ಬ್ರೇಕಿಂಗ್ ನ್ಯೂಸ್
20-05-25 01:42 pm HK News Desk ದೇಶ - ವಿದೇಶ
ನವದೆಹಲಿ, ಮೇ 20 : ಪಾಕಿಸ್ತಾನ ಜೊತೆಗೆ ಯುದ್ಧ ಬೇಡ ಎಂದಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನದ ಮೀಡಿಯಾಗಳಲ್ಲಿ ಸುದ್ದಿಯಾಗಿದ್ದರು. ಇದೀಗ ಪಾಕ್ ಮೇಲಿನ ದಾಳಿ ಬಗ್ಗೆ ಪ್ರಶ್ನೆಗಳನ್ನು ಎತ್ತಿರುವ ರಾಹುಲ್ ಗಾಂಧಿ ಅವರೂ ಪಾಕ್ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಲವು ಪ್ರಶ್ನೆಗಳನ್ನು ಎತ್ತಿದ್ದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಉತ್ತರ ನೀಡಬೇಕೆಂದು ಆಗ್ರಹ ಮಾಡಿದ್ದಾರೆ. ಆಪರೇಷನ್ ಸಿಂಧೂರ ಅಡಿಯಲ್ಲಿ ಮಿಲಿಟರಿ ಕಾರ್ಯಾಚರಣೆ ಬಗ್ಗೆ ಪಾಕಿಸ್ತಾನಕ್ಕೆ ಮೊದಲೇ ಮಾಹಿತಿ ನೀಡಲಾಗಿತ್ತಾ? ಮಿಲಿಟರಿ ಕಾರ್ಯಾಚರಣೆಯಲ್ಲಿ ಭಾರತ ತನ್ನ ವಿಮಾನಗಳನ್ನು ಕಳೆದುಕೊಂಡಿದೆಯಾ? ಕಳೆದುಕೊಂಡಿದ್ದರೆ ಎಷ್ಟು ವಿಮಾನ? ಅವುಗಳ ಸಂಖ್ಯೆಯನ್ನು ಬಹಿರಂಗಪಡಿಸಬೇಕು. ಈ ಮಾಹಿತಿಯನ್ನು ದೇಶದ ಜನತೆ ತಿಳಿದುಕೊಳ್ಳಬೇಕು ಎಂದು ರಾಹುಲ್ ಗಾಂಧಿ ಪ್ರಶ್ನೆಗಳನ್ನು ಎತ್ತಿದ್ದರು.
ಆದರೆ ರಾಹುಲ್ ಗಾಂಧಿ ಭಾರತದಲ್ಲಿ ಮೋದಿ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತಿರುವುದಕ್ಕಾಗಿ ಪಾಕಿಸ್ತಾನದ ಟಿವಿ ಚಾನೆಲ್ಗಳಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಪಾಕ್ ಸುದ್ದಿ ವಾಹಿನಿಗಳ ಚರ್ಚೆಗಳಲ್ಲೂ ರಾಹುಲ್ ಹೇಳಿಕೆ ಮುಖ್ಯ ವಿಷಯವಾಗಿದೆ. ಮೋದಿ ಅವರಿಗೆ ರಾಹುಲ್ ಗಾಂಧಿ ಅವರು ಮಹತ್ವದ ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕೆ ಮೋದಿ ಸರ್ಕಾರ ಉತ್ತರ ಕೊಡುತ್ತಾ? ಎಂಬ ಪ್ರಶ್ನೆಯನ್ನು ಟಿವಿ ವಾಹಿನಿಗಳು ಎತ್ತಿವೆ.
ರಾಹುಲ್ ಗಾಂಧಿ ಏನು ಹೇಳಿದ್ದರು ?
ವಿದೇಶಾಂಗ ಸಚಿವ ಜೈಶಂಕರ್ ಅವರ ಮೌನವೇ ಹೇಳುವಂತೆ, ಅದು ಶಾಪಗ್ರಸ್ತ. ಹಾಗಾಗಿ ನಾನು ಮತ್ತೊಮ್ಮೆ ಕೇಳುತ್ತೇನೆ, ಆಪರೇಷನ್ ಸಿಂಧೂರ ಅಡಿಯಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸುವ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ?' ಎಂದು ರಾಹುಲ್ ಗಾಂಧಿ ಎಕ್ಸ್ನಲ್ಲಿ ಪ್ರಶ್ನಿಸಿದ್ದಾರೆ. 'ಇದೊಂದು ಲೋಪವಲ್ಲ. ಬದಲಿಗೆ ಇದು ಅಪರಾಧ ಮತ್ತು ರಾಷ್ಟ್ರವು ಸತ್ಯವನ್ನು ತಿಳಿದುಕೊಳ್ಳಬೇಕಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Operation Sindhoora, Rahul Gandhi Questions Modi Government, Becomes a Hero on Pakistani TV After Siddaramaiah. In the aftermath of the Indian Army’s Operation Sindhoora, Congress leader Rahul Gandhi has launched a sharp attack on the Modi government, raising critical questions about its handling of national security and foreign policy. His comments have sparked intense political debate across India, while also gaining significant attention across the border.
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm