ಬ್ರೇಕಿಂಗ್ ನ್ಯೂಸ್
25-12-20 01:49 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.25 : ಜನವರಿ 1ರಿಂದ ದೇಶದಲ್ಲಿ ವಾಹನಗಳ ಫಾಸ್ಟ್ ಟ್ಯಾಗ್ ಕಡ್ಡಾಯವಾಗಲಿದೆ. ನಾಲ್ಕು ಚಕ್ರ ಮತ್ತು ಅದಕ್ಕಿಂತ ಹೆಚ್ಚು ಚಕ್ರಗಳುಳ್ಳ ಎಲ್ಲ ರೀತಿಯ ವಾಹನಗಳು ಫಾಸ್ಟ್ ಟ್ಯಾಗ್ ಕಡ್ಡಾಯ ಹೊಂದಿರಬೇಕು. ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಗೇಟ್ ಪ್ರವೇಶ ಇರುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಫಾಸ್ಟ್ ಟ್ಯಾಗ್ ಉಪಯುಕ್ತವಾಗಿದ್ದು, ವಾಹನಗಳನ್ನು ಟೋಲ್ ಪ್ಲಾಜಾಗಳಲ್ಲಿ ನಿಲ್ಲಿಸುವ ಅಗತ್ಯ ಇರುವುದಿಲ್ಲ. ಇದರಿಂದ ಸಮಯ ಹಾಗೂ ಇಂಧನ ಉಳಿತಾಯವಾಗಲಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಸಹ ಈ ಕುರಿತು ಆದೇಶ ಹೊರಡಿಸಿತ್ತು. ಹಳೆ ವಾಹನ ಸೇರಿ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಎಂದು ತಿಳಿಸಿತ್ತು.

ಈ ಬಗ್ಗೆ ನವೆಂಬರ್, 2020ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಿಂದ ಸುತ್ತೋಲೆ ಹೊರಡಿಸಲಾಗಿದ್ದು , ಫಾಸ್ಟ್ ಟ್ಯಾಗ್ ಮೂಲಕ ಡಿಜಿಟಲ್ ಆಧರಿತ ಶುಲ್ಕ ಪಾವತಿಯನ್ನು ಉತ್ತೇಜಿಸಲಾಗುವುದು. ಜನವರಿ 1, 2021ರಿಂದ ಹಳೆ ವಾಹನಗಳು ಸೇರಿ ಎಂ ಹಾಗೂ ಎನ್ ಮಾದರಿಯ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ ಎಂದು ತಿಳಿಸಿದೆ.

ಡಿಸೆಂಬರ್ 1, 2017ರಿಂದ ನಾಲ್ಕು ಚಕ್ರದ ವಾಹನಗಳ ನೋಂದಣಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗಿತ್ತು. ವಾಹನ ಉತ್ಪಾದನೆ ಕಂಪನಿಗಳು ಅಥವಾ ಡೀಲರ್ ಗಳು ವಾಹನದ ಜೊತೆಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ನೀಡಬೇಕು. ಅಲ್ಲದೆ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಿಸಬೇಕಾದರೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯವಾಗಿರುತ್ತದೆ. ನ್ಯಾಷನಲ್ ಪರ್ಮಿಟ್ ವಾಹನಗಳಿಗೆ ಅಕ್ಟೋಬರ್ 1, 2019ರಿಂದಲೇ ಕಡ್ಡಾಯಗೊಳಿಸಲಾಗಿದೆ ಎಂದು ಸಾರಿಗೆ ಸಚಿವಾಲಯ ಸ್ಪಷ್ಟಪಡಿಸಿದೆ.
Union Minister Nitin Gadkari on Thursday announced that FASTag will be made mandatory for all vehicles in the country from January 1, 2021.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm