ಬ್ರೇಕಿಂಗ್ ನ್ಯೂಸ್
26-04-25 08:21 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಎ.26 : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದತ್ತ ಹರಿಯುವ ಸಿಂಧೂ ನದಿಯ ಹರಿವನ್ನೇ ನಿಲ್ಲಿಸುವ ಭಾರತದ ನಿರ್ಧಾರಕ್ಕೆ, ನೀರು ನಿಲ್ಲಿಸಿದರೆ ನದಿಗಳಲ್ಲಿ ರಕ್ತ ಹರಿಯುತ್ತದೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ, ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಬೆದರಿಕೆ ಹಾಕಿದ್ದಾರೆ.
ಸಿಂಧೂ ನದಿ ನೀರು ನಮ್ಮದು ಮತ್ತು ಅದು ನಮ್ಮದೇ ಆಗಿ ಉಳಿಯುತ್ತದೆ, ಅದರ ಮೂಲಕ ನೀರು ಹರಿಯುತ್ತದೆಯೇ ಅಥವಾ ಅವರ ರಕ್ತ ಹರಿಯುತ್ತದೋ ಎಂದು ಮುಂದಿನ ದಿನಗಳಲ್ಲಿ ನಿರ್ಧಾರವಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ತಮ್ಮ ತವರು ಸಿಂಧ್ ಪ್ರಾಂತ್ಯದ ಸುಕ್ಕೂರ್ ಪ್ರದೇಶದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದ್ದಾರೆ.
ಸಿಂಧೂ ನದಿ ಸಿಂಧ್ ಪ್ರಾಂತ್ಯದ ಮೂಲಕ ಹರಿಯುತ್ತದೆ. ಸಿಂಧೂ ನಾಗರಿಕತೆ ಮೊಹೆಂಜದಾರೋ ಇಲ್ಲಿನ ನದಿಯ ದಡದಲ್ಲಿ ಪ್ರವರ್ಧಮಾನಕ್ಕೆ ಬಂದಿತ್ತು. ಪ್ರಧಾನಿ ನರೇಂದ್ರ ಮೋದಿ ಭಾರತವು ಸಾವಿರಾರು ವರ್ಷಗಳಷ್ಟು ಹಳೆಯ ನಾಗರಿಕತೆಯ ಉತ್ತರಾಧಿಕಾರಿ ಎಂದು ಹೇಳಿಕೊಂಡಿದ್ದಾರೆ. ಆದರೆ ಆ ನಾಗರಿಕತೆಯು ಲರ್ಕಾನಾದ ಮೊಹೆಂಜೊ-ದಾರೋದಲ್ಲಿದೆ. ನಾವು ಅದರ ನಿಜವಾದ ಪಾಲಕರು. ಅದನ್ನು ನಾವು ರಕ್ಷಿಸುತ್ತೇವೆ ಎಂದಿದ್ದಾರೆ.
ಸಿಂಧೂ ನದಿ ಮತ್ತು ಇಲ್ಲಿನ ಜನರ ನಡುವಿನ ಶತಮಾನಗಳಷ್ಟು ಹಳೆಯ ಬಾಂಧವ್ಯವನ್ನು ಮೋದಿ ಮುರಿಯಲು ಸಾಧ್ಯವಿಲ್ಲ. ಭಾರತ ಸರ್ಕಾರ ಪಾಕಿಸ್ತಾನದ ನೀರಿನ ಮೇಲೆ ಕಣ್ಣಿಟ್ಟಿದೆ. ಇಲ್ಲಿನ ಪರಿಸ್ಥಿತಿಯು ನಾಲ್ಕು ಪ್ರಾಂತ್ಯಗಳಲ್ಲಿ ತಮ್ಮ ನೀರನ್ನು ರಕ್ಷಿಸಲು ಒಗ್ಗಟ್ಟನ್ನು ಬಯಸುತ್ತದೆ ಎಂದರು.
ಪಾಕಿಸ್ತಾನದ ಜನರು ಅಥವಾ ಅಂತಾರಾಷ್ಟ್ರೀಯ ಸಮುದಾಯವು ಸಿಂಧೂ ನದಿ ನೀರನ್ನು ಪಾಕಿಸ್ತಾನದಿಂದ ಬೇರೆಡೆಗೆ ತಿರುಗಿಸುವ ಯಾವುದೇ ಪ್ರಯತ್ನಗಳನ್ನು ಸಹಿಸುವುದಿಲ್ಲ. ಸಿಂಧೂ ನದಿಯ ದರೋಡೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂಬ ಸಂದೇಶವನ್ನು ನಾವು ಜಗತ್ತಿಗೆ ಸಾರುತ್ತೇವೆ. ಭಾರತದ ಆಕ್ರಮಣದಿಂದ ತಮ್ಮ ನದಿಯನ್ನು ರಕ್ಷಿಸಿಕೊಳ್ಳಲು ದೃಢ ನಿಶ್ಚಯದ ಹೋರಾಟಕ್ಕೆ ಸಿದ್ಧರಾಗುವಂತೆ ಬಿಲಾವಲ್ ಭುಟ್ಟೋ ತಮ್ಮ ಬೆಂಬಲಿಗರನ್ನು ಒತ್ತಾಯಿಸಿದರು.
ಪಾಕಿಸ್ತಾನದ ಅತ್ಯಂತ ಕಿರಿಯ ವಿದೇಶಾಂಗ ಸಚಿವರಾಗಿದ್ದ ಬಿಲಾವಲ್ ಭುಟ್ಟೋ, ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದೇವೆ. ಪಾಕಿಸ್ತಾನಿಗಳು ಸ್ವತಃ ಭಯೋತ್ಪಾದನೆಯ ಬಲಿಪಶುಗಳಾಗಿದ್ದಾರೆ ಎಂದಿದ್ದಾರೆ.
Former Pakistani foreign minister Bilawal Bhutto-Zardari threatened India days after New Delhi formally suspended the Indus Waters Treaty, following the deadly terrorist attack in Pahalgam, Jammu and Kashmir.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm