ಬ್ರೇಕಿಂಗ್ ನ್ಯೂಸ್
24-04-25 04:59 pm HK News Desk ದೇಶ - ವಿದೇಶ
ನವದೆಹಲಿ, ಎ.24 : ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಉತ್ತರ ಭಾರತದ ಮುಸ್ಲಿಂ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದು ಭಯೋತ್ಪಾದನೆ ಎನ್ನುವುದು "ಕ್ಯಾನ್ಸರ್" ಆಗಿದ್ದು, ಇಸ್ಲಾಂ ಪ್ರತಿಪಾದಿಸುವ ಶಾಂತಿ ಉತ್ತೇಜನದ ನೀತಿಗೆ ವಿರುದ್ಧವಾಗಿದೆ ಎಂದು ಜಮಿಯತ್ ಉಲೇಮಾ-ಎ-ಹಿಂದ್ ಹೇಳಿದೆ. ಅಲ್ಲದೆ, ಪಹಲ್ಗಾಮ್ ಘಟನೆಗೆ ಧಾರ್ಮಿಕ ಬಣ್ಣ ನೀಡುವುದು ತಪ್ಪು ಎಂದು ಪ್ರತಿಪಾದಿಸಿದೆ.
ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯಸ್ಥ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಈ ಬಗ್ಗೆ ಮಾತನಾಡಿದ್ದು, ಈ ವಾರ ಶುಕ್ರವಾರದ ಪ್ರಾರ್ಥನೆಯಲ್ಲಿ ದೇಶದಲ್ಲಿರುವ 5.5 ಲಕ್ಷಕ್ಕೂ ಹೆಚ್ಚು ಮಸೀದಿಗಳ ಇಮಾಮ್‌ಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಮೃತಪಟ್ಟವರಿಗಾಗಿ ಪ್ರಾರ್ಥಿಸುವುದರ ಜೊತೆಗೆ ಭಯೋತ್ಪಾದನೆ ವಿರುದ್ಧ ಬಲವಾದ ಸಂದೇಶ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಧರ್ಮದ ಆಧಾರದ ಮೇಲೆ ಮುಗ್ಧ ಜನರನ್ನು ಕೊಲ್ಲುವುದು ಇಸ್ಲಾಂ ವಿರುದ್ಧ ಮಾತ್ರವಲ್ಲ, ಮಾನವೀಯತೆಗೆ ವಿರುದ್ಧವಾಗಿದೆ ಎಂದು ಇಲ್ಯಾಸಿ ಹೇಳಿದ್ದಾರೆ. ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟ ಅಮಾಯಕ ಜನರು ಮತ್ತು ಅವರ ಕುಟುಂಬಗಳಿಗಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು. ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ, ಇಮಾಮ್ ತಮ್ಮ ಖುತ್ಬಾ (ಧಾರ್ಮಿಕ ಧರ್ಮೋಪದೇಶ) ಸಮಯದಲ್ಲಿ ಭಯೋತ್ಪಾದನೆಯ ವಿರುದ್ಧ ಬಲವಾದ ಸಂದೇಶವನ್ನು ನೀಡುತ್ತಾರೆ" ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.
ಇದಲ್ಲದೆ, ಭಾರತದ ಮಣ್ಣಿನಲ್ಲಿ ಯಾವುದೇ ಭಯೋತ್ಪಾದಕನನ್ನು ಸಮಾಧಿ ಮಾಡಲು ಬಿಡಬಾರದು ಎಂಬುದು ಸರ್ಕಾರಕ್ಕೆ ನಮ್ಮ ಬೇಡಿಕೆಯಾಗಿದೆ" ಎಂದು ಇಲ್ಯಾಸಿ ಹೇಳಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಜಮಿಯತ್ ಉಲೇಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಸಹ ಬಲವಾಗಿ ಖಂಡಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಮದನಿ, ಗಾಯಗೊಂಡವರ ತ್ವರಿತ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ ಎಂದು ಜಮಿಯತ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
Prominent Muslim organisations on Wednesday strongly denounced the Pahalgam terror attack. The Jamiat Ulema-e-Hind said that giving the incident a religious angle is misguided, emphasising that terrorism is a “cancer” that goes against Islam's message of peace.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm