ಬ್ರೇಕಿಂಗ್ ನ್ಯೂಸ್
20-05-25 02:36 pm HK News Desk ದೇಶ - ವಿದೇಶ
ನವದೆಹಲಿ, ಮೇ 20 : ಪಾಕಿಸ್ತಾನದ ಪ್ರಜೆಗಳನ್ನು ಹಿಂದಕ್ಕಟ್ಟಲು ಕ್ರಮ ಕೈಗೊಂಡ ಬೆನ್ನಲ್ಲೇ ಅಕ್ರಮ ಬಾಂಗ್ಲಾ ವಲಸಿಗರ ಮೇಲೂ ಕೇಂದ್ರ ಕಣ್ಣಿಟ್ಟಿದೆ. ಇದಕ್ಕಾಗಿ ಮುಂದಿನ 30 ದಿನಗಳಲ್ಲಿ ಅಕ್ರಮ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ವಲಸಿಗರನ್ನು ಗುರುತಿಸಿ ಗಡೀಪಾರು ಮಾಡಲು ಪ್ರತಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಪಡೆಗಳನ್ನು ರಚಿಸುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಈ ನಿರ್ದೇಶನ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳೊಂದಿಗೆ ಸಮನ್ವಯದಿಂದ ಕಾರ್ಯಾಚರಣೆ ನಡೆಸಲು ರಾಜ್ಯ ಸರ್ಕಾರಗಳಿಗೆ ಮುಕ್ತ ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರಗಳು ರಚಿಸಿದ ಈ ವಿಶೇಷ ಕಾರ್ಯಪಡೆಗಳು ಅಕ್ರಮ ವಲಸಿಗರ ಸಮಗ್ರ ವಿವರಗಳನ್ನು ಸಂಗ್ರಹಿಸಬೇಕು. ವಲಸಿಗರ ಹೆಸರು, ಪೋಷಕರು, ವಿಳಾಸ, ಸಂಬಂಧಿಕರು ಸೇರಿದಂತೆ ಇತರ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಬೇಕು.
ಅಕ್ರಮ ವಲಸಿಗರೆಂದು ದೃಢಪಟ್ಟ ನಂತರ, ಬಯೋಮೆಟ್ರಿಕ್ ಮತ್ತು ಜನಸಂಖ್ಯಾ ವಿವರಗಳನ್ನು ದಾಖಲಿಸಿ ವಿದೇಶಿಯರ ಗುರುತಿನ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕೆಂದು ಸಚಿವಾಲಯ ಸೂಚನೆ ನೀಡಿದೆ.
30 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಂಡ ನಂತರ, ಅಕ್ರಮ ವಲಸಿಗರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಅಸ್ಸಾಂ ರೈಫಲ್ಸ್ ಅಥವಾ ಭಾರತೀಯ ಕರಾವಳಿ ಕಾವಲು ಪಡೆಗೆ ಹಸ್ತಾಂತರಿಸಲಾಗುತ್ತದೆ. ನಂತರ ಈ ಪಡೆಗಳು ಅವರನ್ನು ಅವರ ಮೂಲ ದೇಶದ ಅಧಿಕಾರಿಗಳಿಗೆ ವರ್ಗಾಯಿಸುವ ಮೂಲಕ ಅವರನ್ನು ಗಡೀಪಾರು ಮಾಡುತ್ತಾರೆಂದು ಮಾಹಿತಿ ನೀಡಿದೆ.
ರಾಷ್ಟ್ರೀಯ ಭದ್ರತೆ ಮತ್ತು ಇತ್ತೀಚಿನ ಭಯೋತ್ಪಾದಕ ಚಟುವಟಿಕೆಗಳಲ್ಲಿ ವಿದೇಶಿ ಪಾತ್ರದ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಠಿಣ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ.
The Union Ministry of Home Affairs (MHA) has imposed a 30-day limit for states and Union Territories (UT) to authenticate the identities of individuals suspected to be unlawful immigrants from Bangladesh and Myanmar asserting to be Indian citizens. Indian Express reported that following this one-month timeframe if their paperwork is not confirmed, they will be subject to deportation.
05-10-25 07:38 pm
HK News Desk
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm