ಬ್ರೇಕಿಂಗ್ ನ್ಯೂಸ್
13-06-25 02:14 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 13 : ಮಧ್ಯ ಪ್ರಾಚ್ಯದಲ್ಲಿ ಭಾರಿ ಸಂಘರ್ಷ ಸಂಭವಿಸುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಸ್ರೇಲ್, ಇರಾನ್ ರಾಜಧಾನಿಯನ್ನು ಗುರಿಯಾಗಿಸಿ ವೈಮಾನಿಕ ದಾಳಿ ಮಾಡಿದೆ. ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್ ಮೊಹಮ್ಮದ್ ಬಾಘೇರಿ ಸಾವನ್ನಪ್ಪಿದ್ದಾರೆ.
ಶುಕ್ರವಾರ ಮುಂಜಾನೆ ಇರಾನ್ ಮೇಲೆ ದಾಳಿ ನಡೆಸಲಾಗಿದ್ದು, ಇರಾನ್ ಮೇಲೆ ಸೇನಾ ನೆಲೆ, ಪರಮಾಣು ಸ್ಥಾವರ ಗುರಿಯಾಗಿಸಿ 100ಕ್ಕೂ ಹೆಚ್ಚು ಡ್ರೋಣ್ ಹಾರಿಸಲಾಗಿದೆ. ವೈಮಾನಿಕ ದಾಳಿಯಲ್ಲಿ ಇರಾನ್ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ ಜನರಲ್ ಹುಸೇನ್ ಸಲಾಮಿ ಸಾವನ್ನಪ್ಪಿರುವುದಾಗಿ ಇರಾನ್ ಮಾಧ್ಯಮ ವರದಿ ಮಾಡಿದೆ. ಸಲಾಮಿ ದೇಶದ ಅತ್ಯಂತ ಶಕ್ತಿಶಾಲಿ ಕೇಂದ್ರವೊಂದರ ಮುಖ್ಯಸ್ಥರಾಗಿದ್ದರು. ಆರು ವರ್ಷಗಳ ಹಿಂದೆ ಅಧಿಕಾರ ವಹಿಸಿಕೊಂಡ ಸಲಾಮಿ, ಅಮೆರಿಕ ಮತ್ತು ಇಸ್ರೇಲ್ಗೆ ಬಹಿರಂಗ ಬೆದರಿಕೆ ಹಾಕಿದ್ದರು.
ಇರಾನ್ ಅಣ್ವಸ್ತ್ರ ಹಾಗೂ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಟೆಹ್ರಾನ್ ಮೇಲಿನ ದಾಳಿಯನ್ನು ಇರಾನ್ ಖಚಿತಪಡಿಸಿದ್ದು ಭಾರಿ ಸ್ಫೋಟದ ಸದ್ದುಗಳು ಕೇಳಿಸಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಟೆಹ್ರಾನ್ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಬೆನ್ನಲ್ಲೇ ಇರಾನ್‌ನಿಂದ ಪ್ರತಿ ದಾಳಿ ನಿರೀಕ್ಷೆ ಮಾಡುತ್ತಿರುವ ಇಸ್ರೇಲ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.
ಇದೇ ವೇಳೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಕ್ರಿಯೆ ನೀಡಿದ್ದು ಇರಾನ್ ನಡೆಸುತ್ತಿರುವ ಪರಮಾಣು ಯೋಜನೆಗಳನ್ನು ವಿಫಲಗೊಳಿಸುವ ಉದ್ದೇಶದಿಂದ ಆಪರೇಷನ್ ರೈಸಿಂಗ್ ಲಯನ್ ಪ್ರಾರಂಭಿಸಲಾಗಿದೆ ಎಂದು ಘೋಷಿಸಿದ್ದಾರೆ. ಇರಾನ್‌ನ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ. ಅದರಲ್ಲಿ ನಟಾಂಜ್‌ನಲ್ಲಿರುವ ಪ್ರಮುಖ ಮೂಲಸೌಕರ್ಯ ನೆಲೆಗಳೂ ಸೇರಿವೆ. ಪರಮಾಣು ವಿಜ್ಞಾನಿಗಳು ಮತ್ತು ಬ್ಯಾಲಿಸ್ಟಿಕ್ ಗುರಿಯಾಗಿಸಿ ದಾಳಿ ಮಾಡಲಾಗಿದೆ. ನಟಾಂಜ್‌ನಲ್ಲಿರುವ ಪ್ರಮುಖ ಮೂಲಸೌಕರ್ಯ ತಾಣಗಳ ಮೇಲೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್- ಇರಾನ್ ಮಧ್ಯೆ ಶಾಂತಿ ಒಪ್ಪಂದಕ್ಕಾಗಿ ಪ್ರಯತ್ನ ಪಟ್ಟು ವಿಫಲಗೊಂಡ ಬಳಿಕ ತನ್ನ ಸೇನಾ ಪಡೆಯನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದರು.
Iran's Supreme Leader, Ali Khamenei, has appointed General Ahmad Vahidi as the new commander of the Islamic Revolutionary Guard Corps (IRGC) to replace the deceased Hossein Salami.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm