ್ದಾರೆ.
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಹಿರಿಯ ಸಚಿವರು ಭಾಗವಹಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಸಂಪೂರ್ಣ ನಿಲ್ಲಿಸುವ ವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗುತ್ತದೆ. ಇದಲ್ಲದೆ, ಉಭಯ ದೇಶಗಳ ನಡುವಿನ ರಸ್ತೆ ಸಂಚಾರದ ಅಟ್ಟಾರಿ- ವಾಘಾ ಚೆಕ್ ಪೋಸ್ಟ್ ಮುಚ್ಚಲಾಗುವುದು. ಭಾರತಕ್ಕೆ ಪಾಕಿಸ್ತಾನಿ ಪ್ರಜೆಗಳಿಗೆ ಪ್ರವೇಶ ರದ್ದು. ಪಾಕಿಸ್ತಾನೀಯರಿಗೆ ವೀಸಾ ನೀಡುವುದಿಲ್ಲ. ಈಗಾಗಲೇ ಭಾರತಕ್ಕೆ ಬಂದಿರುವ ಪಾಕಿಸ್ತಾನಿ ಪ್ರಜೆಗೆ ಭಾರತವನ್ನು ತೊರೆಯಲು 48 ಗಂಟೆಗಳ ಕಾಲಾವಕಾಶ ಇರುತ್ತದೆ.
ನವದೆಹಲಿಯ ಪಾಕಿಸ್ತಾನಿ ಹೈಕಮಿಷನ್ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರು ಭಾರತವನ್ನು ಬಿಟ್ಟು ಹೋಗುವಂತೆ ಸೂಚಿಸಲಾಗಿದೆ. ಭಾರತದ ಕಡೆಯಿಂದ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಇರಿಸಿರುವ ಭಾರತೀಯ ಹೈಕಮಿಷನ್ ಕಚೇರಿಯ ರಕ್ಷಣಾ, ನೌಕಾಪಡೆ ಮತ್ತು ವಾಯು ಸಲಹೆಗಾರರನ್ನು ಭಾರತ ವಾಪಾಸ್ ಕರೆಸಿಕೊಳ್ಳಲಿದೆ.
The Cabinet Committee on Security or CCS - the country's highest-decision making body on national security has taken some strict and punishing measures against Pakistan over the "cross-border linkages" that have surfaced in the investigation over the dastardly terror attack in Jammu and Kashmir's Pahalgam, in which 26 people, including one foreign national, were killed.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm