ಬ್ರೇಕಿಂಗ್ ನ್ಯೂಸ್
10-05-25 01:58 pm HK News Desk ದೇಶ - ವಿದೇಶ
ನವದೆಹಲಿ, ಮೇ 10 : ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಂದುವರಿಸಿದ್ದು ಪಾಕಿಸ್ತಾನದ ಮೂರು ವಾಯುನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ಬಗ್ಗೆ ಪಾಕಿಸ್ತಾನವೂ ಖಚಿತಪಡಿಸಿದ್ದು ತನ್ನ ಮೂರು ವಾಯುನೆಲೆ ಗುರಿಯಾಗಿಸಿ ಡ್ರೋಣ್, ಕ್ಷಿಪಣಿ ದಾಳಿ ಮಾಡಿದ್ದಾಗಿ ಹೇಳಿಕೊಂಡಿದೆ.
ಪಾಕಿಸ್ತಾನ ವಾಯುಪಡೆಯ ರಾವಲ್ಪಿಂಡಿ ಬಳಿಯ ನೂರ್ ಖಾನ್, ಮುರೀದ್ (ಚಕ್ವಾಲ್), ಜಾಂಗ್ ಜಿಲ್ಲೆಯ ರಫೀಕಿ ವಾಯುನೆಲೆಗಳನ್ನು ಗುರಿಯಾಗಿಸಿ ಭಾರತ ಸೇನೆ ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಿದೆ. ಈ ಬಗ್ಗೆ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಶರೀಫ್ ಚೌಧರಿ ನಸುಕಿನ ನಾಲ್ಕು ಗಂಟೆಗೆ ಇಸ್ಲಮಾಬಾದ್ ನಲ್ಲಿ ಮಾಧ್ಯಮ ಹೇಳಿಕೆ ನೀಡಿದ್ದಾರೆ.
ದಾಳಿಯಿಂದಾದ ಸಾವು, ನೋವು ಬಗ್ಗೆ ಅವರು ಮಾಹಿತಿ ನೀಡಿಲ್ಲವಾದರೂ, ಭಾರತದ ಕೆಲವು ಕ್ಷಿಪಣಿಗಳು ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಮೇಲೂ ಹೋಗಿವೆ ಎಂದು ಹೇಳಿದ್ದಾರೆ. ಆದರೆ ಪಾಕಿಸ್ತಾನದ ವಾಯುಪಡೆಯ ಯಾವುದೇ ಸೊತ್ತುಗಳಿಗೆ ಹಾನಿಯಾಗಿಲ್ಲ. ಇದಲ್ಲದೆ, ಭಾರತದ ಸೇನಾ ನೆಲೆಗಳ ಮೇಲೂ ದಾಳಿ ನಡೆಸಿದ್ದು ದೊಡ್ಡ ಮಟ್ಟದ ಹಾನಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ನೂರ್ ಖಾನ್ ವಾಯುನೆಲೆ ರಾಜಧಾನಿ ಇಸ್ಲಮಾಬಾದ್ ನಗರದಿಂದ ಹತ್ತು ಕಿಮೀ ದೂರದಲ್ಲಿದೆ. ಹೀಗಾಗಿ ಪಾಕಿಸ್ತಾನ ನಾಯಕರು ಭಯಬಿದ್ದು ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವಂತಿದೆ.
ಭಾರತೀಯ ಸೇನೆಯು ಜೆಟ್ ಮತ್ತು ಡ್ರೋಣ್ ಗಳನ್ನು ಬಳಸಿ ದಾಳಿ ನಡೆಸುತ್ತಿದ್ದು ಹಲವಾರು ಕ್ಷಿಪಣಿಗಳನ್ನು ನಾವು ತಡೆದಿದ್ದೇವೆ. ಸೂಕ್ತ ಪ್ರತ್ಯುತ್ತರ ನೀಡುತ್ತೇವೆ ಎಂದು ಮಿಲಿಟರಿ ವಕ್ತಾರರು ಹೇಳಿದ್ದಾರೆ. ಇದೇ ವೇಳೆ, ಬೆಳಗ್ಗಿನಿಂದ ಪಾಕಿಸ್ತಾನದಲ್ಲಿ ಎಲ್ಲ ರೀತಿಯ ವಿಮಾನ ಸಂಚಾರವನ್ನೂ ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ. ದೇಶದಲ್ಲಿ ಯುದ್ಧ ಸ್ಥಿತಿಯ ವಾತಾವರಣ ಇದ್ದರೂ, ಪಾಕಿಸ್ತಾನವು ತನ್ನ ದೇಶದ ಸಂಚಾರಿ ವಿಮಾನಗಳನ್ನು ನಿಲ್ಲಿಸಿರಲಿಲ್ಲ. ಆಮೂಲಕ ತನ್ನ ದೇಶದ ಜನಸಾಮಾನ್ಯರ ಜೀವದ ಜೊತೆಗೂ ಚೆಲ್ಲಾಟ ನಡೆಸುತ್ತಿದೆ. ಈ ಬಗ್ಗೆ ಭಾರತದ ವಾಯುಪಡೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮೇ 9ರಂದು ಮಾಧ್ಯಮ ಮಾಹಿತಿ ನೀಡುತ್ತಿದ್ದ ಸಂದರ್ಭದಲ್ಲಿ ಹೇಳಿಕೊಂಡಿದ್ದರು.
ಇದೇ ವೇಳೆ, ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರು ಪಾಕಿಸ್ತಾನ ವಾಯುಪಡೆ ಭಾರತದ ವಾಯು ನೆಲೆಗೆ ದಾಳಿ ನಡೆಸಿರುವುದಾಗಿ ಹೇಳಿರುವ ಮಾತನ್ನು ತಳ್ಳಿ ಹಾಕಿದ್ದಾರೆ. ಜಗತ್ತಿಗೆ ಸುಳ್ಳಿನ ಮಾತುಗಳನ್ನು ಹೇಳುತ್ತಿದ್ದಾರೆ. ಶನಿವಾರ ಮುಂಜಾನೆ ಭಾರತ ಸೇನೆಯು ಪಾಕಿಸ್ತಾನದ 26 ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದು ಪಾಕಿಸ್ತಾನ ಹಾರಿಬಿಟ್ಟಿದ್ದ ಹೈಸ್ಪೀಡ್ ಕ್ಷಿಪಣಿಗಳನ್ನು ಹೊಡೆದು ಹಾಕಿದ್ದಾಗಿ ಹೇಳಿದ್ದಾರೆ. ಜಮ್ಮು ಕಾಶ್ಮೀರದತ್ತ ಗುರಿಯಿಟ್ಟು ಹಾರಿಸಿದ್ದ ಡ್ರೋಣ್ ಗಳನ್ನೂ ನಿಷ್ಕ್ರಿಯ ಮಾಡಿರುವುದಾಗಿ ವಿಕ್ರಂ ಮಿಸ್ರಿ ಹೇಳಿದ್ದಾರೆ.
In an apt response to a Pakistan Army officer flagging Indians' critical remarks against its government, the Centre today said such criticism is the hallmark of any open and functioning democracy and added that Pakistan's unfamiliarity with such a culture should not be surprising.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm