ಬ್ರೇಕಿಂಗ್ ನ್ಯೂಸ್
14-05-25 11:08 pm HK News Desk ದೇಶ - ವಿದೇಶ
ಪಾಕಿಸ್ತಾನದ ಉಗ್ರರ ವಿರುದ್ಧ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಭಾಗವಾಗಿದ್ದ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಬಿಜೆಪಿ ಸಚಿವರೊಬ್ಬ ನಾಲಿಗೆ ಹರಿಬಿಟ್ಟಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿ ಕಾಶ್ಮೀರದಲ್ಲಿ ಉಗ್ರ ನೆಲೆಯನ್ನು ಗುರಿಯಾಗಿಸಿ ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಳಿಕ ಮಾಧ್ಯಮಗೋಷ್ಠಿಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಂಡ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಮಧ್ಯಪ್ರದೇಶದ ಸಚಿವರೊಬ್ಬರು ನಾಲಿಗೆ ಹರಿಬಿಟ್ಟು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ
ರಾಯ್ಕುಂಡ ಗ್ರಾಮದಲ್ಲಿ ನಡೆದ ಹಲ್ಮಾ ಕಾರ್ಯಕ್ರಮದಲ್ಲಿ ವಿಜಯ್ ಶಾ ಅವರು ಮಾಡಿದ ಭಾಷಣದ ಕ್ಲಿಪ್ ಅನ್ನು ಕಾಂಗ್ರೆಸ್ ಪಕ್ಷ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಆ ವಿಡಿಯೋದಲ್ಲಿ ಸಚಿವ ವಿಜಯ್ ಶಾ, ಹಿಂದಿಯಲ್ಲಿ, "ಅವರು (ಭಯೋತ್ಪಾದಕರು) ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಒರೆಸುವ ಮೂಲಕ ಅವರನ್ನು ಅಗೌರವಗೊಳಿಸಿದ್ದರು. ಆದರೆ ಅವರಿಗೆ ಸೂಕ್ತ ಉತ್ತರ ನೀಡಲು ನಾವು ಅವರ ಸ್ವಂತ ಸಹೋದರಿಯನ್ನು ಕಳುಹಿಸಿದ್ದೇವೆ" ಎಂದು ಹೇಳುತ್ತಿರುವುದು ಕೇಳಿಬರುತ್ತದೆ.
ಇಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರಗಾಮಿಗಳನ್ನು ಮುಸ್ಲಿಂ ಸಮುದಾಯಕ್ಕೆ ಸೇರಿದ ಮಹಿಳೆ ಕರ್ನಲ್ ಸೋಫಿಯಾ ಖುರೇಷಿ ಮಟ್ಟಹಾಕಿದ್ದಾರೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ.
ಪಾಕಿಸ್ತಾನದಲ್ಲಿ ಭಯೋತ್ಪಾದಕರ ವಿರುದ್ಧ ಭಾರತ ನಡೆಸಿದ ಬಲವಾದ ಪ್ರತೀಕಾರಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸುವಾಗ ವಿಜಯ್ ಶಾ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸದಿದ್ದರೂ, ಅವರ ಹೇಳಿಕೆಗಳನ್ನು ಕರ್ನಲ್ ಸೋಫಿಯಾ ಖುರೇಷಿಯ ಪರೋಕ್ಷ ಉಲ್ಲೇಖವೆಂದು ವ್ಯಾಪಕವಾಗಿ ಅರ್ಥೈಸಲಾಗಿದೆ. ಈ ಹೇಳಿಕೆ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು ಮಾತ್ರವಲ್ಲದೇ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಇನ್ನು ಶಾ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಎಫ್ಐಆರ್ ದಾಖಲಿಸುವಂತೆ ನಿರ್ದೇಶಿಸಿದೆ.
ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ವಿಜಯ್ ಶಾ ಹೇಳಿಕೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ.
ಸೋಫಿಯಾ ಖುರೇಷಿ ಕುಟುಂಬಸ್ಥರ ಮೇಲೆ ದಾಳಿ ಎಂದು ಫೇಕ್ ಪೋಸ್ಟ್ ;
ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ಜಗತ್ತಿಗೆ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಸ್ಪಷ್ಟನೆ ಕೊಟ್ಟಿದ್ದು, ‘ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳಿಗೆ ಆಸ್ಪದ ಕೊಡಬೇಡಿʼ ಎಂದು ಮನವಿ ಮಾಡಿದ್ದಾರೆ.
ಖುರೇಷಿ ಗಂಡನ ಮನೆ ಮೇಲೆ ಆರ್‌ಎಸ್‌ಎಸ್ ಅಟ್ಯಾಕ್ ಮಾಡಿದೆ ಎಂದು ಪೋಸ್ಟ್;
ಅನೀಸ್ ಉದ್ದೀನ್ ಎಂಬ ಕಿಡಿಗೇಡಿಯೊಬ್ಬ ತನ್ನ ‘ಎಕ್ಸ್ʼ ಖಾತೆಯಲ್ಲಿ ಕರ್ನಲ್ ಸೋಫಿಯಾ ಖುರೇಷಿ ಗಂಡನ ಮನೆ ಮೇಲೆ ಆರ್‌ಎಸ್‌ಎಸ್ ಅಟ್ಯಾಕ್ ಮಾಡಿದೆ ಎಂದು ಪೋಸ್ಟ್ ಮಾಡಿದ್ದಾನೆ. ಕರ್ನಲ್ ಸೋಫಿಯಾ ಅವರ ಫೋಟೋ ಜೊತೆಗೆ, ಮನೆಯೊಂದು ಧ್ವಂಸವಾಗಿರುವ ಯಾವುದೋ ಹಳೆ ಪೋಟೋವನ್ನು ಬಳಸಿಕೊಂಡು ಪೋಸ್ಟ್ ಮಾಡಿದ್ದ. ಅಲ್ಲದೆ ದಾಳಿಕೋರರಿಂದ ತಪ್ಪಿಸಿಕೊಳ್ಳಲು ಖುರೇಷಿ ಅವರ ಕುಟುಂಬವನ್ನು ದಿಲ್ಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಬರೆದುಕೊಂಡಿದ್ದ. ದ್ವೇಷಪೂರಿತವಾಗಿದ್ದ ಈ ಪೋಸ್ಟ್ ಸಾಕಷ್ಟು ವೈರಲ್ ಆಗಿತ್ತು. ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ವಿಚಾರ ಗೊತ್ತಾಗುತ್ತಿದ್ದಂತೆ, ಬೆಳಗಾವಿ ಪೊಲೀಸರು ಸೋಫಿಯಾ ಖುರೇಷಿ ಅವರ ಗಂಡನ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸೋಫಿಯಾ ಪತಿ ಕರ್ನಲ್ ತಾಜುದ್ದೀನ್ ಬಾಗೇವಾಡಿ ಅವರ ಮನೆ ಮೇಲೆ ಯಾವುದೇ ಅಟ್ಯಾಕ್ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ, ಸುರಕ್ಷತಾ ಕ್ರಮವಾಗಿ ಸೋಫಿಯಾ ಅವರ ಮನೆಗೆ ಗೋಕಾಕ ಪೊಲೀಸರು ರಕ್ಷಣೆ ಒದಗಿಸಿದ್ದಾರೆ. ಗೋಕಾಕ ಸಿಪಿಐ ಸುರೇಶ್ ಆರ್.ಬಿ. ಅವರು ಕೊಣ್ಣೂರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರು ಅನಗತ್ಯವಾಗಿ ಕುಟುಂಬವನ್ನು ಭೇಟಿಯಾಗದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಇತ್ತ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಅನೀಸ್ ಉದ್ದೀನ್ ಸುಳ್ಳು ಸುದ್ದಿ ಪೋಸ್ಟ್ ಡಿಲಿಟ್ ಮಾಡಿದ್ದಾನೆ. ಸದ್ಯ ಪೊಲೀಸರು ಅನೀಸ್ ಉದ್ದೀನ್ ಪತ್ತೆಗೆ ಬಲೆ ಬೀಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಅವರು, ಈ ರೀತಿಯಲ್ಲಿ ಯಾವುದೇ ಘಟನೆ ನಡೆದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದ್ದು, ಸಾರ್ವಜನಿಕರು ಕಿವಿಗೊಡಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಈ ರೀತಿಯ ದ್ವೇಷಪೂರಿತ ಮತ್ತು ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದು ಕಾನೂನುಬಾಹಿರ. ಇಂತಹ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ;
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಜಗತ್ತಿಗೆ ತಿಳಿಸಿದ ಕರ್ನಲ್ ಸೋಫಿಯಾ ಖುರೇಷಿ ಅವರು ಬೆಳಗಾವಿ ಜಿಲ್ಲೆಯ ಸೊಸೆ. ಕರ್ನಲ್ ಸೋಫಿಯಾ ಖುರೇಷಿ ಅವರ ಪತಿ ಕರ್ನಲ್ ತಾಜುದ್ದೀನ್ ಬಾಗೇವಾಡಿ, ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದವರು. ತಾಜುದ್ದೀನ್ ಬಾಗೇವಾಡಿ ಅವರು ಝಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
Madhya Pradesh minister and senior BJP leader Vijay Shah ignited a political firestorm with his controversial remarks on Colonel Sofia Qureshi, a decorated Indian Army officer who was involved in Operation Sindoor's press briefings.
05-10-25 07:57 pm
HK News Desk
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm