ಬ್ರೇಕಿಂಗ್ ನ್ಯೂಸ್
30-04-25 02:13 pm HK News Desk ದೇಶ - ವಿದೇಶ
ನವದೆಹಲಿ, ಎ.30 : ಪಹಲ್ಗಾಮ್ ಉಗ್ರರ ದಾಳಿ ಕೃತ್ಯದ ಬಳಿಕ ಭಾರತದ ಪ್ರತೀಕಾರ ಭೀತಿಯಲ್ಲಿರುವ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ ಮತ್ತು ಲಾಹೋರ್ ವ್ಯಾಪ್ತಿಯಲ್ಲಿ ನೋ ಫ್ಲೈ ಝೋನ್ (ವಿಮಾನ ಹಾರಾಟ ನಿಷೇಧ ವಲಯ) ಘೋಷಣೆ ಮಾಡಿದೆ.
ಮೇ 2 ರವರೆಗೆ ಇಸ್ಲಾಮಾಬಾದ್ ಮತ್ತು ಲಾಹೋರ್ ಪ್ರದೇಶದಲ್ಲಿ ವಾಯುಪಡೆಗೆ ಹಾರಾಟ ನಿಷೇಧ ಬಗ್ಗೆ ನೋಟಿಸ್ ನೀಡಲಾಗಿದೆ. ಹೀಗಾಗಿ ಈ ಭಾಗದ ವಾಯು ಪ್ರದೇಶದಲ್ಲಿ ಯಾವುದೇ ವಿಮಾನಗಳು ಕಾರ್ಯ ನಿರ್ವಹಿಸಲು ಅವಕಾಶ ಇರುವುದಿಲ್ಲ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ಭಯೋತ್ಪಾದಕ ದಾಳಿಗೆ ಭಾರತ ಬಲವಾದ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಆತಂಕಕ್ಕೀಡಾಗಿದ್ದು, ಇದರಂತೆ ಇಸ್ಲಾಮಾಬಾದ್ ಮತ್ತು ಲಾಹೋರ್ ವಾಯು ಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಮಾಡಿದೆ.
ಮಾಹಿತಿ ಸಚಿವಾಲಯದ ಹೇಳಿಕೆಯಲ್ಲಿ "ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿದೆ ಎಂಬ ಆಧಾರ ರಹಿತ ಆರೋಪಗಳ ನೆಪದಲ್ಲಿ ಭಾರತ ಮುಂದಿನ 24-36 ಗಂಟೆಗಳಲ್ಲಿ ಪಾಕಿಸ್ತಾನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಉದ್ದೇಶಿಸಿದೆ ಎಂಬ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಪಾಕಿಸ್ತಾನಕ್ಕೆ ಇದೆ" ಎಂದು ಹೇಳಿದ್ದರು. ಈ ಸೂಚನೆ ಹಿನ್ನೆಲೆಯಲ್ಲಿ ಯಾವುದೇ ಇತರ ದೇಶಗಳ ವಿಮಾನ ಪತ್ತೆಯಾದಲ್ಲಿ ವಾಯುಪಡೆ ಹೊಡೆದುರುಳಿಸಲು ಅವಕಾಶ ಇರುತ್ತದೆ.
As the tensions between India and Pakistan rise in the aftermath of the Pahalgam terror attack that killed 26 tourists, Pakistan has declared no-fly zone in Islamabad, Lahore. The no to airmen (NOTAM) notice has been imposed on Islamabad and Lahore until May 2, implying that no aircraft will be allowed to operate in the designated airspace.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm