ಬ್ರೇಕಿಂಗ್ ನ್ಯೂಸ್
21-12-20 04:17 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.21: ಇಂಗ್ಲೆಂಡಿನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಬ್ರಿಟನ್ ನಡುವಿನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಡಿ.31ರ ವರೆಗೂ ಭಾರತ- ಬ್ರಿಟನ್ ನಡುವೆ ವಿಮಾನ ಮತ್ತು ಹಡಗು ಸಂಚಾರವನ್ನು ಸ್ಥಗಿತ ಮಾಡಲಾಗಿದೆ.
ಬ್ರಿಟನ್ ಸೇರಿ ಯುರೋಪಿನಲ್ಲಿ ಮ್ಯೂಟಂಟ್ ವೈರಸ್ ಪತ್ತೆಯಾಗಿದ್ದು, ಇದು ಅತಿ ವೇಗವಾಗಿ ಹರಡುತ್ತಿರುವ ಕಾರಣ ಇಂಗ್ಲೆಂಡ್ ಸರಕಾರ ಕಟ್ಟೆಚ್ಚರ ಘೋಷಣೆ ಮಾಡಿದೆ. ಅಲ್ಲದೆ, ಇಂಗ್ಲೆಂಡಿನಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸೌದಿ ಸೇರಿದಂತೆ ಜಗತ್ತಿನ 59 ರಾಷ್ಟ್ರಗಳು ಬ್ರಿಟನ್ ನಡುವಿನ ಸಂಚಾರವನ್ನು ದಿಢೀರ್ ಬಂದ್ ಮಾಡಿದೆ.

ಇದೀಗ ಪ್ಯಾಸೆಂಜರ್ ವಿಮಾನ ಮತ್ತು ಹಡಗು ಸಂಚಾರವನ್ನು ಮಾತ್ರ ಸ್ಥಗಿತಗೊಳಿಸಲಾಗಿದೆ. ಸರಕು ಸಾಗಾಟದ ವಿಮಾನ, ಹಡಗಿನ ಸಂಚಾರಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿಲ್ಲ. ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಕಾರಣ ದಿಢೀರ್ ಆಗಿ ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಬ್ರೇಕ್ ಹಾಕಲಾಗಿದೆ. ಈ ನಡುವೆ, ಬ್ರಿಟನ್ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲು ಆರಂಭಿಸಲಾಗಿದೆ.

ಭಾರತದಲ್ಲಿ ಕೂಡ ಲಸಿಕೆ ನೀಡುವುದಕ್ಕೆ ಸಿದ್ಧತೆ ನಡೆಸಲಾಗಿದೆ. ಜನವರಿಯಿಂದಲೇ ಮೊದಲ ಹಂತದ ಲಸಿಕೆ ನೀಡಲಾಗುವುದು ಎಂದು ಈಗಾಗ್ಲೇ ಕೇಂದ್ರ ಸರಕಾರ ಹೇಳಿದೆ. ಇದಲ್ಲದೆ, ಮ್ಯೂಟಂಟ್ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಇದನ್ನೂ ಓದಿ: ಇಂಗ್ಲೆಂಡಿನಲ್ಲಿ ಮತ್ತೆ ಕೊರೊನಾ ಆರ್ಭಟ ; ಸೌದಿಯಿಂದ ಎಲ್ಲ ಅಂತಾರಾಷ್ಟ್ರೀಯ ಸಂಚಾರ ಸ್ಥಗಿತ !!
Flights to and from the UK have been banned till December 31 over a new fast-spreading strain of the coronavirus in that country, the government said today as several countries announced similar moves.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm