ಬ್ರೇಕಿಂಗ್ ನ್ಯೂಸ್
05-08-25 06:59 pm HK News Desk ದೇಶ - ವಿದೇಶ
ನವದೆಹಲಿ, ಆ.5 : ದೇಶದ ಗೃಹ ಸಚಿವರಾಗಿ 2,258 ದಿನಗಳ ಕಾಲ ಅಧಿಕಾರದಲ್ಲಿ ಮುಂದುವರಿಯುವ ಮೂಲಕ ಅಮಿತ್ ಷಾ ಅವರು ಭಾರತದಲ್ಲಿ ದೀರ್ಘ ಕಾಲ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರದಲ್ಲಿ 2019ರ ಮೇ 30ರಂದು ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಇದುವರೆಗೆ ಅಮಿತ್ ಷಾ ಆ ಹುದ್ದೆಯಲ್ಲಿ 2,258 ದಿನಗಳನ್ನು ಪೂರೈಸಿದ್ದಾರೆ. ತನ್ಮೂಲಕ ಮಾರ್ಚ್ 19, 1998ರಿಂದ ಮೇ 22, 2004ರ ವರೆಗೆ 2,256 ದಿನಗಳ ಕಾಲ ದೇಶದ ಗೃಹ ಸಚಿವರಾಗಿ ಹುದ್ದೆ ಅಲಂಕರಿಸಿದ್ದ ಬಿಜೆಪಿಯ ಹಿರಿಯ ನಾಯಕ ಲಾಲ್‌ಕೃಷ್ಣ ಆಡ್ವಾಣಿ ಅವರ ದಾಖಲೆಯನ್ನು ಅಮಿತ್ ಷಾ ಹಿಂದಿಕ್ಕಿದ್ದಾರೆ.
ಈ ಮೊದಲು 1955ರ ಜನವರಿ 10ರಿಂದ 1961ರ ಮಾರ್ಚ್ 7ರ ವರೆಗೆ ಕೇಂದ್ರ ಗೃಹ ಸಚಿವರಾಗಿದ್ದ ಕಾಂಗ್ರೆಸ್ ನಾಯಕ ಗೋವಿಂದ್ ವಲ್ಲಭ್ ಪಂತ್ ಅವರನ್ನೂ ಅಮಿತ್ ಷಾ ಹಿಂದಿಕ್ಕಿದ್ದು, ಅವರು ಆರು ವರ್ಷ 56 ದಿನಗಳ ಕಾಲ ಆ ಹುದ್ದೆಯಲ್ಲಿದ್ದರು. ಅಮಿತ್ ಷಾ 2019ರ ಮೇ 30ರಂದು ಕೇಂದ್ರ ಗೃಹ ಸಚಿವರಾದ ಬಳಿಕ ಮೋದಿಯವರ ಮೂರನೇ ಅವಧಿಯಲ್ಲೂ ಗೃಹ ಸಚಿವರಾಗಿ ಮುಂದುವರಿದಿದ್ದಾರೆ. 2024ರ ಜೂನ್ 10ರಂದು ಎರಡನೇ ಬಾರಿ ಅಧಿಕಾರ ವಹಿಸಿಕೊಂಡಿರುವ ಅಮಿತ್ ಷಾ ಗೃಹ ಸಚಿವಾಲಯದ ಜೊತೆಗೆ, ಕೇಂದ್ರ ಸಹಕಾರ ಸಚಿವರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ದೇಶದ ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದವರು
Amit Shah has now become the longest-serving Union Home Minister in India’s history, having completed 2,258 days in office. This surpasses the previous record held by senior BJP leader L.K. Advani, who served for 2,256 days from March 19, 1998, to May 22, 2004.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 03:27 pm
HK News Staffer
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm