ಬ್ರೇಕಿಂಗ್ ನ್ಯೂಸ್
13-05-25 08:47 pm HK News Desk ದೇಶ - ವಿದೇಶ
ನವದೆಹಲಿ, ಮೇ 13 : ಗಡಿಭಾಗದ ಪಂಜಾಬಿನ ಆದಂಪುರ ವಾಯುನೆಲೆಯನ್ನು ಧ್ವಂಸ ಮಾಡಿದ್ದಾಗಿ ಪಾಕಿಸ್ತಾನ ಹೇಳಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆದಂಪುರ ವಾಯುನೆಲೆಗೇ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲ, ಸುಳ್ಳು ಹೇಳುತ್ತಿರುವ ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ. ಮತ್ತೆಂದೂ ಉಗ್ರವಾದ ಬಗ್ಗೆ ಪಾಕಿಸ್ತಾನ ಯೋಚಿಸಲೂ ಬಾರದು. ಆ ರೀತಿ ಯೋಚಿಸಿದವರು ಮತ್ತು ಅವರಿಗೆ ಕುಮ್ಮಕ್ಕು ನೀಡಿದವರ ಮನೆಯೊಳಗೆ ನುಗ್ಗಿ ಹೊಡೆದು ಸಾಯಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಆಪರೇಷನ್ ಸಿಂಧೂರ ಮೂಲಕ ನಾವು ಕೇವಲ, ಉಗ್ರರ ಅಡಗುತಾಣ ಹಾಗೂ ಪಾಕಿಸ್ತಾನದ ವಾಯುನೆಲೆಗಳನ್ನು ಮಾತ್ರ ನಾಶ ಮಾಡಿದ್ದಲ್ಲ, ಅವರ ದುಷ್ಟ ಉದ್ದೇಶಗಳು ಮತ್ತು ಆತ್ಮಸ್ಥೈರ್ಯವನ್ನೂ ಸೋಲಿಸಿದ್ದೇವೆ ಎಂದು ಮೋದಿ ಹೇಳಿದರು. ವಾಯುನೆಲೆಯಲ್ಲಿ ಸೇರಿದ್ದ ವಾಯುಪಡೆ ಸೈನಿಕರಿಗೆ ಸೆಲ್ಯೂಟ್ ಹೊಡೆದು ಅವರ ಜೊತೆಗೆ ಬೆರೆತು ಸಂವಾದ ನಡೆಸಿದ ಪ್ರಧಾನಿ ಮೋದಿ, ಪಾಕಿಸ್ತಾನ ವಿರುದ್ಧ ಆರ್ಭಟಿಸಿದರು.




ಭಾರತದ ಮೇಲೆ ಯಾವುದೇ ಭಯೋತ್ಪಾದಕ ದಾಳಿ ನಡೆದರೂ, ನಮ್ಮದೇ ರೀತಿಯಲ್ಲಿ ತಿರುಗೇಟು ನೀಡುತ್ತೇವೆ. ಇದರ ಜೊತೆಗೆ, ಭಾರತ ಯಾವುದೇ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ. ಮೂರನೆಯದಾಗಿ, ಭಯೋತ್ಪಾದನೆಯನ್ನು ಪೋಷಿಸುವ ಸರ್ಕಾರ ಮತ್ತು ಭಯೋತ್ಪಾದನೆಯನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅವೆರಡೂ ಒಂದೇ ಎಂದು ನೋಡುತ್ತೇವೆ ಎಂದರು.
“ಹರ್ ಘರ್ ಮೇ ಘುಸ್ಕೇ ಮಾರೇಂಗೆ” (“ನಾವು ಪ್ರತಿ ಮನೆಗೂ ನುಗ್ಗಿ ಹೊಡೆಯುತ್ತೇವೆ) ಎಂದು ಹೇಳಿದ ಮೋದಿ, ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಯಾವುದೇ ಸ್ಥಳವೂ ಸುರಕ್ಷಿತವಲ್ಲ ಎಂಬ ಸಂದೇಶವನ್ನು ಭಾರತ ರವಾನಿಸಿದೆ. ನಾವು ಅವರನ್ನು ಧೂಳೀಪಟ ಮಾಡಿದ್ದೇವೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರು ಶಾಂತಿಯುತವಾಗಿ ಬದುಕಲು ಯಾವುದೇ ಸ್ಥಳವೂ ಉಳಿದಿಲ್ಲ ಎಂಬ ಸಂದೇಶವನ್ನು ನಾವು ನೀಡಿದ್ದೇವೆ. ನಮ್ಮ ಧರ್ಮದ ರಕ್ಷಣೆಗಾಗಿ ಶಸ್ತ್ರಗಳನ್ನು ಹಿಡಿಯುವುದು ಸಂಪ್ರದಾಯ. ನಮ್ಮ ಸಹೋದರಿಯರು ಮತ್ತು ಹೆಣ್ಣು ಮಕ್ಕಳ ಸಿಂಧೂರವನ್ನು ಕಸಿದುಕೊಂಡ ಉಗ್ರರನ್ನು ಅವರ ಮನೆಗಳಿಗೆ ನುಗ್ಗಿ ಹೊಡೆದಿದ್ದೇವೆ ಎಂದು ಮೋದಿ ಹೇಳಿದ್ದಾರೆ.
One photograph did all the talking. Prime Minister Narendra Modi’s unannounced visit to Adampur airbase on Tuesday morning was not just symbolic — it was strategic. In one now-viral image, Modi is seen waving to airmen with a MiG-29 fighter and an undamaged S-400 missile defence system clearly visible behind him.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm