ಬ್ರೇಕಿಂಗ್ ನ್ಯೂಸ್
22-08-25 08:07 pm HK News Desk ದೇಶ - ವಿದೇಶ
ಕೊಲಂಬೊ, ಆ.22: ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡು ಬ್ರಿಟನ್ ತೆರಳಿದ್ದರು ಎಂಬ ಆರೋಪದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ 76 ವರ್ಷದ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಕೊಲಂಬೋದಲ್ಲಿ ಸಿಐಡಿ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.
ರನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದಾಗ ಸೆಪ್ಟೆಂಬರ್ 2023ರಲ್ಲಿ ಬ್ರಿಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿಯ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಲಂಡನ್‌ಗೆ ಭೇಟಿ ನೀಡಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕೊಲಂಬೋ ಸಿಐಡಿ ಕಚೇರಿಯಲ್ಲಿ ಹೇಳಿಕೆ ನೀಡಲು ರನಿಲ್ ಅವರು ಶುಕ್ರವಾರ ಬಂದಿದ್ದಾಗಲೇ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 76 ವರ್ಷದ ವಿಕ್ರಮಸಿಂಘೆ ಅವರನ್ನು ಸಿಐಡಿ ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದೆ.
ವಿಕ್ರಮಸಿಂಘೆ ಅವರು ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರಿ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಸೆಪ್ಟೆಂಬರ್ 2023ರಲ್ಲಿ ಲಂಡನ್‌ಗೆ ಭೇಟಿ ನೀಡಲು ಸರ್ಕಾರದ ಹಣ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಕ್ರಮಸಿಂಘೆ ಅವರು ಅಧಿಕೃತ ಕಾರ್ಯಕ್ರಮದ ನಂತರ ಅಮೆರಿಕದಿಂದ ಹಿಂತಿರುಗುತ್ತಿದ್ದರು ಮತ್ತು ಅವರ ಪತ್ನಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರದ ವೆಚ್ಚದಲ್ಲಿ ಲಂಡನ್‌ಗೆ ತೆರಳಿದ್ದರು ಎಂದು ಆರೋಪಿಸಲಾಗಿದೆ.
ಆರು ಬಾರಿ ಲಂಕಾ ಪ್ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರನ್ನು 2022ರ ಜುಲೈನಲ್ಲಿ ಆರ್ಥಿಕ ತುರ್ತುಸ್ಥಿತಿ ಏರ್ಪಟ್ಟಾಗ ಅಧ್ಯಕ್ಷ ಹುದ್ದೆಗೇರಿಸಲಾಗಿತ್ತು. ಸೆಪ್ಟೆಂಬರ್ 2024 ರ ವರೆಗೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದರು. ಇದೇ ಸಂದರ್ಭದಲ್ಲಿ ತನ್ನ ಖಾಸಗಿ ಕಾರ್ಯಕ್ರಮಕ್ಕಾಗಿ ಬ್ರಿಟನ್ ತೆರಳಿದ್ದು ಈಗ ಅವರಿಗೆ ಮುಳುವಾಗಿದೆ. ವಿಕ್ರಮಸಿಂಘೆ ಅವರು ಲಂಕಾದ ಸಿರಿವಂತ ಕುಟುಂಬದ ವ್ಯಕ್ತಿಯಾಗಿದ್ದು ತನ್ನ 29ನೇ ವಯಸ್ಸಿನಲ್ಲೇ ಸಚಿವ ಸ್ಥಾನಕ್ಕೇರಿ ಸಾರ್ವಜನಿಕ ಜೀವನ ಆರಂಭಿಸಿದ್ದರು.
Former Sri Lankan president Ranil Wickremesinghe was arrested on Friday for allegedly "misusing government funds".
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm