ಬ್ರೇಕಿಂಗ್ ನ್ಯೂಸ್
07-09-25 08:33 pm HK News Desk ದೇಶ - ವಿದೇಶ
ನವದೆಹಲಿ, ಸೆ.7: ಭಾರತದಲ್ಲಿ ಹಲವಾರು ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಗಡೀಪಾರು ಮಾಡುವ ಸಾಧ್ಯತೆ ಕಂಡುಬಂದಿದೆ. ಬ್ರಿಟನ್ ನಲ್ಲಿ ಅಡಗಿರುವ ಹೈ ಪ್ರೊಫೈಲ್ ವ್ಯಕ್ತಿಗಳನ್ನು ಭಾರತಕ್ಕೆ ಹಸ್ತಾಂತರಿಸುವಂತೆ, ಬ್ರಿಟನ್ ಸರ್ಕಾರವನ್ನು ಕೋರಲಾಗಿದ್ದು ಅಲ್ಲಿನ ನ್ಯಾಯಾಲಯವೂ ಒಪ್ಪಿಗೆ ನೀಡಿದೆ.
ಆರೋಪಿಗಳನ್ನು ಭಾರತಕ್ಕೆ ಹಸ್ತಾಂತರಿಸಿದರೆ ಅವರನ್ನು ತಿಹಾರ್ ಜೈಲಿನಲ್ಲಿ ವಿಶೇಷ ವ್ಯವಸ್ಥೆ ಮಾಡಿ ಇಟ್ಟುಕೊಳ್ಳುವುದಾಗಿ ಭಾರತ ಸರ್ಕಾರ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬ್ರಿಟನ್ ನಿಂದ ತಜ್ಞರ ತಂಡವೊಂದು ದೆಹಲಿಯ ತಿಹಾರ್ ಜೈಲಿನ ಭದ್ರತೆ ಬಗ್ಗೆ ಮಾಹಿತಿ ಸಂಗ್ರಹಿಸಿ ಹೋಗಿದೆ ಎಂದು ತಿಳಿದುಬಂದಿದೆ. ಆದರೆ ತಮ್ಮ ಗಡೀಪಾರಿನಿಂದ ತಪ್ಪಿಸಲು ಇವರಿಬ್ಬರೂ, ಭಾರತದ ಜೈಲುಗಳ ಅವ್ಯವಸ್ಥೆಯನ್ನು ಉಲ್ಲೇಖಿಸಿದ್ದರು. ಅಲ್ಲಿಗೆ ಕಳಿಸಿದರೆ ಕಾಯಿಲೆ ಬಿದ್ದು ಸಾಯುತ್ತೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬ್ರಿಟನ್ ನ್ಯಾಯಾಲಯಕ್ಕೆ ವರದಿ ನೀಡುವುದಕ್ಕಾಗಿ ಅಲ್ಲಿನ ಜೈಲು ಅಧಿಕಾರಿಗಳು ಇತ್ತೀಚೆಗೆ ತಿಹಾರ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತದ ಜೈಲಿನ ಬಗ್ಗೆ ಆತಂಕ ವ್ಯಕ್ತವಾಗಿದ್ದರಿಂದ ಗಡೀಪಾರು ಆದೇಶ ಆಗಿದ್ದರೂ ನೀರವ್ ಮೋದಿಯನ್ನು ಬ್ರಿಟನ್ ಜೈಲಿನಲ್ಲಿಯೇ ಇರಿಸಲಾಗಿದೆ. ಇದರ ಬೆನ್ನಲ್ಲೇ ಬ್ರಿಟಿಷ್ ಅಧಿಕಾರಿಗಳು ಬಂದು ಜೈಲಿನ ಸ್ಥಿತಿಗಳ ಕುರಿತು ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ವಂಚಕರಿಗೆ ಬಯಸಿದರೆ ವಿಶೇಷ ವ್ಯವಸ್ಥೆಯನ್ನೂ ಮಾಡುವುದಾಗಿ ಭಾರತದ ಅಧಿಕಾರಿಗಳು ಭರವಸೆ ನೀಡಿದ್ದಾರೆ. ವಂಚನೆ ಎಸಗಿ ಹಲವು ದೇಶಗಳಿಗೆ ಪರಾರಿಯಾಗಿರುವ 178 ಮಂದಿ ಭಾರತೀಯರ ಗಡೀಪಾರಿಗೆ ಪ್ರಯತ್ನ ನಡೆಸಲಾಗುತ್ತಿದೆ. ಈ ಪೈಕಿ 20 ಮಂದಿ ಬ್ರಿಟನ್ ನಲ್ಲಿ ನೆಲೆಸಿದ್ದಾರೆಂದು ತಿಳಿದುಬಂದಿದೆ.
ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13800 ಕೋಟಿ ರು. ವಂಚಿಸಿದ್ದರೆ, ವಿಜಯ್ ಮಲ್ಯ ಎಸ್‌ಬಿಐ ಸೇರಿದಂತೆ ವಿವಿಧ ಬ್ಯಾಂಕ್‌ಗಳಿಗೆ 9000 ಕೋಟಿ ರು. ವಂಚಿಸಿ ಪರಾರಿಯಾಗಿದ್ದಾರೆ.
Efforts to bring back high-profile economic offenders such as Nirav Modi and Vijay Mallya from the United Kingdom have gained momentum with a team from Britain's Crown Prosecution Service (CPS) recently visiting Tihar Jail, an official said on Sunday.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 12:58 pm
HK News Staffer
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 01:23 pm
HK News Staffer
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am