ಹೈದರಾಬಾದ್​ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಮೃತದೇಹ ಪತ್ತೆ ; ಆತ್ಮಹತ್ಯೆ ಶಂಕೆ 

21-08-25 12:54 pm       HK News Desk   ದೇಶ - ವಿದೇಶ

ಹೈದರಾಬಾದ್​ನ ಮಿಯಾಪುರ್ ನಗರದಲ್ಲಿ ಒಂದೇ ಕುಟುಂಬದ ಐವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ತೆಲಂಗಾಣ, ಆ 21 : ಹೈದರಾಬಾದ್​ನ ಮಿಯಾಪುರ್ ನಗರದಲ್ಲಿ ಒಂದೇ ಕುಟುಂಬದ ಐವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ಪೊಲೀಸರು ಆತ್ಮಹತ್ಯೆ ಎಂದು ಶಂಕಿಸಿದ್ದು, ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ತಲುಪಿದ ಪೊಲೀಸರು ಮೃತದೇಹಗಳನ್ನು ಪರಿಶೀಲಿಸಿ, ವಶಕ್ಕೆ ಪಡೆದು, ತನಿಖೆ ಆರಂಭಿಸಿದ್ದಾರೆ.

ಮೃತರನ್ನು ಕರ್ನಾಟಕದ ಕಲಬುರಗಿ ಜಿಲ್ಲೆಯ ಸೇಡಂ ಮಂಡಲದ ರಂಜೋಲಿಯ ಲಕ್ಷ್ಮಯ್ಯ (60), ವೆಂಕಟಮ್ಮ (55), ಅನಿಲ್ (32), ಮತ್ತು ಕವಿತಾ (24), 2 ವರ್ಷದ ಮಗು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರೆಲ್ಲರೂ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಸೇಡಂ ಮಂಡಲದ ರಂಜೋಳಿಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಅವರೆಲ್ಲರೂ ಒಂದೇ ಮನೆಯಲ್ಲಿ ಸಾವನ್ನಪ್ಪಿರುವುದರಿಂದ, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಮಿಯಾಪುರ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಮೃತರಿಗೆ ಸಂಬಂಧಿಸಿದ ಮನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವೇ ಸಾವಿಗೆ ಏನು ಕಾರಣ ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಎಲ್ಲಾ ಕೋನಗಳಿಂದ ತನಿಖೆ ನಡೆಯುತ್ತಿದೆ ಎಂದು ಮಿಯಾಪುರ ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರು ಮತ್ತು ಪ್ರದೇಶದ ಸಂಬಂಧಿಕರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಮೃತರ ಕುಟುಂಬದ ಹಿನ್ನೆಲೆ ಮತ್ತು ಅವರಿಗೆ ಏನಾದರೂ ಸಮಸ್ಯೆಗಳಿವೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

In a shocking incident in Hyderabad’s Miyapur locality, the bodies of five members of the same family, including a 2-year-old child, were found under suspicious circumstances on Wednesday.