ಬ್ರೇಕಿಂಗ್ ನ್ಯೂಸ್
08-09-25 06:07 pm HK News Desk ದೇಶ - ವಿದೇಶ
ನವದೆಹಲಿ, ಸೆ.8 : ಕೈದಿಯೊಬ್ಬ ನಿಗದಿತ ಏಳು ವರ್ಷಗಳ ಶಿಕ್ಷೆ ಪೂರ್ಣಗೊಳಿಸಿದ ಬಳಿಕವೂ ಅಧಿಕಾರಿಗಳು ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳ ಕಾಲ ಜೈಲಿನಲ್ಲಿರಿಸಿದ್ದಕ್ಕೆ ಪ್ರತಿಯಾಗಿ 25 ಲಕ್ಷ ರು. ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು, ಪ್ರಕರಣ ಸಂಬಂಧಿಸಿ ಮಧ್ಯಪ್ರದೇಶ ಸರ್ಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಲ್ಲದೆ, ವ್ಯಕ್ತಿಗೆ ಪರಿಹಾರ ನೀಡಲು ಆದೇಶಿಸಿದೆ. ಅಪರಾಧಿ ಸೋಹನ್ ಸಿಂಗ್ ಪರ ವಾದ ಮಂಡಿಸಿದ ವಕೀಲ ಮಹ್ಫೂಜ್ ನಜ್ಕಿ, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪೂರ್ಣಗೊಂಡ ನಂತರವೂ ನಾಲ್ಕು ವರ್ಷ ಏಳು ತಿಂಗಳು ಹೆಚ್ಚುವರಿಯಾಗಿ ಜೈಲಿನಲ್ಲಿ ಕಳೆದಿದ್ದಾರೆ. ಅವರು ಒಟ್ಟು 11 ವರ್ಷ 7 ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಅವರಿಗೆ ವಿಧಿಸಿದ್ದ ಜೈಲು ಶಿಕ್ಷೆ ಕೇವಲ 7 ವರ್ಷಗಳಾದರೂ ಹೆಚ್ಚುವರಿಯಾಗಿ ಜೈಲಿನಲ್ಲಿ ಇರಿಸಲಾಗಿದೆ ಎಂದು ಆಕ್ಷೇಪಿಸಿದ್ದಾರೆ.
ತಪ್ಪು ದಾರಿಗೆಳೆಯುವ ಅಫಿಡವಿಟ್ ಸಲ್ಲಿಸಿದ್ದಕ್ಕಾಗಿ ರಾಜ್ಯ ಸರ್ಕಾರದ ಪರ ವಕೀಲರನ್ನು ತರಾಟೆಗೆ ತೆಗೆದಿದ್ದಲ್ಲದೆ, 25 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿತು. ಇದೇ ರೀತಿ ಅಕ್ರಮವಾಗಿ ಜೈಲಿನಲ್ಲಿ ಯಾರನ್ನಾದರೂ ಇರಿಸಲಾಗಿದೆಯೇ ಎಂದು ಪರಿಶೀಲಿಸಲು ಮಧ್ಯಪ್ರದೇಶ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿತು. ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಅಪರಾಧಿಗಳನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಹೇಳಿದೆ.
ಇದಕ್ಕೂ ಮೊದಲು ಏಳು ವರ್ಷಗಳ ಸಂಪೂರ್ಣ ಶಿಕ್ಷೆಯನ್ನು ಅನುಭವಿಸಿದ ನಂತರವೂ ನಾಲ್ಕು ವರ್ಷ ಹೆಚ್ಚು ಕಾಲ ಜೈಲಿನಲ್ಲಿ ಏಕೆ ಇದ್ದರು ಮತ್ತು ಅಂತಹ ಗಂಭೀರ ಲೋಪ ಹೇಗೆ ಸಂಭವಿಸಿತು ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು ಆಗಸ್ಟ್ 22 ರಂದು ರಾಜ್ಯ ಸರ್ಕಾರಕ್ಕೆ ವರದಿ ಕೇಳಿತ್ತು. ಸರ್ಕಾರದ ಪರ ವಕೀಲರ ವರದಿ ಮತ್ತು ತಪ್ಪಾದ ಅಫಿಡವಿಟ್ ನೋಡಿ ಗರಂ ಆಗಿರುವ ನ್ಯಾಯಪೀಠವು ಸರ್ಕಾರಕ್ಕೆ ಛೀಮಾರಿ ಹಾಕಿದ್ದಲ್ಲದೆ, 25 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.
In a strong rebuke to the Madhya Pradesh government, the Supreme Court on Monday directed the state to pay ₹25 lakh in compensation to a man who was wrongfully kept in prison for four years and seven months beyond his legally mandated sentence.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm