ಬ್ರೇಕಿಂಗ್ ನ್ಯೂಸ್
03-08-25 04:25 pm HK News Desk ದೇಶ - ವಿದೇಶ
ಮುಂಬೈ, ಆ.3: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ ಸೇರಿದಂತೆ ಹಲವರ ಹೆಸರನ್ನು ಹೇಳುವಂತೆ ತನಿಖಾಧಿಕಾರಿಗಳು ಒತ್ತಡ ಹೇರಿ ನನಗೆ ಚಿತ್ರಹಿಂಸೆ ನೀಡಿದ್ದರು ಎಂದು ಪ್ರಕರಣದಲ್ಲಿ ಖುಲಾಸೆಗೊಂಡಿರುವ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ಮಾಲೆಗಾಂವ್ ಪ್ರಕರಣದಲ್ಲಿ ಎನ್ಐಎ ನ್ಯಾಯಾಲಯವು ತೀರ್ಪು ಪ್ರಕಟಿಸಿದ ಮರುದಿನ ಸಾಧ್ವಿ ತನಗಾದ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.
ಪ್ರಕರಣದ ತನಿಖೆಯ ಸಂದರ್ಭದಲ್ಲಿ ನನಗೆ ತೀವ್ರ ಚಿತ್ರಹಿಂಸೆ ನೀಡಲಾಗಿತ್ತು. ಗುಜರಾತಿನ ಸೂರತ್ ನಲ್ಲಿ ಉಳಿದಿದ್ದಾಗ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರ ಹೆಸರು ಹೇಳುವಂತೆ ತನಿಖಾಧಿಕಾರಿಗಳು ಒತ್ತಾಯಪಡಿಸಿದ್ದರು. ಆದರೆ ನಾನು ಯಾರ ಹೆಸರನ್ನೂ ಉಲ್ಲೇಖಿಸಿರಲಿಲ್ಲ. ಇದು ಸತ್ಯ ವಿಷಯವಾಗಿದ್ದು ಯಾವುದೇ ಕಾರಣಕ್ಕು ಸುಳ್ಳು ಹೇಳುತ್ತಿಲ್ಲ ಎಂದು ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ನಾನು ಈ ಎಲ್ಲ ವಿಚಾರವನ್ನು ಲಿಖಿತವಾಗಿ ದಾಖಲಿಸಿದ್ದೇನೆ. ನನಗೆ ಚಿತ್ರಹಿಂಸೆ ನೀಡುವುದೇ ಅವರ ಮೂಲ ಉದ್ದೇಶವಾಗಿತ್ತು. ಹೆಸರು ಹೇಳದಿದ್ದರೆ ಚಿತ್ರಹಿಂಸೆ ಮುಂದುವರಿಸುವುದಾಗಿ ಬೆದರಿಸುತ್ತಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆರೆಸ್ಸೆಸ್ ನ ಸುದರ್ಶನ್, ಇಂದ್ರೇಶ್ ಹಾಗೂ ರಾಮಮಾಧವ್ ಸೇರಿದಂತೆ ಹೆಸರು ಹೇಳುವಂತೆ ಒತ್ತಾಯಿಸಿದ್ದರು.
ನನಗೆ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ದಾಖಲಾಗಿದ್ದರೂ ಬಂಧಿಸಿಡಲಾಗಿತ್ತು. ನಾನು ಹೇಳಿದ ಎಲ್ಲ ವಿಚಾರವನ್ನೂ ದಾಖಲಿಸಿದ್ದೇನೆ. ಈಗ ಸತ್ಯ ಹೊರಬಂದಿದ್ದು ಹಿಂದುತ್ವಕ್ಕೆ, ಸನಾತನ ರಾಷ್ಟ್ರಕ್ಕೆ ಸಿಕ್ಕ ಗೆಲುವಾಗಿದೆ ಎಂದು ಹೇಳಿದರು.
ಆದರೆ ಸಾಧ್ವಿ ಮಾಡಿರುವ ಆರೋಪವನ್ನು ಎನ್ಐಎ ಕೋರ್ಟ್ ನ್ಯಾಯಾಧೀಶ ಎ.ಕೆ. ಲಹೋಟಿ ಆದೇಶದಲ್ಲಿ ಉಲ್ಲೇಖ ಮಾಡಿಲ್ಲ. ಎನ್ಐಎ ತನಿಖಾ ತಂಡ ಈ ಬಗ್ಗೆ ಯಾವುದೇ ಸಾಕ್ಷ್ಯ ಉಲ್ಲೇಖಿಸಿಲ್ಲ ಎಂದು ಲಹೋಟಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Acquitted in the 2008 Malegaon blast case, former BJP MP Sadhvi Pragya said she was "forced to name" Prime Minister Narendra Modi and Uttar Pradesh Chief Minister Yogi Adityanath in the case. She claimed she was “tortured a lot” for not doing so.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm