ಬ್ರೇಕಿಂಗ್ ನ್ಯೂಸ್
14-05-25 11:08 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಮೇ 14: ಆಪರೇಷನ್ ಸಿಂಧೂರ್ ಸೇನಾ ಕಾರ್ಯಾಚರಣೆಯಲ್ಲಿ ಮೃತಪಟ್ಟ ಉಗ್ರರ ಕುಟುಂಬಸ್ಥರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದ್ದಾರೆ. ಇತ್ತೀಚೆಗೆ ಅಮೆರಿಕ ಕೊಟ್ಟ ಐಎಂಎಫ್ ಸಾಲದ ಹಣವನ್ನು ಪಾಕಿಸ್ತಾನ ಉಗ್ರರಿಗೆ ಪರಿಹಾರ ಕೊಡಲು ಬಳಸಿಕೊಂಡಿದೆ. ಆಮೂಲಕ ಪಾಕಿಸ್ತಾನ ಸರ್ಕಾರ ಉಗ್ರವಾದಿಗಳ ಪರವಾಗಿದೆ ಎನ್ನುವುದನ್ನು ಸಾಬೀತು ಪಡಿಸಿದೆ.
ಜಮ್ಮು ಕಾಶ್ಮೀರದ ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಕುಟುಂಬದ 14 ಸದಸ್ಯರು ಸಾವನ್ನಪ್ಪಿದ್ದರು. ಆಮೂಲಕ ಅಜರ್ ಕುಟುಂಬಕ್ಕೆ 14 ಕೋಟಿ ರೂ. ಪರಿಹಾರ ಸಿಗುವ ಸಾಧ್ಯತೆಯಿದೆ. ಸೇನಾ ಕಾರ್ಯಾಚರಣೆಯಲ್ಲಿ ಮೃತಪಟ್ಟ ಉಗ್ರರ ಅಂತ್ಯಕ್ರಿಯೆಯಲ್ಲು ಪಾಕಿಸ್ತಾನ ಸರ್ಕಾರದ ಪ್ರಮುಖ ಅಧಿಕಾರಿಗಳು, ಸ್ಥಳೀಯ ಶಾಸಕರು, ಸಚಿವರು ಭಾಗಿಯಾಗಿದ್ದರು. ಇದರ ಫೋಟೋಗಳನ್ನು ಭಾರತ ಸೇನೆ ಬಿಡುಗಡೆ ಮಾಡುವ ಮೂಲಕ ಪಾಕಿಸ್ತಾನದ ಕಳ್ಳಾಟವನ್ನು ಬಯಲು ಮಾಡಿತ್ತು. ಇದರ ಬೆನ್ನಲ್ಲೇ ಪಾಕ್ ಸರ್ಕಾರವು ಮೃತಪಟ್ಟ ಉಗ್ರರಿಗೂ ಪರಿಹಾರ ಘೋಷಣೆ ಮಾಡಿದೆ.
ಮಸೂದ್ ಅಜರ್ ನೀಡಿದ ಹೇಳಿಕೆಯಂತೆ, ಆಪರೇಷನ್ ಸಿಂಧೂರ ದಾಳಿಯಲ್ಲಿ ಅವರ ಅಕ್ಕ ಮತ್ತು ಆಕೆಯ ಪತಿ, ಸೋದರಳಿಯ ಮತ್ತು ಆತನ ಹೆಂಡತಿ, ಸೋದರ ಸೊಸೆ ಮತ್ತು ಐವರು ಮಕ್ಕಳು ಮೃತಪಟ್ಟಿದ್ದಾರೆ. ಸದ್ಯ ಕುಟುಂಬದಲ್ಲಿ ಅಜರ್ ಮಾತ್ರ ಉಳಿದಿದ್ದು, ಸರ್ಕಾರ ನೀಡುವ ಪರಿಹಾರ 14 ಕೋಟಿ ಆತನಿಗೆ ಸೇರಲಿದೆ. ಮೌಲಾನ ಮಸೂದ್ ಅಜರ್ 2008ರ ಮುಂಬೈ ದಾಳಿಯ ರೂವಾರಿಯಾಗಿದ್ದು ಜೈಶ್ ಮಹಮ್ಮದ್ ಉಗ್ರವಾದಿ ಸಂಘಟನೆಯ ಸ್ಥಾಪಕನೂ ಆಗಿದ್ದಾನೆ.
ಆಪರೇಷನ್ ಸಿಂಧೂರ್ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಭಾರತೀಯ ಸೇನೆ ಅಧಿಕಾರಿಗಳು ನಾವು ಪಾಕಿಸ್ತಾನದ ನಾಗರಿಕರನ್ನು ಗುರಿಯಾಗಿರಿಸಿಲ್ಲ. ಉಗ್ರರ ಶಿಬಿರಗಳನ್ನು ಮಾತ್ರ ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. 100ಕ್ಕೂ ಅಧಿಕ ಉಗ್ರರು ಮೃತಪಟ್ಟಿದ್ದಾರೆ ಎಂದು ಹೇಳಿದ್ದರು. ಇದೀಗ ಮೃತ ಉಗ್ರರಿಗೂ ಪಾಕ್ ಸರ್ಕಾರ ತಲಾ ಒಂದು ಕೋಟಿ ಪರಿಹಾರ ಘೋಷಿಸಿದೆ. ಊಟಕ್ಕೂ ಗತಿಯಿಲ್ಲದ ಪಾಕಿಸ್ತಾನ ತಲಾ ಒಂದು ಕೋಟಿ ಪರಿಹಾರ ಘೋಷಿಸಿದ್ದು ಅಚ್ಚರಿ ಮೂಡಿಸಿದೆ. ಇತ್ತೀಚೆಗೆ ಐಎಂಎಫ್ ಎರಡು ಬಿಲಿಯನ್ ಡಾಲರ್ ಮೊತ್ತವನ್ನು ಸಾಲದ ರೂಪದಲ್ಲಿ ಪಾಕಿಸ್ತಾನಕ್ಕೆ ನೀಡಿತ್ತು.
A compensation announcement made by Pakistan’s government may end up paying Rs 14 crore to Masood Azhar, who is a UN-designated terrorist and chief of Jaish-e-Mohammed (JeM). As per the reports, around 14 family members of Azhar were killed in a recent strike by the Indian military.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm