ಬ್ರೇಕಿಂಗ್ ನ್ಯೂಸ್
03-06-25 10:10 pm HK News Desk ದೇಶ - ವಿದೇಶ
ಸ್ಪೇನ್, ಜೂನ್ 3 : ಆಪರೇಷನ್ ಸಿಂಧೂರ್ ಬಳಿಕ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಭಾಗವಾಗಿ ಭಯೋತ್ಪಾದನೆಯ ವಿರುದ್ಧದ ಶೂನ್ಯ ಸಹಿಷ್ಣುತೆಯ ದೃಢ ನಿಲುವು ಸ್ಪಷ್ಟಪಡಿಸಲು ಹಾಗೂ ಅಂತಾರಾಷ್ಟ್ರೀಯ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವ ಪಕ್ಷಗಳ ನಿಯೋಗವು ಐದು ದೇಶಗಳ ಭೇಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆ ವಿರುದ್ಧ ಜಾಗತಿಕವಾಗಿ ಗಮನ ಸೆಳೆಯುವ ಭಾರತದ ಅಭಿಯಾನದ ಪ್ರಯುಕ್ತ ನಿಯೋಗ ಐದು ರಾಷ್ಟ್ರಗಳ ಭೇಟಿಯ ಅಂತಿಮ ಹಂತವಾಗಿ ಸ್ಪೇನ್ ದೇಶದ ಮ್ಯಾಡ್ರಿಡ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸುವುದರೊಂದಿಗೆ ಆರಂಭಿಸಿತ್ತು. ಮೊದಲ ದಿನ ಸ್ಪೇನ್‌ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದೆ. ಮುಂಬೈ ಭೀಕರ ಉಗ್ರ ದಾಳಿಯಲ್ಲಿ ಬದುಕುಳಿದಿರುವ ಸ್ಪ್ಯಾನಿಷ್ ಉದ್ಯಮಿ ಆರ್ಟುರೊ ಫೆರ್ನಾಂಡಿಸ್ ಅಲ್ವಾರೆಜ್ ಅವರು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಖಂಡಿಸುವಲ್ಲಿ ನಿಯೋಗದ ಜೊತೆಯಾಗಿದ್ದರು.





ಕೊನೆಯ ದಿನ ಯುರೋಪ್ ಕೌನ್ಸಿಲ್‌ನ ಪಾರ್ಲಿಮೆಂಟರಿ ಅಸೆಂಬ್ಲಿಯ ಉಪಾಧ್ಯಕ್ಷ ಆಂಟೋನಿಯೊ ಗುಟೈರೆಜ್ ಲಿಮೋನ್ಸ್ ನೇತೃತ್ವದ ಸೆನೆಟ್ ವಿದೇಶಾಂಗ ವ್ಯವಹಾರಗಳ ಸಮಿತಿ ಹಾಗೂ ಭಯೋತ್ಪಾದನೆ ಪೀಡಿತ 4,800ಕ್ಕೂ ಹೆಚ್ಚು ಸಂತ್ರಸ್ತರೊಂದಿಗೆ ನಿಂತಿರುವ ಸಂಘಟನೆ ಅಸೋಸಿಯಾಸಿಯನ್ ಡಿ ವಿಕ್ಟಿಮಾಸ್ ಡೆಲ್ ಟೆರರಿಸೊ ಹಾಗೂ ಸ್ಪ್ಯಾನಿಷ್ ಸರ್ಕಾರದ ಸದಸ್ಯರು, ಸಂಸದರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದೆ.
ಲಾಟ್ವಿಯಾ ಭೇಟಿ
ಸ್ಪೇನ್ ಭೇಟಿಗೂ ಮುನ್ನ ನಿಯೋಗವು ಲಾಟ್ವಿಯಾಕ್ಕೆ ತೆರಳಿದ್ದು, ಅಲ್ಲಿ ಸಯೀಮಾ(ಲಾಟ್ವಿಯಾ ಗಣರಾಜ್ಯದ ಸಂಸತ್ತು)ದ ವಿದೇಶಾಂಗ ವ್ಯವಹಾರಗಳ ಸಮಿತಿ ಅಧ್ಯಕ್ಷೆ ಎಚ್.ಇ. ಇನಾರಾ ಮುರ್ನಿಸ್, ಭಾರತದೊಂದಿಗೆ ಸಂಸದೀಯ ಸಹಕಾರ ಉತ್ತೇಜಿಸುವ ಸಯೀಮಾ ಸದಸ್ಯರ ಗುಂಪಿನ ಅಧ್ಯಕ್ಷೆ ಎಚ್.ಇ. ಇಂಗ್ರಿಡಾ ಸಿರ್ಸೆನೆ ಹಾಗೂ ಸಮಿತಿಗಳ ಸದಸ್ಯರು, ಹಿರಿಯ ಅಧಿಕಾರಿಗಳು, ಲ್ಯಾಟ್ವಿಯನ್ ಕಡೆಯಿಂದ ಬಾಲ್ಟಿಕ್ ಅಸೆಂಬ್ಲಿ ಪ್ರತಿನಿಧಿಗಳೊಂದಿಗೂ ಅತ್ಯಂತ ಫಲಪ್ರದ ಸಂವಾದ ನಡೆಸಿತು. ಅಲ್ಲದೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಕಾರ್ಯದರ್ಶಿ ಆಂಡ್ರೆಜ್ಸ್ ವಿಲುಮ್ಸನ್ಸ್ ಮತ್ತು ಲ್ಯಾಟ್ವಿಯಾದ UNSC ಕ್ಯಾಂಡಿಡಸಿ 2026-27ರ ವಿಶೇಷ ರಾಯಭಾರಿ ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳು ಮತ್ತು ಮಾನವ ಹಕ್ಕುಗಳ ವಿಭಾಗದ ನಿರ್ದೇಶಕರಾದ ರಾಯಭಾರಿ ಆಂಡ್ರೆಜ್ಸ್ ಪಿಲ್ಡೆಗೋವಿಕ್ಸ್ ಅವರನ್ನೂ ಭೇಟಿ ಮಾಡಿದೆ.
ಲಾಟ್ವಿಯಾ ರಿಗಾದಲ್ಲಿ ಭಾರತವು 2024ರ ಜುಲೈನಲ್ಲಿ ರಾಯಭಾರ ಕಚೇರಿ ತೆರೆದಿದ್ದು, ಇದರ ನಂತರ ಭಾರತದಿಂದ ಲಾಟ್ವಿಯಾಕ್ಕೆ ಭೇಟಿ ಕೊಟ್ಟ ಮೊದಲ ಉನ್ನತ ಮಟ್ಟದ ನಿಯೋಗ ಇದಾಗಿದ್ದು, ಉಭಯ ದೇಶಗಳ ರಾಜತಾಂತ್ರಿಕರ ಈ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಇದರೊಂದಿಗೆ, ಮೇ 22ರಂದು ದೆಹಲಿಯಿಂದ ಪ್ರಯಾಣ ಬೆಳೆಸಿದ್ದ ಸಂಸದೆ ಕನಿಮೋಳಿ ನೇತೃತ್ವದ ನಿಯೋಗವು ರಷ್ಯಾ, ಸ್ಲೊವೇನಿಯಾ, ಗ್ರೀಸ್, ಲಾಟ್ವಿಯಾ ಮತ್ತು ಸ್ಪೇನ್ ಭೇಟಿ ಯಶಸ್ವಿಗೊಳಿಸಿದ್ದು, ಈ ಎಲ್ಲಾ ದೇಶಗಳಿಂದ ಭಯೋತ್ಪಾದನೆ ವಿರುದ್ದದ ಭಾರತದ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು ಮಾತ್ರವಲ್ಲದೇ ಪಹಲ್ಗಾಮ್ ದಾಳಿಗೂ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಭಯೋತ್ಪಾದನೆ ವಿರುದ್ಧ ಪಾಕಿಸ್ತಾನವನ್ನು ಒಂಟಿಯಾಗಿಸುವ ಭಾರತದ ಪ್ರಯತ್ನಕ್ಕೆ ಜಾಗತಿಕ ವಲಯದಲ್ಲಿ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ.
ಐದು ದೇಶಗಳ ಭೇಟಿ ಬಹಳ ಅವಿಸ್ಮರಣೀಯ ಅನುಭವ, ತೃಪ್ತಿ ಕೊಟ್ಟಿದೆ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ದದ ಭಾರತದ ಒಗ್ಗಟ್ಟಿನ ಧ್ವನಿಯನ್ನು ಜಾಗತಿಕ ಸಮುದಾಯಕ್ಕೆ ತಲುಪಿಸುವ ಹಾಗೂ ಭಯೋತ್ಪಾದನೆಯನ್ನು ಪ್ರಾಯೋಜಿಸಿ, ಪೋಷಿಸಿ ಛೂ ಬಿಡುತ್ತಿರುವ ಪಾಕಿಸ್ತಾನದ ಮುಖವಾಡವನ್ನು ಕಳಚುವ ಸರ್ವಪಕ್ಷ ನಿಯೋಗದ ಭಾಗವಾಗಿ ಕರ್ನಾಟಕದಿಂದ ಅದರಲ್ಲಿಯೂ ನಮ್ಮ ದಕ್ಷಿಣ ಕನ್ನಡದಿಂದ ಸಂಸದನಾಗಿ ನಿಯೋಗವನ್ನು ಪ್ರತಿನಿಧಿಸಿ ಈ ದಿಸೆಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ನನಗೆ ಅತ್ಯಂತ ಹೆಮ್ಮೆ ಹಾಗೂ ತೃಪ್ತಿ ತಂದಿದೆ. ಯುರೋಪ್‌ನ ಹಲವು ದೇಶಗಳಿಗೆ ಭೇಟಿ ಕೊಟ್ಟು ಅಲ್ಲಿರುವ ನಮ್ಮ ರಾಜತಾಂತ್ರಿಕ ಅಧಿಕಾರಿಗಳು, ಅಲ್ಲಿನ ಸರ್ಕಾರದ ಪ್ರತಿನಿಧಿಗಳು, ವಿವಿಧ ವಲಯದ ಚಿಂತಕರೊಂದಿಗೆ ನೇರ ಮಾತುಕತೆ ನಡೆಸುವುದಕ್ಕೆ, ಆಡಳಿತಾತ್ಮಕವಾಗಿ ಅವರ ಅನುಭವಗಳಿಂದ ಅನೇಕ ವಿಷಯ ತಿಳಿಯುವ ಅವಕಾಶ ಕೂಡ ಸಿಕ್ಕಿದೆ. ಹೀಗಿರುವಾಗ, ಈ ವಿದೇಶ ಭೇಟಿಯು ವೈಯಕ್ತಿಕವಾಗಿ ನನ್ನ ಪಾಲಿಗೆ ಒಂದು ಹೊಸ ಅನುಭವ ಉಂಟು ಮಾಡುವ ಜತೆಗೆ ಹೆಚ್ಚು ಅವಿಸ್ಮರಣೀಯವಾಗಿಸುವಂತೆ ಮಾಡಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಈ ಹಿನ್ನಲೆಯಲ್ಲಿ ಉನ್ನತ ಮಟ್ಟದ ನಿಯೋಗದಲ್ಲಿ ಸಂಸದನಾಗಿ ತೆರಳುವುದಕ್ಕೆ ಇಂಥದೊಂದು ಅವಕಾಶ ಕೊಟ್ಟ ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ವಿಶೇಷ ಧನ್ಯವಾದ ಸಲ್ಲಿಸಲು ಬಯಸುತ್ತೇನೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಹೇಳಿದ್ದಾರೆ.
MP Brijesh Chowta Joins Kanimozhi Led Delegation in Five Nation Tour to Expose Pakistan Sponsored Terrorism.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am