ಬ್ರೇಕಿಂಗ್ ನ್ಯೂಸ್
11-08-25 02:48 pm HK News Desk ದೇಶ - ವಿದೇಶ
ನವದೆಹಲಿ, ಆ.11 : ದೆಹಲಿ ಎನ್‌ಸಿಆರ್ ವಸತಿ ಪ್ರದೇಶದಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ವಸತಿ ಪ್ರದೇಶಗಳಿಂದ ದೂರಕ್ಕೆ ಸ್ಥಳಾಂತರಿಸಬೇಕು ಮತ್ತು ಈ ಆದೇಶವನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಾದರೂ ಕಠಿಣ ಕ್ರಮಕ್ಕೆ ಸಜ್ಜಾಗಬೇಕು ಎಂದು ಸುಪ್ರೀಂಕೋರ್ಟ್ ಸೋಮವಾರ ಆದೇಶ ನೀಡಿದೆ.
ದೆಹಲಿಯಲ್ಲಿ ನಾಯಿ ಕಡಿತ ಮತ್ತು ರೇಬಿಸ್‌ನಿಂದ ಸಾವನ್ನಪ್ಪುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶ ನೀಡಿದೆ.
ಬೀದಿನಾಯಿಗಳ ದಾಳಿಯಿಂದ ಮಕ್ಕಳು, ವೃದ್ಧರು ಗಾಯಗೊಳ್ಳುತ್ತಿದ್ದು ಮತ್ತು ರೇಬಿಸ್ ಪ್ರಕರಣದಿಂದ ಹೆಚ್ಚುತ್ತಿರುವ ಸಾವಿನ ಘಟನೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್.ಮಹಾದೇವನ್ ಅವರಿದ್ದ ಪೀಠವು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಈ ವಿಷಯದಲ್ಲಿ ನ್ಯಾಯಾಲಯವು ಕೇಂದ್ರದ ವಾದವನ್ನು ಮಾತ್ರ ಆಲಿಸಲಿದ್ದು, ಶ್ವಾನಪ್ರಿಯರು ಅಥವಾ ಯಾವುದೇ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ಈ ವಿಷಯದ ಬಗ್ಗೆ ಸಲ್ಲಿಸುವ ಅರ್ಜಿಗಳನ್ನು ಆಲಿಸುವುದಿಲ್ಲ ಎಂಬ ಖಡಕ್ ಸಂದೇಶ ನೀಡಿದೆ.
ನಾವು ಇದನ್ನು ನಮಗಾಗಿ ಮಾಡುತ್ತಿಲ್ಲ, ಇದು ಸಾರ್ವಜನಿಕ ಹಿತಾಸಕ್ತಿಗಾಗಿ. ಆದ್ದರಿಂದ ನಾವು ಹೊರಡಿಸುವ ಆದೇಶದ ವಿರುದ್ಧ ಯಾರೂ ಭಾವನಾತ್ಮಕ ಪ್ರತಿಕ್ರಿಯೆ ನೀಡಬಾರದು. ನಮ್ಮ ಆದೇಶದ ವಿಷಯದಲ್ಲಿ ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಪಾರ್ದಿವಾಲಾ ಹೇಳಿದರು. ದೆಹಲಿಯ ಎಲ್ಲಾ ಪ್ರದೇಶಗಳಿಂದ ನಾಯಿಗಳನ್ನು ಎತ್ತಿಕೊಂಡು ದೂರದ ಸ್ಥಳಗಳಿಗೆ ಸ್ಥಳಾಂತರಿಸಿ. ಸದ್ಯಕ್ಕೆ ಎಲ್ಲಾ ನಿಯಮಗಳನ್ನು ಮರೆತು ಬಿಡಿ ಎಂದು ಅವರು ಅಮಿಕಸ್ ಕ್ಯೂರಿ ಗೌರವ್ ಅಗರ್‌ವಾಲಾ ಅವರಿಗೆ ಸೂಚಿಸಿದರು.
ನ್ಯಾಯಮೂರ್ತಿ ಪಾರ್ದಿವಾಲಾ ಈ ವಿಷಯದ ಬಗ್ಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಅಭಿಪ್ರಾಯ ಕೇಳಿದ್ದು, ಬೀದಿ ನಾಯಿಗಳನ್ನು ಸ್ಥಳಾಂತರಿಸಲು ದೆಹಲಿಯಲ್ಲಿ ಒಂದು ಸ್ಥಳ ಗುರುತಿಸಲಾಗಿತ್ತು, ಆದರೆ ಪ್ರಾಣಿ ಹಕ್ಕುಗಳ ಕಾರ್ಯಕರ್ತರು ತಡೆಯಾಜ್ಞೆ ತಂದಿದ್ದರಿಂದ ಈ ಯೋಜನೆ ಸ್ಥಗಿತಗೊಂಡಿತ್ತು. ಕೆಲವು ಶ್ವಾನಪ್ರಿಯರ ಕಾರಣಕ್ಕೆ ನಾವು ನಮ್ಮ ಮಕ್ಕಳನ್ನು ಬಲಿ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು.
ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕೋರ್ಟ್, ಪ್ರಾಣಿಪ್ರಿಯ ಕಾರ್ಯಕರ್ತರೇ, ರೇಬೀಸ್‌ಗೆ ಬಲಿಯಾದವರನ್ನು ಮರಳಿ ತರಲು ನಿಮಗೆ ಸಾಧ್ಯವಾಗುತ್ತದೆಯೇ? ಎಂದು ಪ್ರಶ್ನಿಸಿ ನಾವು ಬೀದಿ ನಾಯಿಗಳಿಂದ ಸಂಪೂರ್ಣವಾಗಿ ಮುಕ್ತಗೊಳ್ಳಬೇಕಿದೆ ಎಂದು ಹೇಳಿದ್ದಲ್ಲದೆ, ಬೀದಿನಾಯಿಗಳನ್ನು ದತ್ತು ತೆಗೆದುಕೊಳ್ಳಲು ಸಹ ಅನುಮತಿಸುವುದಿಲ್ಲ ಎಂದು ಸೇರಿಸಿತು.
ರಾಷ್ಟ್ರ ರಾಜಧಾನಿ ಪ್ರದೇಶದ ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ್‌ಗಳಾದ್ಯಂತ ವ್ಯಾಪಿಸಿರುವ ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿರುವ ಬೀದಿನಾಯಿಗಳಿಗೆ ತಕ್ಷಣವೇ ಆಶ್ರಯ ಕೇಂದ್ರಗಳನ್ನು ನಿರ್ಮಿಸಿ, ಬೀದಿನಾಯಿಗಳನ್ನು ಅಲ್ಲಿಗೆ ಸ್ಥಳಾಂತರಿಸಿ ನ್ಯಾಯಾಲಯಕ್ಕೆ ಮಾಹಿತಿ ನೀಡಲು ನಿರ್ದೇಶಿಸಲಾಯಿತು. ನಾಯಿ ಆಶ್ರಯ ಕೇಂದ್ರಗಳು, ನಾಯಿಗಳನ್ನು ನಿಭಾಯಿಸುವ, ಸಂತಾನಶಕ್ತಿ ಹರಣ ಮತ್ತು ರೋಗ ನಿರೋಧಕ ಶಕ್ತಿಯನ್ನು ನಿರ್ವಹಿಸುವ ವೃತ್ತಿಪರರನ್ನು ಹೊಂದಿರಬೇಕು ಮತ್ತು ನಾಯಿಗಳನ್ನು ಹೊರಗೆ ಬಿಡಬಾರದು ಎಂದೂ ಕೋರ್ಟ್ ಆದೇಶದಲ್ಲಿ ಹೇಳಿದೆ. ಇದರ ಜೊತೆಗೆ ರೇಬಿಸ್ ಲಸಿಕೆಯ ಲಭ್ಯತೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ನ್ಯಾಯಾಲಯ, ಅಧಿಕಾರಿಗಳು, ವಿಶೇಷವಾಗಿ ದೆಹಲಿ ಸರ್ಕಾರ, ರೇಬಿಸ್ ಲಸಿಕೆಗಳು ಲಭ್ಯವಿರುವ ಸ್ಥಳ, ಲಸಿಕೆಗಳ ಸ್ಟಾಕ್ ಮತ್ತು ಮಾಸಿಕ ಆಧಾರದ ಮೇಲೆ ಚಿಕಿತ್ಸೆಗಾಗಿ ವರದಿ ಮಾಡುವ ವ್ಯಕ್ತಿಗಳ ಸಂಖ್ಯೆಯ ಬಗ್ಗೆ ವಿವರವಾದ ಮಾಹಿತಿ ನೀಡಬೇಕೆಂದೂ ನಿರ್ದೇಶನ ನೀಡಿದೆ.
In a major directive aimed at curbing the growing menace of rabies and stray dog attacks, the Supreme Court on Monday ordered that all stray dogs in residential areas of Delhi-NCR be relocated to shelter facilities. The court further warned that strict action would be taken against any individual or organisation violating the order.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm