ಬ್ರೇಕಿಂಗ್ ನ್ಯೂಸ್
15-06-25 10:29 pm HK News Desk ದೇಶ - ವಿದೇಶ
ಉತ್ತರಾಖಂಡ, ಜೂ 15 : ಇಂದು ಬೆಳ್ಳಂಬೆಳಗ್ಗೆ ಉತ್ತರಾಖಂಡದ ಕೇದಾರ್‌ನಾಥ್ ಬಳಿ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ.
ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಹೆಲಿಕಾಪ್ಟರ್ ಗೌರಿಕುಂಡ್ ಮತ್ತು ತ್ರಿಜುಗಿನಾರಾಯಣದ ನಡುವೆ ಕೆಡಾರ್ಘಾತಿಯಲ್ಲಿ ಬಿದ್ದಿದೆ. ಹೆಲಿಕಾಪ್ಟರ್ ಬೆಂಕಿಗೆ ಆಹುತಿಯಾಗಿದೆ. ವ್ಯತಿರಿಕ್ತ ಹವಾಮಾನದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.






ಉತ್ತರಾಖಂಡ ಸಿವಿಲ್ ಏವಿಯೇಷನ್ ಡೆವಲಪ್‌ಮೆಂಟ್ ಅಥಾರಿಟಿ (UCADA) ಮಾಹಿತಿ ಪ್ರಕಾರ, ಹೆಲಿಕಾಪ್ಟರ್ ಬೆಳಿಗ್ಗೆ 5.30ಕ್ಕೆ ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟಿತ್ತು. ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹವಾಮಾನ ಸರಿಯಿಲ್ಲದ ಕಾರಣ ಈ ಅಪಘಾತವಾಗಿದ್ದು, ದಟ್ಟವಾದ ಮಂಜು ಕವಿದ ವಾತಾವರಣ ಇತ್ತು ಎಂದು ಹೇಳಿದ್ದಾರೆ.
ಕೇದಾರನಾಥನ ದರ್ಶನ ಮುಗಿಸಿ ಕೇವಲ 10 ನಿಮಿಷದಲ್ಲಿ ಗುಪ್ತಕಾಶಿ ಸೇರಬೇಕಿದ್ದ ಯಾತ್ರಾರ್ಥಿಗಳು ದುರಂತ ಅಂತ್ಯ ಕಂಡಿದ್ದಾರೆ. ದುರ್ಗಮ ಕಾಡಿನಲ್ಲಿ ಬಿದ್ದು ಹೊತ್ತಿ ಉರಿಯುತ್ತಿದ್ದ ಹೆಲಿಕಾಪ್ಟರನ್ನು ಸ್ಥಳೀಯರು ತಮ್ಮ ಜಾನುವಾರುಗಳಿಗೆ ಮೇವು ಕೊಯ್ಯಲು ಹೋದಾಗ ನೋಡಿದ್ದಾರೆ. ಕಳೆದ ಮೇ 2ರಂದು ಕೇದಾರನಾಥ ಮಂದಿರ ತೆರೆದಿದ್ದು, ಈವರೆಗೂ ಲಕ್ಷಾಂತರ ಜನರು ಕೇದಾರನಾಥ ಯಾತ್ರೆ ನಡೆಸಿದ್ದಾರೆ.
ಇನ್ನು ಹೆಲಿಕಾಪ್ಟರ್‌ನ ಪೈಲಟ್ ಕ್ಯಾಪ್ಟನ್ ರಾಜ್‌ವೀರ್ ಸಿಂಗ್ ಚೌಹಾಣ್ (37) ಭಾರತೀಯ ವಾಯು ಸೇನೆಯಲ್ಲಿ 15ಕ್ಕೂ ಹೆಚ್ಚು ವರ್ಷಗಳ ಕಾಲ ಸೇವೆಸಲ್ಲಿಸಿದ್ದರು. ಅವರಿಗೆ ವಿವಿಧ ಭೂ ಪ್ರದೇಶಗಳ ಮೇಲೆ ಹೆಲಿಕಾಪ್ಟರ್ ಹಾರಾಟ ನಡೆಸಿದ್ದ ಅನುಭವ ಇತ್ತು ಎಂದು ತಿಳಿದು ಬಂದಿದೆ.
ರಾಜಾವೀರ್ ಸಿಂಗ್ ಅವರ ತಂದೆ ಗೋವಿಂದ್ ಸಿಂಗ್ ಮಗನ ಬಗ್ಗೆ ಮಾತನಾಡಿ, ಹೆಲಿಕಾಪ್ಟರ್ ದುರಂತದ ಮಾಹಿತಿ ಅವರ ಸಹೋದ್ಯೋಗಿಗಳಿಂದ ಸಿಕ್ಕಿದೆ. ನನ್ನ ಮಗ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ. ನನ್ನ ಸೊಸೆ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ. ಅವರಿಗೆ ನಾಲ್ಕು ತಿಂಗಳ ಅವಳಿ ಮಕ್ಕಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
A helicopter operated by Aryan Aviation crashed in Uttarakhand’s Gaurikund forest area early Sunday morning, killing all seven people on board, including the pilot. The helicopter was flying from Kedarnath Dham to Guptkashi. This marks the fifth helicopter crash in Uttarakhand in just six weeks.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm