ಬ್ರೇಕಿಂಗ್ ನ್ಯೂಸ್
29-08-25 05:20 pm HK News Desk ದೇಶ - ವಿದೇಶ
ನವದೆಹಲಿ, ಆ.29 : ಬಿಹಾರದಲ್ಲಿ ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಸಮಗ್ರ ಪರಿಶೀಲನೆಗೆ ವಿರೋಧ ವ್ಯಕ್ತಪಡಿಸಿ ವೋಟ್ ಚೋರಿ ಹೆಸರಲ್ಲಿ ಪ್ರತಿಭಟನೆಗೆ ಇಳಿದಿರುವ ಕಾಂಗ್ರೆಸ್‌ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತೊಂದು ಇರಿಸು ಮುರಿಸು ಉಂಟುಮಾಡಿದೆ. ಬೆಂಗಳೂರಿನಲ್ಲಿ ನಡೆದ ಕರ್ನಾಟಕದ ಮಾಜಿ ಅಡ್ವೊಕೇಟ್ ಜನರಲ್ ರವಿವರ್ಮ ಕುಮಾರ್ ಅವರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಳೆ ಘಟನೆಯನ್ನು ಉಲ್ಲೇಖಿಸುತ್ತ 1991ರಲ್ಲಿ ತಾನೂ ವಂಚನೆಯಿಂದಾಗಿ ಲೋಕಸಭೆ ಚುನಾವಣೆ ಸೋತಿದ್ದೆ ಎಂದಿದ್ದಾರೆ.
1991ರ ಚುನಾವಣೆಯನ್ನು ಸ್ಮರಿಸುತ್ತ ಕಾನೂನು ಅಡೆತಡೆಗಳು ಎದುರಾದಾಗಲೆಲ್ಲ ರವಿವರ್ಮ ಕುಮಾರ್ ಅವರಿಂದ ಮಾರ್ಗದರ್ಶನ ಪಡೆಯುತ್ತೇನೆ. 1991ರಲ್ಲಿ, ನಾನು ಚುನಾವಣೆಯಲ್ಲಿ ಸ್ಪರ್ಧಿಸಿ ವಂಚನೆಯಿಂದ ಸೋತಿದ್ದೆ. ನಂತರ ರವಿವರ್ಮ ಕುಮಾರ್ ನನಗೆ ಸಹಾಯ ಮಾಡಿದರು ಎಂದು ನೆನಪಿಸಿದರು. ಈ ಮಾತು ವೋಟ್ ಛೋರಿ ಆರೋಪದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿದ್ದು ಬಿಜೆಪಿ ಕೂಡ ಸಿದ್ದರಾಮಯ್ಯರ ಮಾತನ್ನು ಉಲ್ಲೇಖಿಸಿ ಕಾಂಗ್ರೆಸ್ ಹೇಗೆ ಮತ ವಂಚನೆ ಮಾಡುತ್ತಿದೆ ಎಂದು ಸ್ವತಃ ಆ ಪಕ್ಷದವರೇ ಹೇಳಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದೆ.
34 ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದ ಕೊಪ್ಪಳದಿಂದ ಜನತಾದಳ ಜಾತ್ಯತೀತ ಪಕ್ಷದ ಅಭ್ಯರ್ಥಿಯಾಗಿದ್ದರು. 1989ರ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್‌ನಲ್ಲಿ ಗೆದ್ದ ಹಾಲಿ ಶಾಸಕ ಬಸವರಾಜ್ ಪಾಟೀಲ್ ಅನ್ವರಿ ವಿರುದ್ಧ ಸ್ಪರ್ಧಿಸಿದ್ದರು. ಅನ್ವರಿ ಜೆಡಿಎಸ್‌ನಿಂದ ಗೆದ್ದಿದ್ದರೂ 1991ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಾರಿದ್ದರು. ಆ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಕೇವಲ 11,200 ಮತಗಳಿಂದ ಸೋತಿದ್ದರು. ಈ ಚುನಾವಣೆಯಲ್ಲಿ 22,243 ಮತಗಳನ್ನು ತಿರಸ್ಕರಿಸಿದ ಎಣಿಕೆ ಅಧಿಕಾರಿಗಳ ನಿರ್ಧಾರವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು. ಅಲ್ಲದೆ ಪಕ್ಷಾಂತರದ ಆಧಾರದ ಮೇಲೆ ಲೋಕಸಭೆಯ ಸ್ಪೀಕರ್ ಅವರು ಅನ್ವರಿ ಅವರನ್ನು ಅನರ್ಹಗೊಳಿಸಿದ್ದರಿಂದ ಅವರ ಉಮೇದುವಾರಿಕೆಯೇ ಕಾನೂನುಬಾಹಿರ ಎಂದು ಸಿದ್ದರಾಮಯ್ಯ ಆಗ ಹೇಳಿಕೊಂಡಿದ್ದರು. ಅಂದರೆ ಅವರು ಆ ಸಂದರ್ಭದಲ್ಲಿ ಕಾಂಗೆಸ್ ವಿರುದ್ಧ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಂಡಿದ್ದಾರೆ.
ಮತ ಛೋರಿ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಈ ಹೇಳಿಕೆಯು ಮಹತ್ವ ಪಡೆದುಕೊಂಡಿದೆ. ಕಳೆದ ವರ್ಷದ ಕರ್ನಾಟಕ ಮತ್ತು ಮಹಾರಾಷ್ಟ್ರ ಚುನಾವಣೆಗಳಲ್ಲಿ 'ಮತ ವಂಚನೆ' ಆರೋಪ ಹೊರಿಸಿ ಮತ್ತು ಬಿಹಾರದಲ್ಲಿ ʼವಿಶೇಷ ತೀವ್ರ ಪರಿಷ್ಕರಣೆ'ಯನ್ನು ವಿರೋಧಿಸಿ ಪ್ರತಿಭಟನೆ ಕೈಗೊಂಡಿರುವ ಕಾಂಗ್ರೆಸ್‌ಗೆ ಬಿಜೆಪಿ ಈ ಹೇಳಿಕೆ ಉಲ್ಲೇಖಿಸಿ ತಿರುಗೇಟು ನೀಡಿದೆ. ಕಾಂಗ್ರೆಸ್ ಹೇಗೆ ಮತ ವಂಚನೆ ಮಾಡುತ್ತದೆ ಎಂಬುದಕ್ಕೆ ಸಿದ್ದರಾಮಯ್ಯ ಮಾತನಾಡಿದ ಈ ವಿಡಿಯೋ ಸಾಕ್ಷಿ ಹೇಳುತ್ತಿದೆ. ಒಂದು ಕಾಲದಲ್ಲಿ ಕಾಂಗ್ರೆಸ್‌ನ 'ವೋಟ್ ಛೋರಿ' ವಿರುದ್ಧ ಹೋರಾಡಿದ ಅದೇ ವ್ಯಕ್ತಿ ಇಂದು ಕಾಂಗ್ರೆಸ್‌ನಿಂದಲೇ ಮುಖ್ಯಮಂತ್ರಿಯಾಗಿದ್ದಾರೆ ಮತ್ತು 'ವೋಟ್ ಅಧಿಕಾರ' ರ್ಯಾಲಿಯನ್ನು ಮುನ್ನಡೆಸುತ್ತಿದ್ದಾರೆ. ಇದು ತುಂಬ ವ್ಯಂಗ್ಯವಾಗಿ ಕಾಣುತ್ತಿದೆ. ಜನ ಇದನ್ನು ಮರೆಯುವುದಿಲ್ಲ ಎಂದು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಆಗ (1991ರಲ್ಲಿ) ಸಿದ್ದರಾಮಯ್ಯ ಬ್ಯಾಲೆಟ್ ಪೇಪರ್‌ನಲ್ಲಿ ಸೋತ ಕಾರಣ 'ವೋಟ್ ಛೋರಿ' ಎಂದು ಕೂಗಿದ್ದರು. ಇಂದು, ರಾಹುಲ್ ಗಾಂಧಿ 'ಚುನಾವಣಾ ವಂಚನೆ'ಯ ಬಗ್ಗೆ ಮಾತನಾಡುತ್ತಿದ್ದಾರೆ. ಏಕೆಂದರೆ ಭಾರತದ ಜನ ಪ್ರಜಾಪ್ರಭುತ್ವ ಪ್ರಕ್ರಿಯೆ ಮತ್ತು ಹ್ಯಾಕ್ ಮಾಡಲು ಸಾಧ್ಯವಾಗದ ಇವಿಎಂಗಳ ಮೂಲಕ ಕಾಂಗ್ರೆಸ್ ಅನ್ನು ಅಧಿಕಾರದಿಂದ ಹೊರಹಾಕಿದ್ದಾರೆ ಎಂದೂ ಉಲ್ಲೇಖಿಸಿದ್ದಾರೆ.
ಈ ಮಧ್ಯೆ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತ ಬಿಜೆಪಿಯ ಟೀಕೆಗಳನ್ನು ಕಾಂಗ್ರೆಸ್ ತಳ್ಳಿಹಾಕಿದೆ. ಬಿಜೆಪಿ ಮತಗಳವು ಆರೋಪವನ್ನು ತಳ್ಳಿಹಾಕಲು 30 ವರ್ಷಗಳ ಹಿಂದೆ ನಡೆದದ್ದನ್ನು ಅನಗತ್ಯವಾಗಿ ಪ್ರಸ್ತಾಪಿಸುತ್ತಿದೆ ಎಂದು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರು ಆಗಿನ ಜೆಡಿಎಸ್ ಶಾಸಕರ ನಡುವಿನ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ, ಆದರೆ ಈಗ ಚುನಾವಣಾ ಆಯೋಗವನ್ನು ಬಿಜೆಪಿ ನಿಯಂತ್ರಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.
The Congress - which has accused the Bharatiya Janata Party and Election Commission of 'collusion' to commit voter fraud before the Bihar election - faced an internal check on those protests Friday after Karnataka Chief Minister Siddaramaiah said 'fraud' lost him the 1991 Lok Sabha election.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am