ಬ್ರೇಕಿಂಗ್ ನ್ಯೂಸ್
17-06-25 10:47 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 17 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆನಡಾದಲ್ಲಿ ನಡೆಯುತ್ತಿದ್ದ ಜಿ7 ಶೃಂಗಸಭೆಯನ್ನು ಅರ್ಧದಲ್ಲೇ ಬಿಟ್ಟು ವಾಷಿಂಗ್ಟನ್ಗೆ ಮರಳಿದ್ದಾರೆ. ಇಸ್ರೇಲ್ - ಇರಾನ್ ಸಂಘರ್ಷ ನಡುವಲ್ಲೇ ಟ್ರಂಪ್ ಮರಳಿದ್ದು, ಏನೋ ದೊಡ್ಡ ಘಟನೆ ಸಂಭವಿಸಲಿದೆ ಎಂಬ ರೀತಿಯ ಸೂಚನೆ ನೀಡಿದ್ದಾರೆ. ಅಮೆರಿಕ ನೇರವಾಗಿ ಯುದ್ಧಕ್ಕೆ ಪ್ರವೇಶಿಸಲು ತಯಾರಿ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ ಟ್ರಂಪ್ ನೀಡಿರುವ ಹೇಳಿಕೆಯಲ್ಲಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಇರಾನ್-ಇಸ್ರೇಲ್ ನಡುವೆ ಕದನ ವಿರಾಮದ ಪ್ರಯತ್ನಕ್ಕಾಗಿ ಟ್ರಂಪ್ ಜಿ7 ಶೃಂಗಸಭೆಯನ್ನು ತೊರೆದು ವಾಷಿಂಗ್ಟನ್ಗೆ ಹೋಗಿದ್ದಾಗಿ ಹೇಳಿದ್ದಾರೆ. ಇದು ತಪ್ಪಾದ ಗ್ರಹಿಕೆ. ನಾನು ವಾಷಿಂಗ್ಟನ್ಗೆ ಏಕೆ ಹೋಗುತ್ತಿದ್ದೇನೆ ಎಂದು ಅವರಿಗೆ ತಿಳಿದಿಲ್ಲ. ಇದಕ್ಕೂ ಕದನ ವಿರಾಮಕ್ಕೂ ಯಾವುದೇ ಸಂಬಂಧವಿಲ್ಲ. ಅದಕ್ಕಿಂತ ದೊಡ್ಡದನ್ನು ಮಾಡುವುದಕ್ಕೆ ಹೋಗುತ್ತಿದ್ದೇನೆ ಎಂದು ಹೇಳುವ ಮೂಲಕ ಸಂಘರ್ಷದಲ್ಲಿ ಅಮೆರಿಕ ಎಂಟ್ರಿ ನೀಡುವ ಕುರಿತು ಸುಳಿವು ನೀಡಿದ್ದಾರೆ. ಇದಕ್ಕೂ ಮುನ್ನ ಟ್ರಂಪ್ ಅವರು, ಸಾಧ್ಯವಾದಷ್ಟು ಬೇಗ ಇರಾನ್ ರಾಜಧಾನಿ ಟೆಹ್ರಾನ್ ತೊರೆಯುವಂತೆ ಅಲ್ಲಿನ ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಯುದ್ಧದಲ್ಲಿ ಇಸ್ರೇಲ್ಗೆ ಬಹಿರಂಗ ಬೆಂಬಲ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಅಮೆರಿಕ ಈ ದಾಳಿಗಳಲ್ಲಿ ತನ್ನ ಪಾಲುದಾರಿಕೆ ಇಲ್ಲ ಎಂದೇ ಹೇಳಿಕೊಂಡು ಬಂದಿದೆ. ಟ್ರಂಪ್ ಅವರ ಇತ್ತೀಚಿನ ಹೇಳಿಕೆಯಿಂದಾಗಿ ಅಮೆರಿಕ ಈ ಯುದ್ಧದಲ್ಲಿ ಇರಾನ್ ವಿರುದ್ಧ ದೊಡ್ಡ ಹೆಜ್ಜೆ ಇಡಬಹುದು ಎಂದು ಹೇಳಲಾಗುತ್ತಿದೆ.

ಇದೇ ವೇಳೆ, ಇಸ್ರೇಲ್ ನಾಯಕರು ಅಮೆರಿಕದಿಂದ ಬಹಿರಂಗ ಬೆಂಬಲ ಕೋರಿದ್ದಾರೆ. ಇರಾನ್ ಪರಮಾಣು ಕಾರ್ಯಕ್ರಮವನ್ನು ನಾಶ ಮಾಡಲು ಮಿಲಿಟರಿ ಕಾರ್ಯಾಚರಣೆಗೆ ಕೈಜೋಡಿಸುವಂತೆ ಇಸ್ರೇಲ್ ಅಮೆರಿಕಕ್ಕೆ ಮನವಿ ಮಾಡಿತ್ತು. ಜಿ7 ಶೃಂಗಸಭೆ ಸಂದರ್ಭದಲ್ಲಿಯೂ, ಎಲ್ಲಾ ದೇಶಗಳು ಇಸ್ರೇಲ್ ಅನ್ನು ಬಹಿರಂಗ ಬೆಂಬಲಿಸಿವೆ. ಅಲ್ಲದೆ, ಉಭಯ ರಾಷ್ಡ್ರಗಳ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಇರಾನ್ ಮೇಲೆ ಒತ್ತಡ ಹೇರಿವೆ. ಜಿ7 ಸದಸ್ಯರು ಮಾತ್ರ ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇಸ್ರೇಲ್ ತನ್ನ ಆತ್ಮರಕ್ಷಣೆಗಾಗಿ ಕ್ರಮಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.
In a dramatic turn of events, former U.S. President Donald Trump has abruptly left the ongoing G7 summit in Canada and returned to Washington D.C., triggering intense speculation over a possible major development amid rising tensions between Iran and Israel.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am