ಬ್ರೇಕಿಂಗ್ ನ್ಯೂಸ್
22-08-25 01:11 pm HK News Desk ದೇಶ - ವಿದೇಶ
ತಿರುವನಂತಪುರ, ಆ.22 : ಚಿತ್ರನಟಿಯೊಬ್ಬರ ಜೊತೆ ಅನುಚಿತವಾಗಿ ನಡೆದುಕೊಂಡ ಬಗ್ಗೆ ಪಕ್ಷದ ಆಂತರಿಕ ಸಮಿತಿಯಿಂದ ವಿಚಾರಣೆ ಎದುರಿಸುತ್ತಿರುವ ಕೇರಳದ ಕಾಂಗ್ರೆಸ್ ಪಕ್ಷದ ಶಾಸಕ, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಹುಲ್ ಮಮ್ಮುಕುಟ್ಟಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದ್ದು ತನಗೆ ಅಶ್ಲೀಲ ಸಂದೇಶ ಕಳುಹಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಮಂಗಳಮುಖಿಯೊಬ್ಬರು ದೂರಿದ್ದಾರೆ.
ತನ್ನ ಜೊತೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಚಿತ್ರನಟಿ ರಿನಿ ಆನ್ ಜಾರ್ಜ್ ಎಂಬಾಕೆ ಶಾಸಕ ರಾಹುಲ್ ಮಮ್ಮುಕುಟ್ಟಿ ವಿರುದ್ಧ ಗುರುವಾರ ಆಪಾದನೆ ಹೊರಿಸಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಕೇರಳದ ಪ್ರತಿಪಕ್ಷ ನಾಯಕ ವಿ.ಡಿ ಸತೀಶನ್, ಮಹಿಳಾ ಶೋಷಣೆಯಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಕಂಡುಬಂದರೆ ಯಾರನ್ನೂ ಸಹಿಸುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಹುಲ್ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆದರೆ ಪಾಲಕ್ಕಾಡ್ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ.
ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸತೀಷನ್, ರಾಜ್ಯ ಸರ್ಕಾರ ಈಗಾಗಲೇ ಹಲವಾರು ಪ್ರಕರಣಗಳ ವಿಷಯದಲ್ಲಿ ಪ್ರತಿಭಟನೆ ಎದುರಿಸುತ್ತಿದ್ದು ಜೊತೆ ಹಲವಾರು ಹಗರಣಗಳಲ್ಲಿ ಸಿಲುಕಿರುವ ಈ ಸಂದರ್ಭದಲ್ಲಿ ಪ್ರತಿಪಕ್ಷವಾಗಿ ನಮ್ಮ ಸದಸ್ಯರು ಇಂಥ ವಿಷಯಗಳಲ್ಲಿ ಸಿಲುಕಿಕೊಂಡು ಸಮಯ ವ್ಯರ್ಥ ಮಾಡಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜಿನಾಮೆ ಬಳಿಕ ಪ್ರತಿಕ್ರಿಯೆ ನೀಡಿರುವ ರಾಹುಲ್, ನನ್ನ ಮೇಲೆ ರಾಜ್ಯದ ಯಾವುದೇ ದೂರು ದಾಖಲಾಗಿಲ್ಲ. ಯಾರು ಕೂಡ ನನ್ನ ಹೆಸರು ಉಲ್ಲೇಖಿಸಿಲ್ಲ. ಪಾರ್ಟಿ ಕಾರ್ಯಕರ್ತರು ನನ್ನ ಪರವಾಗಿ ನಿಲ್ಲಬೇಕೆಂದು ಹೇಳುವುದಿಲ್ಲ. ಆಕೆ ನನ್ನ ಗೆಳತಿಯಾಗಿದ್ದು ನನ್ನ ಹೆಸರನ್ನು ಉಲ್ಲೇಖವೂ ಮಾಡಿಲ್ಲ. ನನಗೆ ರಾಜಿನಾಮೆ ನೀಡಬೇಕೆಂದು ಪಕ್ಷದಿಂದ ಸೂಚನೆಯೂ ಬಂದಿಲ್ಲ. ಆದರೂ ಆರೋಪ ಬಂದಿದ್ದರಿಂದ ಪಕ್ಷದ ಹುದ್ದೆಗೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ನಟಿ ಶಾಸಕನ ಹೆಸರನ್ನು ಉಲ್ಲೇಖಿಸದಿದ್ದರೂ ಬಿಜೆಪಿ ರಾಹುಲ್ ಬಗ್ಗೆ ಆರೋಪ ಮಾಡಿತ್ತು. ಹೀಗಾಗಿ ರಾಹುಲ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ರಾಜಿನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟಿ ಆನಿ ಜಾರ್ಜ್, ನನ್ನ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ, ಪಕ್ಷದ ವಿರುದ್ಧವೂ ಅಲ್ಲ. ಮಹಿಳೆಯರ ಪರವಾಗಿ ದನಿ ಎತ್ತಿದ್ದೇನೆ. ಮಹಿಳೆಯರು ಕಿರುಕುಳಕ್ಕೆ ಒಳಗಾದಾಗ ಧೈರ್ಯದಿಂದ ಧ್ವನಿ ಎತ್ತಬೇಕು ಎಂದಿದ್ದಾರೆ. ವ್ಯಕ್ತಿಯೊಬ್ಬ ತನ್ನನ್ನು ಹೊಟೇಲ್ ಕೊಠಡಿಗೆ ಕರೆದಿದ್ದಾನೆಂದು ನಟಿ ಆರೋಪಿಸಿದ್ದು ಕೇರಳದಲ್ಲಿ ವಿವಾದ ಎಬ್ಬಿಸಿತ್ತು.
Kerala MLA Rahul Mamkootathil resigned as the president of the state Youth Congress unit on Thursday following allegations of misconduct and inappropriate behaviour towards women on social media.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 01:23 pm
HK News Staffer
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am